ಶಿರಾಡಿ:ಗುರುವಾರ ಬೆಳಗ್ಗೆಯಿಂದ ಎಲ್ಲಾ ವಾಹನಗಳು ಸಂಚಾರಕ್ಕೆ ಮುಕ್ತ


Team Udayavani, Nov 14, 2018, 9:59 PM IST

shiradi-new.jpg

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ವ್ಯಾಪ್ತಿಯ ಶಿರಾಡಿಘಾಟ್‌ ರಸ್ತೆಯಲ್ಲಿ ಇಂದಿನಿಂದಲೇ ಸರಕು ಸಾಗಾಣೆಯ ಭಾರೀ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿದ್ದು, ಸತತ ಮೂಲಕ ತಿಂಗಳ ಬಳಿಕ ಎಲ್ಲಾ ತರಹದ ವಾಹನಗಳ ಸಂಚಾರಕ್ಕೆ ಶಿರಾಡಿ ತೆರೆದುಕೊಂಡಿದೆ. 

ಈ ಹಿಂದೆ ಲಘು ವಾಹನಗಳಾದ ದ್ವಿಚಕ್ರ ವಾಹನಗಳು, ಕಾರು ಜೀಪು, ವ್ಯಾನ್‌, ಟೆಂಪೋ ಟ್ರಾವೆಲರ್‌ ಹಾಗೂ ಸಾಮಾನ್ಯ ಬಸ್ಸು, ರಾಜಹಂಸ, ಐರಾವತ, ಖಾಸಗಿ ಲಕ್ಸುರಿ ಬಸ್ಸುಗಳ ಸಂಚಾರಕ್ಕೆ ಶಿರಾಡಿಘಾಟ್‌ ರಸ್ತೆ ಮುಕ್ತಗೊಳಿಸಲಾಗಿತ್ತು.  ನ.15ರ ಬೆಳಗ್ಗೆ 6 ಗಂಟೆಯಿಂದ ಎಲ್ಲಾ ಬಗೆಯ ವಾಹನಗಳಗಳ ಸಂಚಾರಕ್ಕೂ ಅಂದರೆ ಭಾರೀ ವಾಹನಗಳಾದ ಎಲ್‌.ಸಿ., ಬುಲೆಟ್‌ ಟ್ಯಾಂಕರ್‌, ಕಾರ್ಗೊ ಕಂಟೈನರ್‌, ಲಾಂಗ್‌ ಚಾಸೀಸ್‌ ವಾಹನಗಳು ಸೇರಿದಂತೆ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೂ ಶಿರಾಡಿಘಾಟ್‌ ರಸ್ತೆಯನ್ನು ಮುಕ್ತಗೊಳಿಸಿ ಹಾಸನ ಜಿಲ್ಲಾಧಿಕಾರಿಯವರು ಅದೇಶ ಹೊರಡಿಸಿದ್ದಾರೆ. 

ಈ ಆದೇಶದ ಅನ್ವಯ ರಸ್ತೆಯಲ್ಲಿ ಹಾಗೂ ಏಕಮುಖ ಸಂಚಾರ ಇರುವ ಸ್ಥಳಗಳಲ್ಲಿ ಪೊಲೀಸ್‌ ಇಲಾಖೆಯ  ಸಿಬ್ಬಂದಿಯವರನ್ನು ನೇಮಕಗೊಳಿಸಲು ಪೊಲೀಸ್‌ ಅಧೀಕ್ಷಕರು ನಿರ್ದೇಶನ  ನೀಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಎಂಜಿನಿಯರ್‌ ಅವರು ವಾಹನಗಳ ಸುಗಮ ಸಂಚಾರಕ್ಕಾಗಿ ಅವಶ್ಯವಿರುವ ಸೂಚನಾಫ‌ಲಕ ಅಳವಡಿಸಲು ಸೂಚನೆ ನೀಡಿದ್ದಾರೆ.

ಮುಂಗಾರು ಮಳೆಯ ಸಂದರ್ಭದಲ್ಲಿ ಭೂ ಕುಸಿತವುಂಟಾಗಿದ್ದರಿಂದ ಒಂದು ತಿಂಗಳಿಗೂ ಹೆಚ್ಚು ಕಾಲ ಶಿರಾಡಿಘಾಟ್‌ನಲ್ಲಿ ವಾಹಸನ ಸಂಚಾರ ಸ್ಥಗಿತೊಳಿಸಲಾಗಿತ್ತು. ರಸ್ತೆಯ ಮೇಲಿನ ಮಣ್ಣು ತೆರವುಗೊಳಿಸಿದ ನಂತರ ಲಘು ವಾಹಗಳು ಹಾಗೂ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಈಗ ಸರಕು ಸಾಗಾಣೆಯ ವಾಹನಗಳ ಸಂಚಾರಕ್ಕೂ ಅನುಮತಿ ನೀಡಲಾಗಿದೆ.

ಹಿಂದೆಯೇ ಅನುಮತಿ:
ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್‌ನಲ್ಲಿ ಭೂಕುಸಿತ ಉಂಟಾಗಿತ್ತು. ಹೀಗಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಆಗಸ್ಟ್‌ನಲ್ಲಿ ರದ್ದುಗೊಳಿಸಲಾಗಿತ್ತು. ರಸ್ತೆ ತಾತ್ಕಾಲಿಕ ದುರಸ್ತಿ ಮಾಡಿದ ನಂತರ ಸೆಪ್ಟೆಂಬರ್‌ನಲ್ಲಿ ಮೊದಲಿಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ನಂತರ ಸಾರ್ವಜನಿಕ ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ನಾಲ್ಕು ಕಡೆ ಏಕಮುಖ ಸಂಚಾರವಿದ್ದರಿಂದ ಘನವಾಹನಗಳ ವಾಹನಕ್ಕೆ ಅನುಮತಿ ನೀಡಿರಲಿಲ್ಲ. ಆದರೆ, ಸಾರ್ವಜನಿಕ ವಲಯದಿಂದ ಘನವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ವ್ಯಾಪಕ ಒತ್ತಡಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್‌ 12ರಿಂದ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಿದ್ದರು. ಆದರೆ, ಹಾಸನಾಂಬ ಉತ್ಸವ ಇದ್ದ ಕಾರಣ ಇಲ್ಲಿನ

ಜಿಲ್ಲಾಡಳಿತ ಭಾರೀ ವಾಹನಗಳ ಸಂಚಾರಕ್ಕೆ ಅಂದು ಅವಕಾಶ ನೀಡಿರಲಿಲ್ಲ.ಹಾಸನಾಂಬ ಉತ್ಸದ ಮುಗಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ನ.14ರಿಂದ ಘನ ವಾಹನಗಳ ಸಂಚಾರಕ್ಕೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅನುಮತಿ ನೀಡಿದ್ದಾರೆ.
 

ಶಿರಾಡಿ ರಸ್ತೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡದ ಕಾರಣ ಸುತ್ತಿ ಬಳಸಿ ಕರಾವಳಿ ಜಿಲ್ಲೆಗೆ ಹೋಗಬೇಕಿತ್ತು. ಇದರಿಂದ ಸಾವಿರಾರ ರೂ. ಇಂಧನ ವಿನಾಕಾರಣ ಪೋಲಾಗುತ್ತಿತ್ತು. ಇದೀಗ ಶಿರಾಡಿ ಘಾಟಿ ರಸ್ತೆ ಘನ ವಾಹನಗಳ ಸಂಚಾರಕ್ಕೂ ಮುಕ್ತಗೊಳಿಸಿರುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ.
ಸಂಜೀತ್‌ಶೆಟ್ಟಿ, ಶಿರಾಡಿ ರಸ್ತೆ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ.

ಟಾಪ್ ನ್ಯೂಸ್

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.