ವೇದಾರ್ಥ ಚಿಂತನೆಗೆ ಬನ್ನಂಜೆ ಗೋವಿಂದಾಚಾರ್ಯ ಕರೆ

Team Udayavani, Dec 6, 2018, 11:06 AM IST

bannaje.jpg

ಉಡುಪಿ: ವೇದ ಅಧ್ಯಯನದ ಜತೆಗೆ ವೇದಾರ್ಥ ಚಿಂತನೆಗೆ ಮುಂದಾಗಬೇಕೆಂದು ಹಿರಿಯ ವಿದ್ವಾಂಸ ಡಾ| ಬನ್ನಂಜೆ ಗೋವಿಂದಾ ಚಾರ್ಯ ಕರೆ ನೀಡಿದರು.

ಉಜ್ಜಯಿನಿಯ ಮಹರ್ಷಿ ಸಾಂದೀಪನಿ ರಾಷ್ಟ್ರಿಯ ವೇದವಿದ್ಯಾ ಪ್ರತಿಷ್ಠಾನದ ವತಿಯಿಂದ ಪರ್ಯಾಯ ಶ್ರೀ ಪಲಿಮಾರು ಮಠ ಶ್ರೀಕೃಷ್ಣ ಮಠ, ಉಡುಪಿ ಸಂಸ್ಕೃತ ಕಾಲೇಜು ಮತ್ತು ಬೆಂಗಳೂರಿನ ಪೂರ್ಣಪ್ರಜ್ಞ ಸಂಶೋಧನ ಮಂದಿರದ ಸಹಭಾಗಿತ್ವದಲ್ಲಿ ರಾಜಾಂಗಣದಲ್ಲಿ ನಡೆಯುತ್ತಿರುವ ಮೂರು ದಿನಗಳ ದಕ್ಷಿಣ ಕ್ಷೇತ್ರೀಯ ವೇದ ಸಮ್ಮೇಳನದಲ್ಲಿ ಎರಡನೇ ದಿನವಾದ ಬುಧವಾರ ಸಮ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ವೇದಜ್ಞರೇ ಕಡಿಮೆ  ಅದರಲ್ಲೂ ವೇದಾರ್ಥ ಚಿಂತನೆ ಮಾಡುವವರು ಇನ್ನೂ ಕಡಿಮೆ ಎಂದರು. 

ಸಾಯಣಾಚಾರ್ಯರು ವೇದಾರ್ಥ ಚಿಂತನೆ ಮಾಡಿದ್ದರೂ ಅದು ಕರ್ಮಕಾಂಡ ಪ್ರಧಾನವಾಗಿದೆ. ಇದನ್ನು ಕಾಪಾಲಿ ಶಾಸಿಗಳೂ ಒಪ್ಪದೆ ಜ್ಞಾನಕಾಂಡ ಪ್ರಧಾನವಾಗಿರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಮಧ್ವಾಚಾರ್ಯರು ಜ್ಞಾನ ಕಾಂಡ ಪ್ರಧಾನವಾಗಿ ಭಾಷ್ಯ ಬರೆದಿ ದ್ದಾರೆ. ಇನ್ನಷ್ಟು ವೇದಾರ್ಥ ಚಿಂತನೆ ಈ ಮಾರ್ಗದಲ್ಲಿ ನಡೆಯಬೇಕಿದೆ ಎಂದು ಬನ್ನಂಜೆ ಆಶಿಸಿದರು.

ವೇದಗಳಿಗೇ ಸಮ್ಮಾನ
ಸಮ್ಮಾನ ನೆರವೇರಿಸಿದ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ವೇದಜ್ಞರಿಗೆ ಸಮ್ಮಾನ ಮಾಡುವುದೆಂದರೆ ವೇದಗಳಿಗೇ ಸಮ್ಮಾನ ಮಾಡಿದಂತೆ ಎಂದು ಅಭಿಪ್ರಾಯಪಟ್ಟರು. ಪೂರ್ಣಪ್ರಜ್ಞ ಸಂಶೋಧನ ಮಂದಿರದ ನಿರ್ದೇಶಕ ಡಾ| ಆನಂದತೀರ್ಥ ನಾಗಸಂಪಿಗೆಅವರು ಅಭಿನಂದನಾ ಭಾಷಣ ಮಾಡಿದರು. ಸಂಸ್ಕೃತ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌.ಲಕ್ಷ್ಮೀನಾರಾ ಯಣ ಭಟ್‌ ಉಪಸ್ಥಿತರಿದ್ದರು. 

ಗೋಷ್ಠಿಗಳು
ಸಂಸ್ಕೃತ ಕಾಲೇಜಿನ ಪ್ರಾಂಶುಪಾಲ ಡಾ| ಎನ್‌. ಲಕ್ಷ್ಮೀನಾರಾಯಣ ಭಟ್ಟರ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯಲ್ಲಿ ವಿದ್ವಾಂಸ ಹೆರ್ಗ ರವೀಂದ್ರ ಭಟ್‌, ಎರ್ನಾಕುಳಂ ಚಿನ್ಮಯ ವಿ.ವಿ. ಪ್ರಾಧ್ಯಾಪಕ ಡಾ| ರಾಮಕೃಷ್ಣ ಪೆಜತ್ತಾಯ, ಬೆಂಗಳೂರಿನ ಪ್ರಾಧ್ಯಾಪಕ ಕೆ. ಕೃಷ್ಣರಾಜ ಕುತ್ಪಾಡಿ, ಪುಣೆಯ ಸಂಶೋಧಕಿ ಡಾ| ಭಾಗ್ಯಲತಾ ಪ್ರಬಂಧ ಮಂಡಿಸಿದರು.

ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾ ಪೀಠದ ನಿವೃತ್ತ ಪ್ರಾಂಶುಪಾಲ ಪ್ರೊ| ಎ. ಹರಿದಾಸ ಭಟ್ಟರ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯಲ್ಲಿ ವೇದ ವಿದ್ವಾಂಸ ರಾದ ವಿ| ಸನತ್‌ಕುಮಾರ್‌ ಮತ್ತೂರು, ಕದ್ರಿ ಪ್ರಭಾಕರ ಅಡಿಗ, ಸುದರ್ಶನ ಸಾಮಗ, ಸಗ್ರಿ ರಾಘವೇಂದ್ರ ಉಪಾ ಧ್ಯಾಯ ಪ್ರಬಂಧ ಮಂಡಿಸಿದರು.  ಕೇರಳ ಶಂಕರಾಚಾರ್ಯ ವಿ.ವಿ. ನಿವೃತ್ತ ಪ್ರಾಧ್ಯಾಪಕ ರಾಮಕೃಷ್ಣ ಭಟ್‌ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯಲ್ಲಿ ತಿರುಪತಿ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದ ಪ್ರಾಧ್ಯಾಪಕರಾದ ಡಾ| ಗಣಪತಿ ಭಟ್‌, ಪ್ರೊ| ಎಂ.ಎಲ್‌.ಎನ್‌. ಮೂರ್ತಿ, ಬೆಂಗಳೂರು   ಸಂಸ್ಕೃತ ಕಾಲೇಜಿನ ಪ್ರಾಧ್ಯಾಪಕ ಅನಂತಕೃಷ್ಣ ಭಟ್‌ ಪ್ರಬಂಧ ಮಂಡಿಸಿದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.