ವ್ಯಾಪಾರ ಉನ್ನತಿಗೆ ವೈಬ್ರೆಂಟ್‌ ಗುಜರಾತ್‌

Team Udayavani, Dec 5, 2018, 11:50 AM IST

vyapara.jpg

ಬೆಂಗಳೂರು: ಕೈಗಾರಿಕೋದ್ಯಮಿಗಳಿಗೆ ಹಾಗೂ ಬೃಹತ್‌ ವ್ಯಾಪಾರಿಗಳಿಗೆ ಬೇಕಾದ ಉತ್ತಮ ವಾತಾವರಣ ಗುಜರಾತ್‌ ಸರ್ಕಾರ ಸೃಷ್ಟಿಸಿಕೊಡುತ್ತಿರುವುದರಿಂದ ಹೂಡಿಕೆ ಪ್ರಮಾಣ ಹೆಚ್ಚುತ್ತಿದೆ ಎಂದು ಅಲ್ಲಿನ ಶಿಕ್ಷಣ ಸಚಿವ ಭುಪೇಂದ್ರಸಿನ್ಹಾ ಚೂಡಾಸಮ ಹೇಳಿದರು.

ವೈಬ್ರೆಂಟ್‌ ಗುಜರಾತ್‌-2019 ಜಾಗತಿಕ ವ್ಯಾಪಾರ ಸಮ್ಮೇಳನದ 9ನೇ ಆವೃತ್ತಿ 2019 ಜ. 18 ರಿಂದ 22ರವರೆಗೆ ನಡೆಯಲಿದ್ದು. ಈ ಸಂಬಂಧ ಮಂಗಳವಾರ ನಗರದಲ್ಲಿ ನಡೆದ ಹೂಡಿಕೆದಾರರೊಂದಿಗೆ ಸಂವಾದ ಮತ್ತು ರೋಡ್‌ ಶೋನಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ವೇಳೆ ಎಲ್ಲ ರಂಗದ ಅಭಿವೃದ್ಧಿಗೆ ಭದ್ರ ಬೂನಾದಿ ಹಾಕಿಕೊಟ್ಟಿದ್ದರು. ಅದರಂತೆ ಇಂದಿನ ಸರ್ಕಾರವೂ ಕೆಲಸ ಮಾಡುತ್ತಿದೆ. ಡಿಜಿಟಲ್‌ ಇಂಡಿಯಾ ಕಲ್ಪನೆಯ ಸಾಕಾರಕ್ಕಾಗಿ ಹತ್ತಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ರಾಜ್ಯದ 32 ಜಿಲ್ಲೆಗಳಲ್ಲೂ ಕೈಗಾರಿಕೆಗಳಿವೆ ಎಂದು ಹೇಳಿದರು.

ರಾಜ್ಯದ ಹೊರಗಿನ ಮತ್ತು ಸ್ಥಳೀಯ ಕೈಗಾರಿಕೋದ್ಯಮಿಗಳಿಗೆ ಅಗತ್ಯ ಭದ್ರತೆ ಒದಗಿಸುತ್ತಿದ್ದೇವೆ. ಇದರ ಜತೆಗೆ ಉದ್ಯಮ, ರೈತರು ಸಹಿತವಾಗಿ ಎಲ್ಲ ರಂಗದ ಕ್ಷೀಪ್ರ ಪ್ರಗತಿ ಸಾಧಿಸುತ್ತಿದ್ದೇವೆ. ಶುದ್ಧ ಕುಡಿಯುವ ನೀರು, ವಿದ್ಯುತ್‌ ಪೂರೈಕೆ, ರಸ್ತೆ, ಬಂದರು ಹೀಗೆ ಎಲ್ಲ ಕ್ಷೇತ್ರ ಅಭಿವೃದ್ಧಿ ಗಮನದಲ್ಲಿ ಇಟ್ಟುಕೊಂಡು ವೈಬ್ರೆಂಟ್‌ ಗುಜರಾತ್‌ ಜಾಗತಿಕ ವ್ಯಾಪಾರ ಸಮ್ಮೇಳನ 2003ರಿಂದ ನಡೆಸಿಕೊಂಡು ಬರುತ್ತಿದ್ದೇವೆ ಎಂದರು.

ಬ್ಯಾಂಕಿಂಗ್‌, ಫೈನಾನ್ಸ್‌, ಐಟಿ, ಕೃಷಿ, ಆಹಾರ, ಕೆಮಿಕಲ್‌, ಪೆಟ್ರೊಕೆಮಿಕಲ್‌, ಸಿನೆಮಾ, ಫಾರ್ಮಸಿ, ಶಿಕ್ಷಣ ಮತ್ತು ಕೌಶಲಾಭಿವೃದ್ಧಿ, ಡಿಫೆನ್ಸ್‌, ಅಟೋಮೊಬೈಲ್‌ ಸೇರಿದಂತೆ ನೂರಾರು ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಜಾಗತಿಕ ವ್ಯಾಪಾರ ಸಮ್ಮೇಳನ ಆಯೋಜಿಸಿದ್ದೇವೆ. ದೇಶ ವಿದೇಶಗಳಿಂದ 35 ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಸಂವಾದ, ಚರ್ಚೆ, ವಿಚಾರ ವಿನಿಮಯ ಹೀಗೆ ನಾನಾ ಕಾರ್ಯಕ್ರಮದ ಜತೆಗೆ ವ್ಯಾಪಾರ ಮತ್ತು ಹೂಡಿಕೆ ಸಂಬಂಧಿಸಿದ ಒಪ್ಪಂದಗಳು ನಡೆಯಲಿದೆ ಎಂದು ವಿವರಿಸಿದರು. ಗುಜರಾತಿನ ಹಿರಿಯ ಐಎಎಸ್‌ ಅಧಿಕಾರಿಗಳಾದ ಡಾ.ಜಯಂತಿ ರವಿ, ಮಮತಾ ವರ್ಮಾ, ಫಿಕ್ಕಿ ರಾಜ್ಯ ಘಟಕದ ಅಧ್ಯಕ್ಷ ಶೇಖರ್‌ ವಿಶ್ವನಾಥನ್‌ ಮೊದಲಾದವರು ಇದ್ದರು.

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.