ಕಿರಿಕ್‌ ಹುಡುಗಿಯ ಹೊಸ ಸಿನಿಮಾ

Team Udayavani, Nov 30, 2018, 6:00 AM IST

30.jpg

ಇಲ್ಲಿಯವರೆಗೆ ಅಭಿನಯಕ್ಕಿಂತ ಹೆಚ್ಚಾಗಿ ತನ್ನ ಹಾವ-ಭಾವ, ಬೋಲ್ಡ್‌ ಮಾತುಗಳಿಂದಲೇ ಚಂದನವನದಲ್ಲಿ ಆಗಾಗ್ಗೆ ಸುದ್ದಿಯಾಗುವ ಕಿರಿಕ್‌ ಹುಡುಗಿ ಸಂಯುಕ್ತಾ ಹೆಗ್ಡೆ, ಮುಂಬರುವ ಚಿತ್ರದಲ್ಲಿ ತಮ್ಮ ಮಾತಿಗೆ ಬ್ರೇಕ್‌ ಹಾಕಿದ್ದಾರೆ! ಹೌದು. ಸಂಯುಕ್ತಾ ಹೆಗ್ಡೆ ಅಭಿನಯಿಸಿರುವ ‘ಒಮ್ಮೆ ನಿಶ್ಯಬ್ಧ ಒಮ್ಮೆ ಯುದ್ಧ’ ತೆರೆಗೆ ಬರಲು ಸಿದ್ಧವಾಗಿದ್ದು, ಈ ಚಿತ್ರದಲ್ಲಿ ಸಂಯುಕ್ತಾ ಅವರದ್ದು, ಕಿವಿ ಕೇಳದ ಮತ್ತು ಮಾತು ಬಾರದ ಹುಡುಗಿಯ ಪಾತ್ರವಂತೆ. ಇತ್ತೀಚೆಗೆ ಈ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸಂಯುಕ್ತಾ ಪಾತ್ರದ ಗುಟ್ಟು ರಟ್ಟಾಗಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಮುಗಿಸಿ ತೆರೆಗೆ ಬರಲು ಅಣಿಯಾಗುತ್ತಿರುವ “ಒಮ್ಮೆ ನಿಶ್ಯಬ್ಧ ಒಮ್ಮೆ ಯುದ್ಧ’ ಚಿತ್ರತಂಡ ಚಿತ್ರದ ಆಡಿಯೋ ಬಿಡುಗಡೆಗೊಳಿಸುವ ಮೂಲಕ ತನ್ನ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಿದೆ. 

ತೆಲಂಗಾಣ ಮತ್ತು ಆಂಧ್ರ ಪ್ರದೇಶದ ಮೂಲಕ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಒಮ್ಮೆ ನಿಶ್ಯಬ್ಧ ಒಮ್ಮೆ ಯುದ್ಧ’ ಚಿತ್ರದ ಆಡಿಯೋವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಹೆಸರೇ ಹೇಳುವಂತೆ “ಒಮ್ಮೆ ನಿಶ್ಯಬ್ಧ ಒಮ್ಮೆ ಯುದ್ಧ’ ಶಾಂತಿ ಮತ್ತು ಯುದ್ಧದ ಎಳೆಯನ್ನು ಇಟ್ಟುಕೊಂಡು ತೆರೆಮೇಲೆ ಬರುತ್ತಿದೆ. ಇಲ್ಲಿ ಪ್ರೀತಿ-ಪ್ರೇಮದ ಜೊತೆಗೆ ಯುದ್ಧ ಕೂಡ ಇದೇ ಅದಕ್ಕಾಗಿ ಇದನ್ನೇ ಚಿತ್ರದ ಶೀರ್ಷಿಕೆಯನ್ನಾಗಿ ಇಟ್ಟುಕೊಂಡಿದ್ದೇವೆ ಎನ್ನುತ್ತದೆ ಚಿತ್ರತಂಡ. ಈ ಚಿತ್ರದಲ್ಲಿ ಯುವ ನಟ ಪ್ರಭು ಮುಂದಾರ್‌ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅರವಿಂದ ರಾವ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ, ಪ್ರವೀಣ್‌ ರಾಜ್‌ ಖಳನಾಯಕನಾಗಿ ಕಾಣಿಸಿಕೊಂಡರೆ, “ಎಡಕಲ್ಲು ಗುಡ್ಡದ ಮೇಲೆ’ ಖ್ಯಾತಿಯ ನಟ ದಿ. ಚಂದ್ರಶೇಖರ್‌ ಮತ್ತೂಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಾಮಕೃಷ್ಣ, ವಿಜಯ್‌ ಭೋಲೆನಾಥ್‌, ಮೊದಲಾದವರು ಚಿತ್ರದ ಇತರ ಕಲಾವಿದರ ತಾರಾಗಣ ಚಿತ್ರದಲ್ಲಿದೆ. 

ತೆಲುಗು ಮೂಲದ ನಿರ್ದೇಶಕ ಶ್ರೀನಾಗ್‌ “ಒಮ್ಮೆ ನಿಶ್ಯಬ್ಧ ಒಮ್ಮೆ ಯುದ್ಧ’ ಚಿತ್ರಕ್ಕೆ ಕಥೆ , ಚಿತ್ರಕಥೆ ಬರೆದು ನಿರ್ದೇಶಿಸಿ¨ªಾರೆ. ಕಿರಣ್‌ ವಾರಣಾಸಿ ಸಂಗೀತ ಸಂಯೋಜನೆಯ ಹಾಡುಗಳಿಗೆ ಕಂಚನ್‌ ಕೌಸ್ತುಭ ಸಾಲುಗಳನ್ನು ಬರೆದಿದ್ದಾರೆ. ಚಿತ್ರದ ದೃಶ್ಯಗಳಿಗೆ ಕಲ್ಯಾಣ್‌ ಸಮಿ ಛಾಯಾಗ್ರಹಣವಿದೆ. ರೋಲಿಂಗ್‌ ಡ್ರೀಮ್ಸ್‌ ಎಂಟರ್‌ಟೈನ್ಮೆಂಟ್ಸ್‌ ಬ್ಯಾನರ್‌ನಲ್ಲಿ ತೆಲುಗು ನಿರ್ಮಾಪಕ ಪ್ರವೀಣ್‌ ರಾಜ್‌, ಸುರೇಶ್‌ ಕುಮಾರ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಉಡುಪಿ, ಹೈದರಾಬಾದ್‌ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸದ್ಯ ತೆರೆಗೆ ಬರಲು ತಯಾರಿ ನಡೆಸುತ್ತಿರುವ ‘ಒಮ್ಮೆ ನಿಶ್ಯಬ್ಧ ಒಮ್ಮೆ ಯುದ್ಧ’ ಚಿತ್ರ ಡಿಸೆಂಬರ್‌ ಅಂತ್ಯದೊಳಗೆ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.