ದೀಪಿಕಾ-ರಣವೀರ್‌ ಅದ್ದೂರಿ ಆರತಕ್ಷತೆ

Team Udayavani, Nov 22, 2018, 2:23 PM IST

blore-5.jpg

ಬೆಂಗಳೂರು: ನ.14, 15ರಂದು ಇಟಲಿಯ ಲೇಕ್‌ ಕೋಮೊದಲ್ಲಿ ಅದ್ದೂರಿಯಾಗಿ ಹಸೆಮಣೆ ಏರಿದ್ದ ಬಾಲಿವುಡ್‌ ತಾರಾಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌, ವಿವಾಹ ಆರತಕ್ಷತೆ ಕಾರ್ಯಕ್ರಮ ನಗರದ “ದಿ ಲೀಲಾ ಪ್ಯಾಲೇಸ್‌’ ಹೋಟೆಲ್‌ನಲ್ಲಿ ಅದ್ದೂರಿಯಾಗಿ ನಡೆಯಿತು. ಖ್ಯಾತ ವಸ್ತ್ರವಿನ್ಯಾಸಕಾರ ಸಭ್ಯಸಾಚಿ ಮುಖರ್ಜಿ ವಿನ್ಯಾಸಗೊಳಿಸಿದ್ದ, ಚಿನ್ನದ ಬಣ್ಣದ ಬನಾರಸ್‌ ಸೀರೆಯುಟ್ಟು, ಮುತ್ತು ಹಾಗೂ ಪಚ್ಚೆ ಮಿಶ್ರಣದ ಸರ ಹಾಕಿಕೊಂಡು, ತಲೆಗೆ ಲೋ ಬನ್‌ ಅದರ ಸುತ್ತ ಮಲ್ಲಿಗೆ ಹೂ ಮುಡಿದು ಹಣೆಗೆ ಸಿಂಧೂರವಿಟ್ಟು ದೀಪಿಕಾ ಕಂಗೊಳಿಸುತ್ತಿದ್ದರೆ, ಕಪ್ಪು ಬಣ್ಣದ ಶೇರವಾನಿಯಲ್ಲಿ ರಣವೀರ್‌ ಮಿಂಚುತ್ತಿದ್ದರು.

ಆರತಕ್ಷತೆ ಕಾರ್ಯಕ್ರಮಕ್ಕೆ, ತೀರಾ ಆಪ್ತರಿಗೆ ಮಾತ್ರ ಆಮಂತ್ರಣ ನೀಡಲಾಗಿತ್ತು. ಬ್ಯಾಡ್ಮಿಂಟನ್‌ ತಾರೆ ಪಿ.ವಿ ಸಿಂಧು, ಕ್ರಿಕೆಟಿಗ ಅನಿಲ್‌ ಕುಂಬ್ಳೆ, ಇನ್ಫೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾಮೂರ್ತಿ ಸೇರಿದಂತೆ, ದೀಪಿಕಾ-ರಣವೀರ್‌ ಕುಟುಂಬದ ಹತ್ತಿರದ ಬಂಧುಗಳು, ಸ್ನೇಹಿತರು, ಉದ್ಯಮಿಗಳು ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಆರತಕ್ಷತೆಯಲ್ಲಿ ಕನ್ನಡದ ನಟರಾದ ಅಂಬರೀಶ್‌, ಉಪೇಂದ್ರ, ಸುದೀಪ್‌, ಯಶ್‌, ಪುನೀತ್‌ ರಾಜಕುಮಾರ್‌, ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಮೊದಲಾದವರಿಗೆ ಆರತಕ್ಷತೆಯ ಆಮಂತ್ರಣ ತಲುಪಿದ್ದು, ಕನ್ನಡದ ಜೊತೆಗೆ ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಯ ಪ್ರಮುಖ ನಟ-ನಟಿಯರು, ನಿರ್ದೇಶಕ, ನಿರ್ಮಾಪಕರು, ಕ್ರೀಡಾ ತಾರೆಯರು ಸೇರಿದಂತೆ ಸುಮಾರು ಎರಡು ಸಾವಿರಕ್ಕೂ ಅಧಿಕ ಗಣ್ಯರ ಉಪಸ್ಥಿತರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಅನೇಕ ನಿರೀಕ್ಷಿತ ಗಣ್ಯರು ಈ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.

ಆರತಕ್ಷತೆಯಲ್ಲಿ ನೃತ್ಯ ಕಾರ್ಯಕ್ರಮಗಳ ಜೊತೆಗೆ ಅತಿಥಿಗಳಿಗಾಗಿ ಬಗೆಬಗೆಯ ಭೋಜನ, ಖಾದ್ಯಗಳನ್ನು ಸವಿಯುವ ವ್ಯವಸ್ಥೆ ಮಾಡಲಾಗಿತ್ತು. ಹಲವು ತಾರೆಯರು, ಗಣ್ಯರು ಕಾರ್ಯಕ್ರಮಕ್ಕೆ ಭಾಗವಹಿಸುವ ಸಾಧ್ಯತೆ ಇದ್ದ ಕಾರಣ ಹೋಟೆಲ್‌ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಇನ್ನು ಈ ಆರತಕ್ಷತೆ ಸಮಾರಂಭಕ್ಕೆ ಎರಡು ದಿನಗಳ ಮೊದಲೇ “ದಿ ಲೀಲಾ ಪ್ಯಾಲೇಸ್‌’ನಲ್ಲಿ ತಯಾರಿ ಆರಂಭವಾಗಿದ್ದು, ದಕ್ಷಿಣ ಭಾರತ ಮತ್ತು ಉತ್ತರ ಭಾರತ ಶೈಲಿಯ ವಿಶೇಷ ಖಾದ್ಯಗಳನ್ನು ತಯಾರಿಸುವ ಸಲುವಾಗಿಯೇ ನುರಿತ ಬಾಣಸಿಗರ ತಂಡ ಬೆಂಗಳೂರಿಗೆ ಆಗಮಿಸಿ, ಶುಚಿ-ರುಚಿಯಾದ ಅಡುಗೆಗೆ ಬೇಕಾದ ತಯಾರಿಗಳನ್ನು ಮಾಡಿಕೊಂಡಿತ್ತು. ಆರತಕ್ಷತೆ ಸಲುವಾಗಿ ಲೀಲಾ ಪ್ಯಾಲೇಸ್‌ ಹೋಟೆಲ್‌ಗೆ ವರ್ಣಮಯ ಲೈಟಿಂಗ್ಸ್‌ ಅಳವಡಿಸಲಾಗಿದ್ದು, ಒಳಾಂಗಣವನ್ನು ಬಗೆಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು.

ಮುಂಬೈನಲ್ಲೂ ಆರತಕ್ಷತೆ: ಇದೇ ತಿಂಗಳ 28ಕ್ಕೆ ಮುಂಬೈನಲ್ಲೂ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಿವುಡ್‌ನ‌ ಅನೇಕ ತಾರೆಯರು, ನಿರ್ಮಾಪಕರು, ನಿರ್ದೇಶಕರು ಮತ್ತು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮಕ್ಕೆ ಗೈರಾದ ಗಣ್ಯರು ಅದರಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. 

ಟಾಪ್ ನ್ಯೂಸ್

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.