ಬಡವರ ಬಂಧು ಶುರು

Team Udayavani, Nov 23, 2018, 6:00 AM IST

181122kpn-87.jpg

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ಬೀದಿ ವ್ಯಾಪಾರಿಗಳಿಗೆ ದಿನನಿತ್ಯದ ವ್ಯಾಪಾರ ವಹಿವಾಟು ನಡೆಸಲು ಎರಡು ಸಾವಿರದಿಂದ ಹತ್ತು ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಬಡವರ ಬಂಧು ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಿದರು.

ಗುರುವಾರ ಬೆಂಗಳೂರಿನ ಯಶವಂತಪುರ ಎಪಿಎಂಸಿ ತರಕಾರಿ ಮಾರುಟ್ಟೆಯಲ್ಲಿ ಫ‌ಲಾನುಭವಿಗಳಿಗೆ ಸಾಲದ ಚೆಕ್‌ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು. ಬಡ ಬೀದಿ ಬದಿ ವ್ಯಾಪಾರಿಗಳು ಪ್ರತಿ ದಿನದ ವ್ಯವಹಾರಕ್ಕಾಗಿ ಲೇವಾದೇವಿಗಾರರ ಮೇಲೆ ಅವಲಂಬಿತರಾಗುವ ಹಾಗೂ ಅಧಿಕ ಬಡ್ಡಿ ವಿಧಿಸಿ ವಂಚಿಸುವನ್ನು ತಡೆಯುವ ಉದ್ದೇಶದಿಂದ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆ ಅನುಷ್ಟಾನಗೊಳಿಸಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.

ಗುರುತಿನ ಚೀಟಿಯುಂಟು
ಬೀದಿ ಬದಿಯ ವ್ಯಾಪಾರಿಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಗುರುತಿನ ಚೀಟಿ ನೀಡಲಾಗುತ್ತಿದ್ದು, ವಿವಿಧ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 1.80 ಲಕ್ಷ, ಬಿಬಿಎಂಪಿ ವ್ಯಾಪ್ತಿಯಲ್ಲಿ 24,650 ಮಂದಿ ಗುರುತಿನ ಚೀಟಿ ಪಡೆದುಕೊಂಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 5 ಸಾವಿರ, ಉಳಿದ ಮಹಾನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 3 ಸಾವಿರ ಹಾಗೂ ಜಿಲ್ಲಾ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ತಲಾ ಒಂದು ಸಾವಿರ ಫ‌ಲಾನುಭವಿಗಳಿಗೆ 2 ಸಾವಿರ ರೂಪಾಯಿಯಿಂದ 10 ಸಾವಿರವರೆಗೆ ಸಾಲ ನೀಡಲಾಗುವುದು.

ಬಿಪಿಎಲ್‌ ಕಾರ್ಡ್‌ ಬೇಕು
ಈ ಸೌಲಭ್ಯ ಪಡೆಯಲು ವ್ಯಾಪಾರಿಗಳು ಬಿಪಿಎಲ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಈ ಯೋಜನೆ ಅಡಿಯಲ್ಲಿ ಸಹಕಾರಿ ಬ್ಯಾಂಕ್‌ಗಳು ತಮ್ಮ ವ್ಯಾಪ್ತಿಯಲ್ಲಿನ ನಗರ ಪ್ರದೇಶದಲ್ಲಿ ನಿಗದಿ ಪಡಿಸಿದ ಗುರಿಗೆ ತಕ್ಕಂತೆ ಅರ್ಜಿ ಸಲ್ಲಿಸಿದ ಫ‌ಲಾನುಭವಿಗಳಿಗೆ ಮೊದಲು ಆದ್ಯತೆ ನೀಡಿ ವಿತರಿಸಲು ಸೂಚನೆ ನೀಡಲಾಗಿದೆ. ಈ ಯೋಜನೆ ಪ್ರಕಾರ ಸಹಕಾರ ಬ್ಯಾಂಕಿನ ಮೂಲಕ ಮಾತ್ರ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಪ್ರತಿ ನಗರ ಪ್ರದೇಶಕ್ಕೆ ಒಂದು ಸಹಕಾರ ಬ್ಯಾಂಕ್‌ ಮತ್ತು ಮೊಬೈಲ್‌ ಬ್ಯಾಂಕಿಂಗ್‌ ಘಟಕಕ್ಕಾಗಿ ಸ್ಥಳ ಗುರುತಿಸುವ ಜವಾಬ್ದಾರಿಯನ್ನು ಡಿಸಿಸಿ ಬ್ಯಾಂಕಿನ ಅಧ್ಯಕ್ಷರ ನೇತೃತ್ವದ ಸಮಿತಿಗೆ ವಹಿಸಲಾಗಿದೆ.

ಆಧಾರ ಕಡ್ಡಾಯ
ನೋಂದಾಯಿತ ಬೀದಿ ಬದಿ ವ್ಯಾಪಾರಿಗಳು ಆಧಾರ್‌ ಕಾರ್ಡ್‌, ಬಿಪಿಎಲ್‌ ಕಾರ್ಡ್‌, ತಾವು ವ್ಯಾಪಾರ ನಡೆಸುತ್ತಿರುವ ಸ್ಥಳದ ಫೋಟೊ, ಸ್ಥಳೀಯ ಸಂಸ್ಥೆಗಳ ಗುರುತಿನ ಚೀಟಿ, ಶೂನ್ಯ ಬ್ಯಾಂಕ್‌ ಬ್ಯಾಲೆನ್ಸ್‌ ಉಳಿತಾಯ ಖಾತೆ ತೆರೆಯಬೇಕು. ಸಾಲದ ಮರು ಪಾವತಿಯ ಅವಧಿ ಮೂರು ತಿಂಗಳಾಗಿದ್ದು, ನಿಗದಿತ ಅವಧಿಯೊಳಗೆ ಸಾಲ ಮರು ಪಾವತಿ ಮಾಡಿದರೆ, ಮತ್ತೆ ಶೇ. 10 ರಷ್ಟು ಹೆಚ್ಚು ಸಾಲ ನೀಡಲು ಅವಕಾಶ ಕಲ್ಪಿಸಲಾಗಿದೆ.

ಯಾರಿಗೆಲ್ಲಾ ಸೌಲಭ್ಯ
– ರಸ್ತೆ ಬದಿಯಲ್ಲಿ ತಳ್ಳುವ ಬಂಡಿ ಅಥವಾ ಮೋಟಾರು ವಾಹನಗಳಲ್ಲಿ ಪಾನೀಯ, ತಿಂಡಿ, ಊಟ ಮತ್ತಿತರ ಹೋಟೆಲ್‌ ಸೇವೆ ಒದಗಿಸುವವರು
– ಬೀದಿಗಳಲ್ಲಿ ಹಣ್ಣು, ತರಕಾರಿ, ಹೂ, ಬುಟ್ಟಿ ಮತ್ತಿತರ ಪರಿಕರಗಳ ಮಾರಾಟ ಮಾಡುವವರು
– ಪಾದರಕ್ಷೆ, ಚರ್ಮದ ಉತ್ಪನ್ನಗಳನ್ನು ರಿಪೇರಿ ಹಾಗೂ ಮಾರಾಟ ಮಾಡುವವರು
– ಆಟದ ಸಾಮಾನು, ಗೃಹೋಪಯೋಗಿ ವಸ್ತುಗಳನ್ನು ಮಾರಾಟ ಮಾಡುವವರು

ಯಾರಿಗೆ ಸಿಗಲ್ಲ?
– ರಸ್ತೆ ಬದಿಯಲ್ಲಿ ಸ್ವತ್ಛತೆಯನ್ನು ಹಾಳು ಮಾಡುವ, ಪರಿಸರಕ್ಕೆ ಹಾನಿಯುಂಟು ಮಾಡುವ ವಸ್ತುಗಳನ್ನು ಮಾರಾಟ ಮಾಡುವವರಿಗೆ ಈ ಯೋಜನೆಯ ಸೌಲಭ್ಯ ಸಿಗಲ್ಲ.
         
4.50 ಲಕ್ಷ  – ರಾಜ್ಯದಲ್ಲಿನ ಬೀದಿ ವ್ಯಾಪಾರಿಗಳ ಸಂಖ್ಯೆ
80 ಸಾವಿರ – ಬಿಬಿಎಂಪಿ ವ್ಯಾಪ್ತಿಯಲ್ಲಿನ ಬೀದಿ ವ್ಯಾಪಾರಿಗಳು
53 ಸಾವಿರ – ಈ ವರ್ಷ ಸೌಲಭ್ಯ ಪಡೆಯುವ ಫ‌ಲಾನುಭವಿಗಳು

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.