ಅನಂತ ಕುಮಾರ್ ವಿಧಿವಶ; ಪ್ರಧಾನಿ ಮೋದಿ ಸಂಜೆ ಬೆಂಗಳೂರಿಗೆ


Team Udayavani, Nov 12, 2018, 6:34 AM IST

minister.jpg

ಬೆಂಗಳೂರು:ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್(59ವರ್ಷ) ಸೋಮವಾರ ವಿಧಿವಶರಾಗಿದ್ದು, ಇಂದು ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಬೆಳಗ್ಗೆ 7ಗಂಟೆಯಿಂದ ಬಿಜೆಪಿ ಕಚೇರಿಯಲ್ಲಿ, ನಂತರ 10ಗಂಟೆಗೆ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

1959 ಜುಲೈ 22ರಂದು ಬೆಂಗಳೂರಿನಲ್ಲಿ ಅನಂತಕುಮಾರ್ ಜನನ. ತಂದೆ ನಾರಾಯಣ ಶಾಸ್ತ್ರಿ, ತಾಯಿ ಗಿರಿಜಾ ಶಾಸ್ತ್ರಿ. ಹುಬ್ಬಳ್ಳಿಯ ಕೆಎಸ್ ಕಲಾ ಕಾಲೇಜಿನಲ್ಲಿ ಬಿಎ ಪದವಿ ಪಡೆದಿದ್ದರು.ಜೆಎಸ್ ಎಸ್ ವಿವಿಯಲ್ಲಿ ಕಾನೂನು ಪದವಿ ಪಡೆದಿದ್ದ ಅನಂತ್ ಕುಮಾರ್ ಅವರು ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ಅನಂತಕುಮಾರ್ ಬಿಜೆಪಿಯ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾಗಿದ್ದರು. 1996ರಲ್ಲಿ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ 1996ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. ಬಳಿಕ ವಾಜಪೇಯಿ ಸರ್ಕಾರದಲ್ಲಿ ವಿಮಾನಯಾನ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ನಾಳೆ ಚಾಮರಾಜಪೇಟೆಯ ಹಿಂದೂರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅನಂತಕುಮಾರ್ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ವರದಿ ಹೇಳಿದೆ. ಅನಂತಕುಮಾರ್, ಡಾ.ತೇಜಸ್ವಿನಿ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು. ಐಶ್ವರ್ಯ ಮತ್ತು ವಿಜೇತ.

ಸಂಜೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು, ಅನಂತಕುಮಾರ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಾಲಾ ಕಾಲೇಜುಗಳಿಗೆ ರಜೆ :
ಸಚಿವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಜೊತೆಗೆ ಸರಕಾರಿ ಕಚೇರಿಗಳಿಗೂ ಒಂದು ದಿನಗಳ ರಜೆಯನ್ನು ಘೋಷಿಸಿದ್ದು ಮೂರು ದಿನಗಳ ಕಾಲ ಶೋಕಾಚರಣೆಯನ್ನು ನಡೆಸಲಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.