ಕಾಂಕ್ರೀಟ್‌ ಕಾಮಗಾರಿಗೆ ನ. 19ಕ್ಕೆ ಚಾಲನೆ: ಶಾಸಕ ವೇದವ್ಯಾಸ


Team Udayavani, Nov 18, 2018, 12:07 PM IST

18-november-6.gif

ಮಹಾನಗರ: ನಗರದ ಕುಲಶೇಖರದಲ್ಲಿರುವ ಕೆಎಂಎಫ್‌ ಡೇರಿಯಿಂದ ಕಾರ್ಕಳಕ್ಕೆ ಹೋಗುವ ಮುಖ್ಯ ರಸ್ತೆಯ ತನಕದ ರಸ್ತೆಗೆ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್‌ ಕಾಮಗಾರಿಗೆ ನ. 19ರಂದು ಚಾಲನೆ ಸಿಗಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ಕಾಂಕ್ರೀಟ್‌ ಕಾಮಗಾರಿ ನಡೆಯಲಿರುವ ಕುಲಶೇಖರದ ಪ್ರದೇಶಕ್ಕೆ ಭೇಟಿಕೊಟ್ಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗದ ಜನರ ಬಹುಕಾಲದ ಬೇಡಿಕೆ ಈಗ ಈಡೇರಲಿದೆ. ನಾನು ಚುನಾವಣಾ ಪ್ರಚಾರಕ್ಕೆ ಈ ಭಾಗಕ್ಕೆ ಬಂದಿದ್ದಾಗ ಜನರು ಈ ಬೇಡಿಕೆ ಇಟ್ಟಿದ್ದರು ಎಂದು ತಿಳಿಸಿದರು. ಒಟ್ಟು 500 ಮೀಟರ್‌ ಉದ್ದ, ಇಪ್ಪತ್ತನಾಲ್ಕು ಅಡಿ ವಿಸ್ತೀರ್ಣದ ರಸ್ತೆಗೆ ಕಾಂಕ್ರೀಟ್‌ ಕಾಮಗಾರಿ ನಡೆಯಲಿದ್ದು, ಇದಕ್ಕೆ ಒಂದು ಕೋಟಿ ರೂ. ವೆಚ್ಚವಾಗಲಿದೆ. ಬಹಳ ಜನನಿಬಿಡ ರಸ್ತೆಯಾಗಿರುವುದರಿಂದ ಮೊದಲ ಹಂತದಲ್ಲಿ ಹನ್ನೆರಡು ಅಡಿ ವಿಸ್ತೀರ್ಣಕ್ಕೆ ಕಾಮಗಾರಿ ನಡೆಯಲಿದ್ದು, ಅದು ಮುಗಿದ ಬಳಿಕ ಇನ್ನೊಂದು ಹಂತದಲ್ಲಿ ಉಳಿದ ಹನ್ನೆರಡು ಅಡಿ ವಿಸ್ತೀರ್ಣಕ್ಕೆ ಕಾಂಕ್ರೀಟ್‌ ಹಾಕಲಾಗುವುದು ಎಂದರು.

ಗ್ರಾಮಸ್ಥರು ಮತ್ತು ಕೆಎಂಎಫ್‌ ಡೇರಿಯ ಅಧಿಕಾರಿಗಳಿಂದ ಸಲಹೆ ಪಡೆದು ಪಿಡಬ್ಲ್ಯುಡಿ ಇಲಾಖೆಯ ಎಂಜಿನಿಯರ್‌ ಗಳು ಸೂಕ್ತ ರೀತಿಯಲ್ಲಿ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಬೇಕು ಎಂದು ಸೂಚನೆ ಕೊಟ್ಟಿರುವುದಾಗಿ ತಿಳಿಸಿದರು. ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ವಸಂತ ಜೆ. ಪೂಜಾರಿ, ಭಾಸ್ಕರ ಚಂದ್ರ ಶೆಟ್ಟಿ, ರಮೇಶ ಕಂಡೆಟ್ಟು, ಅಜಯ್‌, ಯೋಗೀಶ್‌, ಹರಿಣಿ, ರಾಮಚಂದ್ರ ಚೌಟ, ನವೀನ್‌, ಪ್ರೇಮ್‌ ಮತ್ತು ಕೆಎಂಎಫ್‌ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಜನರ ಸಹಕಾರ ಅಗತ್ಯ
ಕಾಮಗಾರಿ ನಡೆಯುವಾಗ ವಾಹನ ಸಂಚಾರಕ್ಕೆ ಒಂದಿಷ್ಟು ದಿನ ಅಡಚಣೆ ಆಗಬಹುದು. ಆದ್ದರಿಂದ ಜನ ಅಭಿವೃದ್ಧಿಯನ್ನು ದೂರದೃಷ್ಟಿಯಲ್ಲಿಟ್ಟು ನಡೆಯಲಿರುವ ಕಾಮಗಾರಿ ಆದ ಕಾರಣ ಸಹಕರಿಸಬೇಕು ಎಂದು ಶಾಸಕರು ಹೇಳಿದರು. 

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.