ಶಾಲೆಯಿಂದ ದೂರವುಳಿದ ಮಕ್ಕಳು ಮರಳಿ ಶಾಲೆಗೆ

Team Udayavani, Nov 23, 2018, 11:40 AM IST

vij-1.jpg

ಸಿಂದಗಿ: ಶಾಲೆಯಿಂದ ದೂರುಳಿದು ಇಟ್ಟಂಗಿ ಬಟ್ಟಿಯಲ್ಲಿ ಕೆಲಸ ಮಾಡುತ್ತಿರುವ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಕಳುಹಿಸಿದ ಘಟನೆ ತಾಲೂಕಿನ ದೇವರಹಿಪ್ಪರಗಿ ಪಟ್ಟಣದ ಹೊರವಲಯದಲ್ಲಿ ಗುರುವಾರ ನಡೆದಿದೆ.

ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಅವರು ಸ್ವತಃ ತಮ್ಮ ಸಿಬ್ಬಂದಿಯೊಂದಿಗೆ ದೇವರಹಿಪ್ಪರಗಿಯಲ್ಲಿನ ಇಟ್ಟಂಗಿ ಬಟ್ಟಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಟ್ಟಂಗಿ ಬಟ್ಟಿ ಕೆಲಸ ಮಾಡುತ್ತಿರುವ ಇಬ್ಬರು ಶಾಲಾ ಮಕ್ಕಳನ್ನು ಗುರುತಿಸಿದ್ದಾರೆ. ತಾಲೂಕಿನ ಹೊನ್ನಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಸರು ದಾಖಲಾಗಿರುವ 2ನೇ ತರಗತಿಯ ವಿದ್ಯಾರ್ಥಿ ರವಿ ಲಕ್ಕಪ್ಪ ದೇವೂರ, 3ನೇ ತರಗತಿಯ ವಿದ್ಯಾರ್ಥಿ ಸಾದೇವಪ್ಪ ಲಕ್ಕಪ್ಪ ದೇವೂರ ಅವರಿಗೆ ತಿಳಿಹೇಳಿ ಮರಳಿ ಶಾಲೆಗೆ ಕಳುಹಿಸಿದ್ದಾರೆ. 

ಮಕ್ಕಳೊಂದಿಗೆ ಆಪ್ತಸಮಾಲೋಚನೆ ನಡೆಸಿದ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಮಾತನಾಡಿ, ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಕೆಲಸಕ್ಕೆ ಸೇರಿಸುವುದು ಅಪರಾಧ. ಕೂಲಿ ಹಣ ಉಳಿತಾಯವಾಗುತ್ತದೆ ಎಂದು ಶಾಲಾ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಅಪ ರಾಧ. ಕುಟುಂಬದ ಆರ್ಥಿಕ ಸಮಸ್ಯೆಯಿಂದಾಗಿ ಪಾಲಕರು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಕೆಲಸಕ್ಕೆ ಸೇರಿಸಬೇಡಿ ಎಂದರು.

ಸರಕಾರ 14 ವರ್ಷದವರೆಗೆ ಕಡ್ಡಾಯ ಶಿಕ್ಷಣ ಮಾಡಿದೆ. ಕಷ್ಟದ ಜೀವನದಲ್ಲಿ ಶಿಕ್ಷಣ ಕಲಿಸಲು ತೊಂದರೆ ಅಥವಾ ಅನಾನುಕೂಲವಾಗುತ್ತಿದ್ದಲ್ಲಿ ತಮನ್ನು ಭೇಟಿ ಮಾಡಿ. ಆದರೆ ಮಕ್ಕಳನ್ನು ಕೂಲಿಗೆ ಕಳುಹಿಸಬೇಡಿ. ಸರಕಾರ ಸಾಕಷ್ಟು ಸೌಲಭ್ಯ ನೀಡುತ್ತಿದೆ. ಈ ಸೌಲಭ್ಯಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದರು. ದೇವರಹಿಪ್ಪರಗಿಯ ಬಿಆರ್‌ಸಿ ಎಸ್‌.ಎಂ. ಪಾಟೀಲ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ನಿರಂತರ ಗೈರು ಹಾಜರಿ ಉಳಿಯುವಂತ ಮಕ್ಕಳನ್ನು ಗುರುತಿಸಿ ಅವರ ಬಗ್ಗೆ ತಿಳಿದುಕೊಂಡು ಮರಳಿ ಶಾಲೆಗೆ ಕರೆದುಕೊಂಡು ಬರಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಶಾಲಾ ಮುಖ್ಯಸ್ಥರಿಗೆ ಹಾಗೂ ಶಿಕ್ಷಕರಿಗೆ ಸೂಚಿಸಿದ್ದಾರೆ. 

ಮನೆಯಲ್ಲಿ ಬಹಳ ಕಷ್ಟವಿದೆ. ನನಗೆ ಶಾಲೆ ಕಲಿಯಲು ಇಷ್ಟ. ಆದರೆ ಬಡತನಕ್ಕಾಗಿ ಕೂಲಿ ಕೆಲಸಕ್ಕೆ ಬಂದಿದ್ದೇನೆ. ಸಾಹೇಬರು ನೀನು ಮೊದಲು ಶಾಲೆ ಕಲಿ. ನಿನಗೆ ಉಜ್ವಲ ಭವಿಷ್ಯವಿದೆ ಎಂದಿದ್ದಾರೆ. ನಾವು ಇಂದಿನಿಂದ ಶಾಲೆಗೆ ಹೋಗುತ್ತೇವೆ.
ಸಾದೇವಪ್ಪ ಲಕ್ಕಪ್ಪ, ದೇವೂರ ವಿದ್ಯಾರ್ಥಿ

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.