ಶೂನಲ್ಲಿ ಡ್ರಗ್ಸ್‌ ಇರಿಸಿ ಮಾರಾಟ: ಮೂವರ ಸೆರೆ

Team Udayavani, Dec 14, 2018, 11:24 AM IST

shoe-drug.jpg

ಬೆಂಗಳೂರು: ಪೊಲೀಸರ ಕಣ್ಣು ತಪ್ಪಿಸಲು ಶೂ ಮತ್ತು ಸಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ಬಚ್ಚಿಟ್ಟು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾದ ಜಾನ್‌ ಕೆನಡಿ (37), ಕಾಂಗೋ ದೇಶದ ಕೆನಾನ್‌ ಅಡ್ಲಿ (32) ಮತ್ತು ಕೇಶವನಗರದ ಆದಿತ್ಯ (22) ಬಂಧಿತರು.

ಮತ್ತೂಬ್ಬ ವಿದೇಶಿ  ಪ್ರಜೆ ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ. ಬಂಧಿತರಿಂದ ನಕಲಿ ಪಾಸ್‌ಪೋರ್ಟ್‌ ಮತ್ತು ಒಂದು ಲಕ್ಷ ರೂ. ಮೌಲ್ಯದ 21.59 ಗ್ರಾಂ ತೂಕದ ಎಂಡಿಎಂಎ ಎಕ್ಸ್‌ಟಿಸಿ ಮಾತ್ರೆಗಳು ಮತ್ತು ಕ್ರಿಸ್ಟಿಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ. ಕೋರಮಂಗಲದ 8ನೇ ಬ್ಲಾಕ್‌ನ ಅಂಬೇಡ್ಕರ್‌ ಪಾರ್ಕ್‌ ಬಳಿ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವಾಗ ಆರೋಪಿಗಳನ್ನು ಮಾದಕ ವಸ್ತುಗಳ ಸಮೇತ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಇಬ್ಬರು ವಿದೇಶಿ ಪ್ರಜೆಗಳು ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾದಡಿ ಬೆಂಗಳೂರಿಗೆ ಬಂದಿದ್ದು, ಹೆಣ್ಣೂರಿನ ಮುದ್ದಣ್ಣ ಲೇಔಟ್‌ನಲ್ಲಿ ವಾಸವಾಗಿದ್ದರು. ಆದರೆ, ಆರೋಪಿ ಜಾನ್‌ ಕೆನಡಿ ಬಳಿ ಪತ್ತೆಯಾದ ಪಾಸ್‌ಪೋರ್ಟ್‌ ಮತ್ತು ವಿದ್ಯಾರ್ಥಿ ವೀಸಾ ನಕಲಿ ಎಂಬುದು ತಿಳಿದು ಬಂದಿದೆ. ಈ ಪಾಸ್‌ಪೋರ್ಟ್‌ ವಿದೇಶಿಯರ ನೋಂದಣಿ ಕಚೇರಿಯಲ್ಲಿ ನೊಂದಣಿಯಾಗಿಲ್ಲ.

ವೀಸಾ ನಂಬರ್‌ ಉಗಾಂಡ ಪ್ರಜೆಗೆ ಸೇರಿದ್ದಾಗಿದೆ. ಈ ಸಂಬಂಧ ಈ ಪಾಸ್‌ಪೋರ್ಟ್‌ ಅಸಲಿಯೋ? ನಕಲಿಯೋ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ನೈಜೀರಿಯಾ ರಾಯಭಾರ ಕಚೇರಿಗೆ ಪತ್ರ ಬರೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಮತ್ತೂಬ್ಬ ಆರೋಪಿ ಕೆನಾನ್‌ ಅಡ್ಲಿ, 2012ರ ಮಾರ್ಚ್‌ನಲ್ಲಿ ನಗರಕ್ಕೆ ಬಂದಿದ್ದು, ವೀಸಾ ಅವಧಿ ಅದೇ ವರ್ಷ ಸೆಪ್ಟೆಂಬರ್‌ನಲ್ಲಿ ಮುಕ್ತಾಯವಾಗಿದೆ. ಆದರೂ ಆರೋಪಿ ಅಕ್ರಮವಾಗಿ ಕಳೆದ ಆರು ವರ್ಷಗಳಿಂದ ನಗರದಲ್ಲೇ ವಾಸವಾಗಿದ್ದಾನೆ. ಆರೋಪಿಗಳು ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಆದರೆ, ಖಚಿತವಾಗಿಲ್ಲ. ಈ ಮಧ್ಯೆ ಜೀವನ ನಿರ್ವಹಣೆಗಾಗಿ ವಿದೇಶಗಳಿಂದ ಮಾದಕ ವಸ್ತುಗಳನ್ನು ತರಿಸಿ ನಗರದ ಕಾಲೇಜು ವಿದ್ಯಾರ್ಥಿಗಳು, ಸಾಪ್ಟ್ವೇರ್‌ ಇಂಜಿನಿಯರ್‌ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಮೂರನೇ ಆರೋಪಿ ಆದಿತ್ಯ ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಬಂಧಿತ ಇಬ್ಬರು ವಿದೇಶಿ ಪ್ರಜೆಗಳಿಂದ ಎಂಡಿಎಂ ಎಕ್ಸಿಟೆಸಿ ಮಾತ್ರೆಗಳು ಹಾಗೂ ಕ್ರಿಸ್ಟೆಲ್‌ಗ‌ಳನ್ನು ಖರೀದಿಸಿ ತನಗೆ ಪರಿಚಯವಿರುವ ವಿದ್ಯಾರ್ಥಿಗಳು ಹಾಗೂ ಇತರರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ಶೂ ಮತ್ತು ಸಾಕ್ಸ್‌ಗಳಲ್ಲಿ ಸಾಗಾಟ: ಇಬ್ಬರು ವಿದೇಶಿ ಪ್ರಜೆಗಳು ಪೊಲೀಸರ ಕಣ್ಣು ತಪ್ಪಿಸಲು ತಾವು ಧರಿಸುತ್ತಿದ್ದ ಶೂ ಮತ್ತು ಸಾಕ್ಸ್‌ಗಳಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಅಲ್ಲದೆ, ಆರೋಪಿ ಆದಿತ್ಯನಿಗೂ ಸಹ ಇದೇ ಮಾರ್ಗದ ಮೂಲಕ ಮಾದಕ ವಸ್ತು ಸರಬರಾಜು ಮಾಡುತ್ತಿದ್ದರು. ಬಳಿಕ ಈತ ಸಣ್ಣ-ಸಣ್ಣ ಪ್ಯಾಕೆಟ್‌ಗಳನ್ನಾಗಿ ಮಾಡಿ ಪ್ರತಿ ಗ್ರಾಂ 2 ರಿಂದ 3 ಸಾವಿರ ರೂ.ಗೆ ಬೇರೆಡೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.