ಪರೀಕ್ಷೆಯಿಂದ ಜ್ಞಾಪಕಶಕ್ತಿ ಹೆಚ್ಚಳ


Team Udayavani, Nov 26, 2018, 4:03 PM IST

26-november-18.gif

ಕುಷ್ಟಗಿ: ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗಿ ಪ್ರಶ್ನೋತ್ತರ ಸರಣಿ ಪರೀಕ್ಷೆ ನಡೆಸುವುದರಿಂದ ಮಕ್ಕಳಿಗೆ ವಿಷಯ ಸುಲಭವಾಗಿ ಗ್ರಹಿಸಲು ಹಾಗೂ ಓದಿದ ವಿಷಯ ಮನಸ್ಸಿನಲ್ಲಿ ಉಳಿಯಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಚನ್ನಬಸಪ್ಪ ಹೇಳಿದರು.

ತಾಲೂಕಿನ ಮದಲಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 6ನೇ ತಗರತಿಗೆ ವಿವಿಧ ವಸತಿ ನಿಲಯ ಪ್ರವೇಶ ಪರೀಕ್ಷೆ ಮಾದರಿ ಪ್ರಶ್ನೆ ಪತ್ರಿಕೆ ರಚನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸರ್ಕಾರಿ ಶಾಲಾ ಮಕ್ಕಳು ಹೆಚ್ಚು ಆಯ್ಕೆಯಾಗಬೇಕೆಂಬ ಉದ್ದೇಶದಿಂದ ಪೂರಕ ತಯಾರಿಯಾಗಿ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಾಗಾರದಲ್ಲಿ ಸಂಪನ್ಮೂಲ ಶಿಕ್ಷಕರಿಂದ ಆಯಾ ಸ್ಪರ್ಧಾತ್ಮಕ ಪರೀಕ್ಷೆ ಪತ್ರಿಕೆಯ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಲಾಗಿದೆ. ಈ ಮಾದರಿ ಪ್ರಶ್ನೆ ಪತ್ರಿಕೆಯ ಮಾದರಿಗಳನ್ನು ಎಲ್ಲಾ ಶಾಲೆಯ 5ನೇ ತಗರತಿಯ ವಿದ್ಯಾರ್ಥಿಗಳಿಗೆ ಪೂರ್ವಸಿದ್ಧತೆ ಪರೀಕ್ಷೆ ನಡೆಸಿ, ಸ್ಪರ್ಧಾತ್ಮಕ ಪರೀಕ್ಷಾ ಭಯ ಇನ್ನಿಲ್ಲವಾಗಿಸುವುದು ಹಾಗೂ ವಿದ್ಯಾರ್ಥಿಗಳಿಗೆ ಸ್ಪಷ್ಟ ಓದು, ಶುದ್ಧ ಬರಹಕ್ಕೂ ಆದ್ಯತೆ ವಹಿಸಲಾಗುತ್ತಿದೆ. ತಾಲೂಕಿನಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕ ಸ್ನೇಹಿ ವಾತಾವರಣ ನಿರ್ಮಿಸಲಾಗುತ್ತಿದೆ.ಕಚೇರಿಯ ಆಡಳಿತ ನಿರ್ವಹಣೆಗಿಂತ ಶೈಕ್ಷಣಿಕಕ್ಕೆ ಹೆಚ್ಚು ಆದ್ಯತೆ ವಹಿಸಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಸಾಮಾನ್ಯ ಪರೀಕ್ಷೆ, ವಾರ್ಷಿಕ ಪರೀಕ್ಷೆಗಳಲ್ಲಿ ಸರ್ಕಾರಿ ಶಾಲಾ ಮಕ್ಕಳು ಹೆಚ್ಚು ಉತ್ತೀರ್ಣರಾಗಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಮಲ್ಲಪ್ಪ ಕುದರಿ ಮಾತನಾಡಿ, ಕಾರ್ಯಾಗಾರದಲ್ಲಿ 11 ಶಿಕ್ಷಕರ ತಂಡವು ನಿರಂತರ 5 ದಿನಗಳಲ್ಲಿ ವಿವಿಧ ವಿಷಯ, ಪಠ್ಯ ಹಾಗೂ ವಿವಿಧ ವರ್ಷಗಳ ಹಳೆ ಪ್ರಶ್ನೆ ಪತ್ರಿಕೆಗಳನ್ನು ಅಧ್ಯಯನಶೀಲರಾಗಿ, 12 ಸೆಟ್‌ ಪ್ರಶ್ನೆ ಪತ್ರಿಕೆಗಳಲ್ಲಿ ಒಟ್ಟು 1,400 ಪ್ರಶ್ನೆ ಸೇರಿದಂತೆ ಹೆಚ್ಚುವರಿ 100 ಪ್ರಶ್ನೆಗಳ ಸಹಿತವಾಗಿ 1,500 ಪ್ರಶ್ನೆಗಳನ್ನು ಕ್ರೋಢೀಕರಿಸಲಾಗಿದೆ. ಒಂದು ವಿಷಯದ ಬಗ್ಗೆ 100ಕ್ಕೂ ಅಧಿಕ ಪ್ರಶ್ನೆಗಳಾಗಿರುವುದರಿಂದ ವಿದ್ಯಾರ್ಥಿ ಪೂರ್ತಿ ಪುಸ್ತಕ ಓದಲೇ ಬೇಕಾಗುತ್ತಿದೆ. ಇದರಿಂದಾಗಿ ಪ್ರಶ್ನೆಪತ್ರಿಕೆ ಯಾವ ರೀತಿಯದ್ದೇ ಆಗಿರಲಿ ವಿದ್ಯಾರ್ಥಿ ಸಮರ್ಥವಾಗಿ ಉತ್ತರಿಸಲು ಸರಳವಾಗುತ್ತಿದೆ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಶೈಲ ಸೋಮನಕಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸೆಟೆಪ್ಪ ಸಿಳ್ಳೀನ್‌, ಸಿಆರ್‌ಪಿ ರಾಘವೇಂದ್ರ ಮೆದಿಕೇರಿ, ಮಹಿಬೂಬ್‌ ಕಂದಗಲ್‌ ಬಿಆರ್‌ಪಿ ರಾಜೇಸಾಬ್‌ ನದಾಫ್‌ ಮಾತನಾಡಿದರು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಶಿಕ್ಷಕ ಗುರಾಚಾರ ಆಶ್ರೀತ್‌ ವಹಿಸಿದ್ದರು. ಗ್ರಾಮದ ಹನುಮಗೌಡ ಮಾಲಿಪಾಟೀಲ, ಎಸ್‌ಡಿಎಂಸಿ ಸದಸ್ಯ ಮರಿಯಪ್ಪ ಕನಕಗಿರಿ, ಹನಮಂತ ಕನಕಗಿರಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.