ಅನಂತಕುಮಾರ್ ಅಂತಿಮ ದರ್ಶನಕ್ಕಾಗಿ ಕೇಂದ್ರ ಸಚಿವರ ದಂಡು
Team Udayavani, Nov 12, 2018, 9:57 AM IST
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಎಚ್.ಎನ್.ಅನಂತಕುಮಾರ್ (59) ಅವರು ಸೋಮವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ವಜೂಭಾಯ್ ವಾಲಾ ಸೇರಿದಂತೆ ಹಲವು ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ಇನ್ಫೋಸಿಸ್ ನ ಸುಧಾಮೂರ್ತಿ ಅವರು ಅನಂತ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ವೇಳೆ ಕಣ್ಣೀರಿಟ್ಟ ಪ್ರಸಂಗ ನಡೆಯಿತು. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್, ಸಂಸದ ಪ್ರಹ್ಲಾದ ಜೋಶಿ, ನಟಿ, ಬಿಜೆಪಿ ನಾಯಕಿ ತಾರಾ, ಸುರೇಶ್ ಕುಮಾರ್, ಆರ್.ಅಶೋಕ್, ವಿ.ಸೋಮಣ್ಣ, ಸಿಟಿ ರವಿ ಅನಂತಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಕೇಂದ್ರ ಸಚಿವರ ಆಗಮನ :
ಎಲ್ ಕೆ ಅಡ್ವಾಣಿ, ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್ ಸೇರಿದಂತೆ ಕೇಂದ್ರದ ಹಲವು ಸಚಿವರು ಬೆಂಗಳೂರಿಗೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ವರದಿ ತಿಳಿಸಿದೆ. ಇಂದು ಗೃಹ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗಮಿಸುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಸುತ್ತೂರು ಶ್ರೀ, ಖರ್ಗೆ, ಸಿದ್ದರಾಮಯ್ಯ ಸಂತಾಪ:
ಅನಂತ ಕುಮಾರ್ ಅವರ ನಿಧನಕ್ಕೆ ಸುತ್ತೂರು ಶ್ರೀಗಳು, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು