ದೇವೇಗೌಡ, ಸಿದ್ದರಾಮಯ್ಯ ರೈತರ ಬಳಿಗೆ ಹೋಗಲಿ

Team Udayavani, Dec 13, 2018, 7:00 AM IST

181212kpn79.jpg

ವಿಧಾನಸಭೆ: ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಒಪ್ಪಂದದ ಸೂತ್ರಧಾರಿಗಳಾದ ಮಾಜಿ ಪ್ರಧಾನಿ ಎಚ್‌. ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಪೀಡಿತ ಪ್ರದೇಶಗಳಲ್ಲಿ ರೈತರ ಹೊಲಗಳಿಗೆ ಹೋಗಿ, ಪರಿಸ್ಥಿತಿಯ ಅಧ್ಯಯನ ಮಾಡಲಿ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದ್ದಾರೆ.

ಬರ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವ ದೇವೇಗೌಡರು, ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರು ಬರಪೀಡಿತ ಪ್ರದೇಶಗಳಲ್ಲಿನ ವಸ್ತುಸ್ಥಿತಿ ಅಧ್ಯಯನಕ್ಕೆ ಹೋದರೆ ಆಗಲಾದರೂ ಉಸ್ತುವಾರಿ ಸಚಿವರು ಅವರನ್ನು ಅನುಸರಿಸ ಬಹುದು ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಸ್ಥಿತಿ ಭೀಕರವಾಗಿದೆ. ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ನಡೆಸಿ ಬಂದಿರುವುದು ಬಿಟ್ಟರೆ ಬೇರೆ ಏನನ್ನೂ ಮಾಡಿಲ್ಲ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ವಿಡಿಯೋ ಕಾನ್ಫರೆನ್ಸ್‌ ಮಾಡಿ ಪತ್ರಿಕೆಗಳು, ಟಿವಿಗಳಿಗೆ ಬರ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಆದರೆ, ಇದರಿಂದ ಯಾವ ಪರಿಹಾರವೂ ಸಿಕ್ಕಿಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಅಷ್ಟು ಹಣ ಇದೆ, ಇಷ್ಟು ಹಣ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಆ ಹಣವನ್ನು ಇಟ್ಟುಕೊಂಡು ಏನು ಮಾಡಲು ಸಾಧ್ಯ. ಕುಡಿಯುವ ನೀರು ಪೂರೈಕೆಗೆ ಹಲವಾರು ಷರತ್ತು ಹಾಕಲಾಗಿದೆ. ಹೀಗಾಗಿ, ರೈತನ ಮಕ್ಕಳು ಈ ಸರ್ಕಾರದಲ್ಲಿ ಸಾಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ, ಈಶ್ವರಪ್ಪ ಅವರನ್ನು ಬೆಂಬಲಿಸಿದ ಬಿಜೆಪಿ ಸದಸ್ಯರು, ಬರಪೀಡಿತ ತಾಲೂಕುಗಳಿಗೆ 50 ಲಕ್ಷ ರೂ.ಬಿಡುಗಡೆ ಎಂದು ಹೇಳುತ್ತೀರಿ. ಆದರೆ, ಅದೇ ಹಣವನ್ನು ಶುದಟಛಿ ಕುಡಿಯುವ ನೀರಿನ ಘಟಕಗಳ ದುರಸ್ಥಿಗೂ ಬಳಕೆ ಮಾಡಲಾಗುತ್ತಿದೆ. ಮಲೆನಾಡಿನ ಕೆಲವು ತಾಲೂಕು ಗಳನ್ನು ಬರಪೀಡಿತ ಎಂದು ಘೋಷಿಸದಿದ್ದರೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದರು.

ಖಾಸಗಿ ಬೋರ್‌ವೆಲ್‌ ಮೂಲಕವೂ ನೀರು ಪೂರೈಕೆ: ಅದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಭೈರೇಗೌಡ, ಬರಪೀಡಿತ ತಾಲೂಕುಗಳಿಗೆ ಬಿಡುಗಡೆ ಮಾಡಿರುವ 50 ಲಕ್ಷ ರೂ.ಹಣವನ್ನು ಬೇರೆ ಬಾಬಿ¤ಗೆ ವೆಚ್ಚ ಮಾಡುವಂತಿಲ್ಲ. 50 ಲಕ್ಷ ರೂ.ಜತೆಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 226 ಕೋಟಿ ರೂ.ಇಡಲಾಗಿದೆ. ಜತೆಗೆ, ಜಿಲ್ಲಾ ಪಂಚಾಯಿತಿಗಳಿಗೆ ಕುಡಿಯುವ ನೀರು ಪೂರೈಕೆ ಗಾಗಿಯೇ 1,700 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಡಿಸೆಂಬರ್‌ ಅಂತ್ಯದೊಳಗೆ ಟೆಂಡರ್‌ ಕರೆದು ಕಾರ್ಯಾದೇಶ ಕಳುಹಿಸಲು ಸೂಚನೆ ನೀಡಲಾಗಿದೆ. ಬರಪೀಡಿತ ಪ್ರದೇಶದ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆಯಾದರೆ ತಕ್ಷಣವೇ ಖಾಸಗಿ ಬೋರ್‌ವೆಲ್‌ನ್ನು 10 ರಿಂದ 15 ಸಾವಿರ ರೂ.ಮಾಸಿಕ ಬಾಡಿಗೆ ಆಧಾರದಲ್ಲಿ ಪಡೆದು,ಟ್ಯಾಂಕರ್‌ ಮೂಲಕ ನೀರು ಪೂರೈಸಲು ಸೂಚಿಸಲಾಗಿದೆ. ಅದಕ್ಕೆ ಸರ್ಕಾರವೇ ಹಣ ಭರಿಸಲಿದೆ ಎಂದರು.

ಅಧಿಕೃತ ಪ್ರಕಟಣೆ ಹೊರಡಿಸಿ: ಈ ವೇಳೆ, ಯಡಿಯೂರಪ್ಪ ಮಾತನಾಡಿ, ಬರಪೀಡಿತ ಪ್ರದೇಶಗಳಲ್ಲಿ ಅನುದಾನ ವೆಚ್ಚ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿ, ಎಲ್ಲ ಶಾಸಕರಿಗೂ ಕೊಡಿ. ಅದನ್ನು ತೋರಿಸಿಯಾದರೂ ಅಧಿಕಾರಿಗಳ ಬಳಿ ಕೆಲಸ ಮಾಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.