ಕಾಂಗ್ರೆಸ್ ಮುತ್ತಿಗೆ ಸಾಧ್ಯತೆ; ಬಿಎಸ್ವೈ ನಿವಾಸಕ್ಕೆ ಬಿಗಿ ಭದ್ರತೆ
Team Udayavani, Dec 3, 2018, 12:17 PM IST
ಶಿವಮೊಗ್ಗ: ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸೋಮವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.
ಮುತ್ತಿಗೆ ಹಾಕುವ ಹಿನ್ನಲೆಯಲ್ಲಿ ವಿನೋಭ ನಗರದಲ್ಲಿ ರುವ ಬಿಎಸ್ವೈ ನಿವಾಸಕ್ಕೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ನಿವಾಸಕ್ಕೆ ತೆರಳುವ ರಸ್ತೆಯಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲಾಗಿದೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಿಂದ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹಿರಂಗ ಸಭೆಯನ್ನೂ ಆಯೋಜಿಸಿಲಾಗಿದೆ.
ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೇಂದ್ರ ಸರ್ಕಾರದ ವೈಫಲ್ಯಗಳ ಪಟ್ಟಿಯನ್ನು ನೀಡುವ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಿದ್ದಾರೆ.
ಕಾರ್ಯಕರ್ತೆಯರು ಕೈಯಲ್ಲಿ ಪೊರಕೆಗಳನ್ನು ಹಿಡಿದಿದ್ದಾರೆ. ಎತ್ತಿನಗಾಡಿಯಲ್ಲಿ ಗ್ಯಾಸ್ ಸಿಲಿಂಡರ್ ಇರಿಸಿ ವಿಭಿನ್ನವಾಗಿ ಪ್ರತಿಭಟಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ