ಸಾಗುವಳಿ ಚೀಟಿ ನೀಡೋವರೆಗೂ ಹೋರಾಟ


Team Udayavani, Nov 13, 2018, 4:46 PM IST

cta-1.jpg

ಚಿತ್ರದುರ್ಗ: ಭೂರಹಿತ ಕುಟುಂಬಗಳಿಗೆ ಸಾಗುವಳಿ ಚೀಟಿ ನೀಡುವ ತನಕ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯ ಪ್ರಜಾಶಕ್ತಿ ಬೋರಯ್ಯ ಎಚ್ಚರಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಅರಣ್ಯ ಹಕ್ಕು ಸಮಿತಿಗಳ ಜಿಲ್ಲಾ ಒಕ್ಕೂಟ, ಬಗರ್‌ ಹುಕುಂ ಸಾಗುವಳಿದಾರರ ಹೋರಾಟ ಸಮಿತಿ, ಕರ್ನಾಟಕ ಆದಿವಾಸಿ ಒಕ್ಕೂಟದ ವತಿಯಿಂದ ಭೂಮಿ ಹಕ್ಕಿಗಾಗಿ ಭಾನುವಾರದಿಂದ ಆರಂಭಿಸಿರುವ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಕಳೆದ ಮೂರ್‍ನಾಲ್ಕು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಭೂರಹಿತ ಬಡ ಕುಟುಂಬಗಳಿಗೆ ಹಾಗೂ ಅರಣ್ಯ ಹಕ್ಕು ವಾಸಿಗಳಿಗೆ ಕೂಡಲೇ ಸರ್ಕಾರ ಸಾಗುವಳಿ ಚೀಟಿ ನೀಡುವ ಮೂಲಕ ಭೂಒಡೆತನ ನೀಡಬೇಕು. ಸರ್ಕಾರ ನಮಗೆ ಲಿಖೀತವಾಗಿ ಉತ್ತರ ನೀಡುವ ತನಕ ಧರಣಿ ಸತ್ಯಾಗ್ರಹವನ್ನು ನಿಲ್ಲಿಸುವುದಿಲ್ಲ ಎಂದು ಗುಡುಗಿದರು.

ಕಳೆದ ವರ್ಷ ಇದೇ ಜಾಗದಲ್ಲಿ 23 ದಿನ ಚಳವಳಿ ನಡೆಸಲಾಗಿತ್ತು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಆಂಜನೇಯ ಅವರ ಅಣಕು ಶವಯಾತ್ರೆ, ಭಿಕ್ಷಾಟನೆ, ಅರೆಬೆತ್ತಲೆ ಮೆರವಣಿಗೆ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಸರ್ಕಾರದ ಎದುರು ನಮ್ಮ ಬೇಡಿಕೆಗಳನ್ನು ಮಂಡಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲೆಯ ಆರು ತಾಲೂಕುಗಳಲ್ಲಿ 27 ದಿನಗಳ ಕಾಲ 408 ಗ್ರಾಮಗಳಲ್ಲಿ ಜಾಗೃತಿ ಜಾಥಾ ಮಾಡಿದ್ದೇವೆ. 

ಐದು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಜಿಲ್ಲಾಧಿಕಾರಿ, ಉಪವಿಭಾಗಾಕಾರಿ ಸಾಗುವಳಿ ಚೀಟಿ ಸಂಬಂಧ ಸಭೆ ನಡೆಸಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಭೂಮಿ ಸಾಗುವಳಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು. ಹಿರಿಯೂರು, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಚಿತ್ರದುರ್ಗದಲ್ಲಿ ಅರ್ಜಿಗಳನ್ನು ಪರಿಶೀಲಿಸದೆ ಬಾಕಿ ಉಳಿಸಿಕೊಳ್ಳಲಾಗಿದೆ. ಸರ್ಕಾರ ಉನ್ನತ ಮಟ್ಟದ ಸಮಿತಿ ಸಭೆ ಕರೆದು ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಬೇಕು.

ಜಿಲ್ಲೆಯ ಆರು ತಾಲೂಕುಗಳಲ್ಲಿ 1990-91, 1998-99ನೇ ಸಾಲಿನಲ್ಲಿ 1,12, 964 ಅರ್ಜಿಗಳನ್ನು ಬಗರ್‌ಹುಕುಂ ಸಮಿತಿಗೆ  ಸಲ್ಲಿಸಲಾಗಿದೆ. ಎಲ್ಲ ಅರ್ಹತೆ ಇರುವ 53,322 ಅರ್ಜಿಗಳನ್ನು ಪರಿಶೀಲನೆ ಮಾಡದೆ 28 ವರ್ಷಗಳಿಂದ ಸರ್ಕಾರ ಬಾಕಿ ಉಳಿಸಿಕೊಂಡಿದೆ. ತುರ್ತು ಕ್ರಮ ಜರುಗಿಸಿ ಸಾಗುವಳಿ ಚೀಟಿ ವಿತರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು. ಅರಣ್ಯ ಹಕ್ಕು ಕಾಯ್ದೆಯಡಿ ಜಿಲ್ಲೆಯಲ್ಲಿ 5573 ಅರ್ಜಿಗಳನ್ನು ಸಲ್ಲಿಸಿದ್ದು, ಕೇವಲ 347 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಬಾಕಿ ಉಳಿಸಿಕೊಂಡಿರುವ 5526 ಅರ್ಜಿಗಳ ಪರಿಶೀಲನೆ ಪೂರ್ಣಗೊಳಿಸಿ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ನುಲೇನೂರು ಶಂಕರಪ್ಪ ಮಾತನಾಡಿ, ಭೂಮಿ ಮತ್ತು ವಸತಿ ಹಕ್ಕು
ವಂಚಿತರಿಗೆ ಸಾಗುವಳಿ ಚೀಟಿಗಳನ್ನು ನೀಡಬೇಕಾದರೆ ಮೊದಲು ಕಾನೂನು ತೊಡಕುಗಳನ್ನು ನಿವಾರಿಸಬೇಕು. ಒಡೆತನದ ಹಕ್ಕು ನೀಡುವ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. 

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯ ಶಿವಕುಮಾರ್‌ ಗುಳಗಟ್ಟ, ಎಚ್‌.ಎನ್‌. ಶಿವಮೂರ್ತಿ,
ನರಸಿಂಹಮೂರ್ತಿ, ಕರಿಯಪ್ಪ ಗುಡಿಮನಿ, ಶಫಿವುಲ್ಲಾ, ಸೊಲ್ಲಾಪುರ ರಂಗಣ್ಣ, ಸೂರಣ್ಣ, ಕೆ.ಕೆ.ಎನ್‌.ಎಸ್‌.ಎಸ್‌ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್‌ ಮೊದಲಾದವರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಬಗರ್‌ ಹುಕುಂ ಸಾಗುವಳಿದಾರರ ಹೋರಾಟ ಸಮಿತಿ ಸದಸ್ಯ ಮುಸ್ಟೂರಪ್ಪ ನಿಧನಕ್ಕೆ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. 

ಪ್ರಕರಣ ವಾಪಸ್‌ ಪಡೆಯಲು ಒತ್ತಾಯ ಜಿಲ್ಲೆಯಲ್ಲಿ ಅರಣ್ಯ ಮತ್ತು ಕಂದಾಯ ಭೂಮಿ ಸಾಗುವಳಿದಾರರ ಸ್ವಾಧೀನದಲ್ಲಿರುವ ಭೂಮಿಯನ್ನು ಗಣಿ ಮತ್ತು ಇನ್ನಿತರೆ ವ್ಯವಸಾಯೇತರ ಉದ್ದೇಶಗಳಿಗಾಗಿ ಮಂಜೂರು ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಜಿಲ್ಲೆಯಲ್ಲಿ 94 ಸಿ ಮತ್ತು 94 ಸಿಸಿ ಅಡಿ ವಸತಿ ಹಕ್ಕಿಗಾಗಿ ಕಳೆದ ಸೆ. 16ರವರೆಗೆ ಸಲ್ಲಿಸಿರುವ ಎಲ್ಲ ಫಲಾನುಭವಿಗಳ ಅರ್ಜಿಗಳನ್ನು ಪರಿಶೀಲಿಸಿ ಹಕ್ಕುಪತ್ರ ವಿತರಿಸಬೇಕು. ಜಿಲ್ಲೆಯಲ್ಲಿ ಐದು ಎಕರೆಗಿಂತ ಕಡಿಮೆ ಸಾಗುವಳಿ ಮಾಡಿಕೊಂಡಿರುವ ಬಡ ಸಾಗುವಳಿದಾರರ ವಿರುದ್ಧ ಭೂಕಬಳಿಕೆ ನಿಷೇಧ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳನ್ನು ರಾಜ್ಯ ಸರ್ಕಾರದ ಇತ್ತೀಚಿನ ತೀರ್ಮಾನದಂತೆ ಮರುಪರಿಶೀಲಿಸಿ ಹಿಂದಕ್ಕೆ ಪಡೆಯಬೇಕು ಮತ್ತು ಹೊಸದಾಗಿ ಪ್ರಕರಣಗಳನ್ನು ದಾಖಲಿಸಬಾರದು ಎಂದು ಪ್ರಜಾಶಕ್ತಿ ಬೋರಯ್ಯ ಮನವಿ ಮಾಡಿದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.