ವಿಲನ್‌ ತಂಡದ ಮೇಲೆ ಸುದೀಪ್‌ ಬೇಸರ?

Team Udayavani, Dec 8, 2018, 11:11 AM IST

villain.jpg

ಕನ್ನಡ ಚಿತ್ರರಂಗದಲ್ಲಿ ಈ ವರ್ಷ ಬಹುನಿರೀಕ್ಷೆ ಹುಟ್ಟಿಸಿದ ಚಿತ್ರಗಳಲ್ಲಿ “ದಿ ವಿಲನ್‌’ ಕೂಡ ಒಂದು. ಶಿವರಾಜಕುಮಾರ್‌ ಹಾಗೂ ಸುದೀಪ್‌ ಮೊದಲ ಬಾರಿಗೆ ಜೊತೆಯಾಗಿ ನಟಿಸಿದ ಸಿನಿಮಾ ಎಂಬುದು ಒಂದು ಕಾರಣವಾದರೆ, ಆರು ವರ್ಷಗಳ ನಂತರ ಪ್ರೇಮ್‌ ನಿರ್ದೇಶನ ಮಾಡಿದ ಸಿನಿಮಾ ಎಂಬುದು ಇನ್ನೊಂದು ಕಾರಣ. ಹೀಗೆ ನಿರೀಕ್ಷೆಗಳ ಮೂಟೆಯೊಂದಿಗೆ ಬಂದ ಚಿತ್ರ ಕಲೆಕ್ಷನ್‌ನಲ್ಲಿ ಜೋರು ಸದ್ದು ಮಾಡಿತು.

ಆರಂಭದಲ್ಲಿ ಚಿತ್ರತಂಡ ಕೂಡಾ ಖುಷಿಯಿಂದ ಚಿತ್ರದ ಕಲೆಕ್ಷನ್‌, ಕನ್ನಡ ಸಿನಿಮಾವೊಂದು ಈ ಮಟ್ಟದ ಕಲೆಕ್ಷನ್‌ ಮಾಡಿದ ರೀತಿಯ ಬಗ್ಗೆ ಮಾತನಾಡಿತು. ಈಗ ಚಿತ್ರ 50 ದಿನ ಪೂರೈಸಿದೆ. ಆದರೆ, ಆ ಸಂಭ್ರಮ ಚಿತ್ರತಂಡದಲ್ಲಿ ಕಾಣುತ್ತಿಲ್ಲ. ಅಭಿಮಾನಿಗಳಷ್ಟೇ ಫೇಸ್‌ಬುಕ್‌, ಟ್ವೀಟರ್‌ನಲ್ಲಿ “ದಿ ವಿಲನ್‌’ ಪೋಸ್ಟರ್‌ ಹಾಕುತ್ತಾ ಸಂಭ್ರಮಿಸುತ್ತಿದ್ದಾರೆ. ಚಿತ್ರವೊಂದು 50 ದಿನ ಓಡಿದರೂ ಅದಕ್ಕೆ ಸಂಬಂಧಪಟ್ಟವರು ಆಸಕ್ತಿ ತೋರಿಸದೇ ಇರುವುದು ಸುದೀಪ್‌ ಅವರಿಗೆ ಬೇಸರ ತಂದಂತಿದೆ.

ಸುದೀಪ್‌ ತಮ್ಮ ಅಭಿಮಾನಿಯೊಬ್ಬರಿಗೆ ಉತ್ತರಿಸಿದ ಟ್ವೀಟರ್‌ನಲ್ಲಿ ಆ ಬೇಸರ ಎದ್ದು ಕಾಣುತ್ತಿದೆ. ಟ್ವೀಟರ್‌ನಲ್ಲೊಬ್ಬರು “ದಿ ವಿಲನ್‌’ ಚಿತ್ರದ 50 ದಿನ ಸಂಭ್ರಮದ ಕುರಿತಾಗಿ ಪೋಸ್ಟರ್‌ವೊಂದನ್ನು ಡಿಸೈನ್‌ ಮಾಡಿ ಅದನ್ನು ಸುದೀಪ್‌ ಅವರೊಂದಿಗೆ ಹಂಚಿಕೊಂಡಿದ್ದರು. ಇದಕ್ಕೆ ಉತ್ತರಿಸಿರುವ ಸುದೀಪ್‌, “ನೀವುಗಳೆಲ್ಲ ಪ್ರೀತಿಯಿಂದ ಪೋಸ್ಟರ್‌ ಮಾಡುತ್ತಿರುವುದನ್ನು ನೋಡಿ ಖುಷಿಯಾಗುತ್ತಿದೆ.

ಆದರೆ, ಚಿತ್ರಕ್ಕೆ ಸಂಬಂಧಪಟ್ಟವರು ಕಾರಣಾಂತಗಳಿಂದ ಹೆಚ್ಚು ಆಸಕ್ತಿ ತೋರಿಸುತ್ತಿಲ್ಲ’ ಎಂದು ಟ್ವೀಟ್‌ ಮಾಡಿದ್ದಾರೆ. ಜೊತೆಗೆ, “ನಾನು ಯಾವತ್ತೂ ಹೇಳುವಂತೆ, ನಮ್ಮ ಸುತ್ತಮುತ್ತ ಅನೇಕ ಪಾಠಗಳಿರುತ್ತವೆ. ಅವುಗಳಿಂದ ಪಾಠ ಕಲಿತು ಮುಂದೆ ಸಾಗುತ್ತಿರಬೇಕು. ವಿಲನ್‌ ಸಿನಿಮಾ ಸಾಕಷ್ಟು ಒಳ್ಳೆಯ ನೆನಪುಗಳನ್ನು ನನಗೆ ಕೊಟ್ಟಿದೆ’ ಎಂದು ಟ್ವೀಟ್‌ ಮಾಡಿದ್ದಾರೆ. ಈ ಮೂಲಕ ಚಿತ್ರ 50 ದಿನ ಪೂರೈಸಿದರೂ ಚಿತ್ರಕ್ಕೆ ಸಂಬಂಧಿಸಿದವರು ಆಸಕ್ತಿ ತೋರಿಸುತ್ತಿಲ್ಲ ಎಂಬ ಬೇಸರವನ್ನು ಸುದೀಪ್‌ ಹೊರಹಾಕಿದ್ದಾರೆ. 

ಟಾಪ್ ನ್ಯೂಸ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.