ಬಿಜೆಪಿ ಬೆಳವಣಿಗೆ ಕಂಡು “ದೀದಿ’ಗೆ ದಿಗಿಲು
Team Udayavani, Dec 8, 2018, 6:00 AM IST
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆ ಪಿಯ ಬೆಳವಣಿಗೆಯನ್ನು ಕಂಡು ಬೆಚ್ಚಿರುವ ಮಮತಾ ಬ್ಯಾನರ್ಜಿ, ಬಿಜೆಪಿಯ ಮೂರು ರಥಯಾತ್ರೆಗಳಿಗೆ ಅನುಮತಿ ನಿರಾಕರಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಿಡಿಕಾರಿದ್ದಾರೆ.
ಕೂಚ್ಬೆಹರ್ನಲ್ಲಿ ಶುಕ್ರವಾರ ಆರಂಭ ಗೊಳ್ಳ ಬೇಕಿದ್ದ ರಥಯಾತ್ರೆಗೆ ಮಮತಾ ಸರ್ಕಾರ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ್ದ ಬಿಜೆಪಿಗೆ ಕೋರ್ಟ್ ಅನುಮತಿ ಇನ್ನೂ ಸಿಕ್ಕಿಲ್ಲ. ಈ ಹಿನ್ನೆಲೆ ಯಲ್ಲಿ ನವದೆಹಲಿಯಲ್ಲಿ ಶುಕ್ರವಾರ ಮಮತಾ ವಿರುದ್ಧ ಅಸಮಾಧಾನ ವ್ಯಕಪಡಿಸಿದ ಅಮಿತ್ ಶಾ, “”ಪಶ್ಚಿಮ ಬಂಗಾಳದಲ್ಲಿ ಬದಲಾವಣೆ ಬೇಕಿದೆ. ಹಾಗಾಗಿ, ಯಾರೇ ಅಡ್ಡ ಬರಲಿ ರಥಯಾತ್ರೆ ನಡೆಸಿಯೇ ತೀರುತ್ತೇವೆ” ಎಂದು ಗುಡುಗಿದ್ದಾರೆ.
ಇನ್ನೊಂದೆಡೆ, ರಥಯಾತ್ರೆಗೆ ಅನುಮತಿ ಕೋರಿ ಬಿಜೆಪಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಪಶ್ಚಿಮ ಬಂಗಾಳ ಸರ್ಕಾರ ಸ್ಪಂದಿಸದ್ದಕ್ಕೆ ಕಲ್ಕತ್ತಾ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಥಯಾತ್ರೆಯ ಬಗ್ಗೆ ಡಿ.14ರೊಳಗೆ ನಿರ್ಧಾರ ಕೈಗೊಳ್ಳುವಂತೆ ಸರ್ಕಾರ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ