50 ದಿನದತ್ತ “ದಿ ವಿಲನ್’: ಸುದೀಪ ಸಂತಸ
Team Udayavani, Dec 6, 2018, 4:43 PM IST
ಸುದೀಪ್ ಹಾಗೂ ಶಿವಣ್ಣ ಅಭಿನಯದ “ದಿ ವಿಲನ್’ ಚಿತ್ರ 50 ದಿನ ಪೂರೈಸಿ, ಅದ್ಭುತ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಯಶಸ್ವಿಗೆ ಕಾರಣವಾದ ಎಲ್ಲ ಅಭಿಮಾನಿಗಳಿಗೆ ಸುದೀಪ್ ಇಂದು ಟ್ವೀಟರ್ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ಹೌದು, ತೆರೆಕಂಡ ಮೊದಲ ವಾರದಲ್ಲೇ ₹70 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಂತ ಪ್ರೇಮ್ ನಿರ್ದೇಶನದ “ದಿ ವಿಲನ್’ ಚಿತ್ರ ಸ್ಯಾಂಡಲ್ವುಡ್ನಲ್ಲಿ ಭಾರೀ ನಿರೀಕ್ಷೆ ಮೂಡಿಸಿ ಅಕ್ಟೋಬರ್ 18 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದ ಬೆನ್ನಲ್ಲೆ ಈ ಚಿತ್ರಕ್ಕೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು. ಕಾಂಟ್ರವರ್ಸಿಗೆ ತುತ್ತಾಗಿದ್ದ ಈ ಚಿತ್ರ ಸದ್ಯ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ.
ಸುದೀಪ್, ತಮ್ಮ ಚಿತ್ರ ಯಶಸ್ವಿಗೆ ಕಾರಣವಾಗಿರುವ ಎಲ್ಲ ಅಭಿಮಾನಿಗಳಿಗೆ ಟ್ವಿಟ್ಟರ್ನಲ್ಲಿ ಥ್ಯಾಂಕ್ಸ್ ಹೇಳಿದ್ದು, “ಪ್ರೀತಿಯಿಂದ ಸ್ವಾಗತಿಸಿದ ನನ್ನ ಎಲ್ಲಾ ಸ್ನೇಹಿತರಿಗೂ ಧನ್ಯವಾದ. ನಿಮ್ಮ ಪ್ರೀತಿ ಹಾಗೂ ಸಪೋರ್ಟ್ನಿಂದ “ದಿ ವಿಲನ್’ ಸಿನಿಮಾ 50 ದಿನ ಪೂರೈಸಿ ಮುನ್ನುಗ್ಗುತ್ತಿದೆ’ ಎಂದು ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…