ಗಿಣಿ ಕಥೆ


Team Udayavani, Nov 16, 2018, 6:00 AM IST

32.jpg

“ಮೊದಲು ನಟನಾಗಬೇಕೆಂದು ಇಲ್ಲಿಗೆ ಬಂದೆ. ಅವಕಾಶಗಳಿಗಾಗಿ ಸಾಕಷ್ಟು ಹುಡುಕಾಟ ನಡೆಸಿದ್ದೆ. ಒಂದು ಪಾತ್ರ ಕೊಡುತ್ತೇನೆ. ಪಾತ್ರಕ್ಕಾಗಿ ಗಡ್ಡ ಬಿಡುವಂತೆ  ದೊಡ್ಡ ನಿರ್ದೇಶಕರೊಬ್ಬರು ಹೇಳಿದ್ದರು. ಅದರಂತೆ ನಾನು ಕೂಡ ಗಡ್ಡ ಬಿಟ್ಟೆ. ಮೂರು ವರ್ಷವಾದರೂ ಆ ಪಾತ್ರ ನನಗೆ ಸಿಗಲೇ ಇಲ್ಲ. ಗಡ್ಡ ಬೆಳೆಯಿತೇ ವಿನಃ ನಾನಂತೂ ಚಿತ್ರರಂಗದಲ್ಲಿ ಬೆಳೆಯಲಿಲ್ಲ. ಕೊನೆಗೆ ನಾನೇ ಒಂದಷ್ಟು ಪ್ರಯತ್ನ ಮಾಡಿ, ಸ್ವಲ್ಪ ಸಮಯ ತೆಗೆದುಕೊಂಡು, ಸ್ನೇಹಿತರ ಜೊತೆಗೆ ಒಂದು ಚಿತ್ರ ಮಾಡುವ ನಿರ್ಧಾರಕ್ಕೆ ಬಂದೆ. ಆಗ ಶುರುವಾಗಿದ್ದೆ ಗಿಣಿ ಹೇಳಿದ ಕಥೆ ಚಿತ್ರ. ಅಂತೂ, ನಾವಂದುಕೊಂಡಂತೆ ಚಿತ್ರ ಮಾಡಿ ಮುಗಿಸಿದ್ದೇವೆ. ಚಿತ್ರ ಬಹುತೇಕ ರೆಡಿಯಾಗಿದ್ದು, ಪ್ರೇಕ್ಷಕರ ಮುಂದೆ ತರೋದಷ್ಟೇ ಬಾಕಿ’ ಎನ್ನುತ್ತ ಮಾತಿಗಿಳಿದವರು ನಟ ಕಂ ನಿರ್ಮಾಪಕ ವಿ. ದೇವರಾಜ್‌ ಉರೂಫ್ ದೇವ್‌. ಇವರ ಈ ಮಾತುಗಳಿಗೆ ವೇದಿಕೆ ಮತ್ತು ಅವಕಾಶ ಕಲ್ಪಿಸಿದ್ದು, “ಗಿಣಿ ಹೇಳಿದ ಕಥೆ’ ಚಿತ್ರದ ಧ್ವನಿಸಾಂದ್ರಿಕೆ ಬಿಡುಗಡೆ ಸಮಾರಂಭ. 

ಚಿತ್ರರಂಗದಲ್ಲಿ ನಟನಾಗಬೇಕು ಎಂಬ ಕನಸನ್ನು ಹೊತ್ತು ಬಂದ ದೇವ್‌ ಆ ಕನಸನ್ನು ನನಸು ಮಾಡಿಕೊಳ್ಳಲು ಹತ್ತು ವರ್ಷಗಳ ಕಾಲ ತೆಗೆದಿರಿಸಬೇಕಾಯಿತು. ಇದರ ನಡುವೆಯೇ ಒಂದಷ್ಟು ಹವ್ಯಾಸಿ ರಂಗತಂಡಗಳಲ್ಲಿ ಗುರುತಿಸಿಕೊಂಡು ರಂಗಭೂಮಿಯಲ್ಲಿ ಸಕ್ರಿಯವಾದ ದೇವ್‌, ಅಲ್ಲಿ ಅಭಿನಯವನ್ನು ಕಲಿತುಕೊಂಡರು. ಜತೆಗೆ ಕಿರುತೆರೆಯ ಕೆಲ ಧಾರಾವಾಹಿಗಳಿಗೆ ಬರಹಗಾರನಾಗಿಯೂ ಕೆಲಸ ಮಾಡಿದರು. ಈ ಎಲ್ಲಾ ಅನುಭವಗಳನ್ನು ಬೆನ್ನಿಗಿಟ್ಟುಕೊಂಡು ದೇವ್‌, ಈಗ “ಗಿಣಿ ಹೇಳಿದ ಕಥೆ’ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ಚಿತ್ರದಲ್ಲಿ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ.

ಇತ್ತೀಚೆಗೆ “ಗಿಣಿ ಹೇಳಿದ ಕಥೆ’ ಚಿತ್ರದ ಹಾಡುಗಳು ಬಿಡುಗಡೆ ಹೊರಬಂದಿದ್ದು, ಈ ವೇಳೆ ಮಾತನಾಡಿದ ದೇವ್‌ ಮತ್ತು ಚಿತ್ರತಂಡ, ಚಿತ್ರರಂಗದಲ್ಲಿ ತಮ್ಮ ಪ್ರಯಾಣ ಮತ್ತು ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡಿತು.  “ಬುದ್ಧ ಚಿತ್ರಾಲಯ’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ದೇವ್‌ ಅವರಿಗೆ ನಾಯಕಿಯಾಗಿ ಗೀತಾಂಜಲಿ ಜೋಡಿಯಾಗಿದ್ದಾರೆ. ಉಳಿದಂತೆ ಮಾಲತೇಶ್‌, ನೀತೂ ರಾಯ್‌ ಮೊದಲಾದ ಕಲಾವಿದರ ತಾರಾಗಣವಿದೆ. ಸುಮಾರು ಇಪ್ಪತ್ತು ವರ್ಷಗಳಿಂದ ಕಿರುತೆರೆ ಛಾಯಾಗ್ರಾಹಕನಾಗಿ, ನಿರ್ದೇಶಕನಾಗಿ ಅನುಭವವಿರುವ ನಾಗರಾಜ ಉಪ್ಪುಂದ “ಗಿಣಿ ಹೇಳಿದ ಕಥೆ’ ಚಿತ್ರದ ದೃಶ್ಯಗಳಿಗೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡಿದ್ದಾರೆ. 

ಇನ್ನು ಬಿಡುಗಡೆಯಾಗಿರುವ “ಗಿಣಿ ಹೇಳಿದ ಕಥೆ’ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಪ್ರೀತ್‌ ಹಾಸನ್‌ ಈ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಹರ್ಷಪ್ರಿಯ, ಪ್ರದ್ಯುಮ್ನ, ರಾಜನೇಸರ ಹಾಡುಗಳಿಗೆ ಸಾಹಿತ್ಯವನ್ನು  ಒದಗಿಸಿದ್ದಾರೆ. ಬೆಂಗಳೂರು, ಮಂಡ್ಯ, ಮೈಸೂರು, ಮಡಿಕೇರಿ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸದ್ಯ ಹಾಡುಗಳ ಬಿಡುಗಡೆ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ವರ್ಷಾಂತ್ಯಕ್ಕೆ “ಗಿಣಿ ಹೇಳಿದ ಕಥೆ’ಯನ್ನು ಪ್ರೇಕ್ಷಕರ ಮುಂದೆ ಹೇಳುವ ಯೋಜನೆಯಲ್ಲಿದೆ. 

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.