ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ 8 ದಿನಗಳ ಕಾಲ ಸಿಸಿಬಿ ವಶಕ್ಕೆ
Team Udayavani, Nov 22, 2018, 5:10 PM IST
ಬೆಂಗಳೂರು: ಆ್ಯಂಬಿಡೆಂಟ್ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣದ ಐದನೇ ಆರೋಪಿ ಅಲಿಖಾನ್ನನ್ನು 8 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನೀಡಿ 1ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.
ಸಿಸಿಬಿ ಪೊಲೀಸರು ಅಲಿಖಾನ್ನನ್ನು ಕೋರ್ಟ್ಗೆ ಹಾಜರು ಪಡಿಸಿ 14 ದಿನ ವಶಕೆಕ ನೀಡುವಂತೆ ಕೋರಿದ್ದರು. ಆದರೆ ಕೋರ್ಟ್ 8 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ, ಮಾತ್ರವಲ್ಲದೆ ಹಿಂಸೆ ನೀಡದೆ , ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 29ಕ್ಕೆ ಮುಂದೂಡಿದೆ.
ಅಲಿಖಾನ್ ಪರ ವಕೀಲರು ಕೋರ್ಟ್ನಲ್ಲಿ ವಾದ ಮಂಡನೆ ಮಾಡಿ ಅಲಿಖಾನ್ಗೆ ಪೊಲೀಸರು ಹಿಂಸೆ ನೀಡುತ್ತಿದ್ದಾರೆ. ವಕೀಲರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.
ಅಲಿಖಾನ್ ಆ್ಯಂಬಿಡೆಂಟ್ ಕಂಪೆನಿ ಮೂಲಕ 57 ಕೆ.ಜಿ ಚಿನ್ನದ ಗಟ್ಟಿ ಸ್ವೀಕರಿಸಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಲುಪಿಸಿರುವ ಗಂಭೀರ ಆರೋಪ ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ