ಚಾಮುಂಡೇಶ್ವರಿಗೂ ಮುಷ್ಕರದ ಬಿಸಿ

Team Udayavani, Dec 15, 2018, 6:41 AM IST

59.jpg

ಮೈಸೂರು: ದೂರದ ಊರುಗಳಿಂದ ಬಂದಿದ್ದರೂ ಸಿಗಲಿಲ್ಲ ನಾಡದೇವತೆಯ ಪೂಜೆಯನ್ನು ಕಣ್ತುಂಬಿಕೊಳ್ಳುವ ಭಾಗ್ಯ, ಜತೆಗೆ ಕುಂಕುಮ, ತೀರ್ಥ, ಲಾಡು ಪ್ರಸಾದ ಪಡೆಯುವ ಅವಕಾಶ… ಇದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ಸಿಬ್ಬಂದಿ ವೇತನ ಹೆಚ್ಚಳಕ್ಕಾಗಿ ನಡೆಸಿದ ಮುಷ್ಕರದಿಂದ ಭಕ್ತರು ಅನುಭವಿಸಿದ ತೊಂದರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಚಾಮುಂಡೇಶ್ವರಿ ದೇವಾಲಯದಲ್ಲಿ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಕಾರಣ ಚಾಮುಂಡಿ ದೇವಳದ ಅರ್ಚಕರು ಮತ್ತು ಸಿಬ್ಬಂದಿ ಮುಷ್ಕರ.

ಬೆಟ್ಟದಲ್ಲಿ ಅರ್ಚಕರು, ಸಿಬ್ಬಂದಿ ಈವರೆಗೂ ಸಾಕಷ್ಟು ಬಾರಿ ಪ್ರತಿಭಟನೆಗಳನ್ನು ನಡೆಸಿದ್ದರೂ, ಇದೇ ಮೊದಲ ಬಾರಿಗೆ ಅರ್ಚಕರು ದೊಡ್ಡಮಟ್ಟದ ಹೋರಾಟ ಕೈಗೊಂಡಿದ್ದಾರೆ. ಅರ್ಚಕರು ಹಾಗೂ ಸಿಬ್ಬಂದಿ ಪ್ರತಿಭಟನೆಯಿಂದ ಭಕ್ತರಿಗೆ ಯಾವುದೇ ತೊಂದರೆ ಆಗಬಾರದೆಂಬ ಕಾರಣಕ್ಕೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಪ್ರತಿಭಟನೆ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮುಂಜಾನೆಯ ಪೂಜೆಯನ್ನು ಹೊರತುಪಡಿಸಿ ನಂತರದಲ್ಲಿ ಯಾವುದೇ ಪೂಜೆ ಹಾಗೂ ಇನ್ನಿತರ ಸೇವೆಗಳು ನಡೆಯಲಿಲ್ಲ.

ಚಾಮುಂಡೇಶ್ವರಿಯ ದರ್ಶನಕ್ಕೆ ಬಂದ ಭಕ್ತರಿಗೆ ಕೇವಲ ದೇವಿಯ ದರ್ಶನ ಪಡೆಯುವ ಅವಕಾಶ ಮಾತ್ರ ಲಭಿಸಿತು. ಉಳಿದಂತೆ ಮಂಗಳಾರತಿ, ಅಭಿಷೇಕ, ತೀರ್ಥ, ಪ್ರಸಾದ ವಿತರಣೆ ಜತೆಗೆ ಲಾಡು ಪ್ರಸಾದದ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ದೇವಸ್ಥಾನದ ಸಿಬ್ಬಂದಿ ಮುಷ್ಕರದಿಂದಾಗಿ ದೇವರ ದರ್ಶನ ಪಡೆಯಲು ಭಕ್ತರು ಗಂಟೆಗಟ್ಟಲೇ ಸರದಿ ಸಾಲಿನಲ್ಲಿ ಕಾದು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿಧಾನಸಭೆಯಲ್ಲಿ ಪ್ರಸ್ತಾಪ: ವಿಶ್ವವಿಖ್ಯಾತ ಮೈಸೂರಿನ ಚಾಮುಂಡೇಶ್ವರಿ ದೇವಾಲಯದಲ್ಲಿ 175 ಮಂದಿ ಅರ್ಚಕರು, ಸಹಾಯಕರು ಸೇರಿ ಅಲ್ಲಿನ ಸಿಬ್ಬಂದಿ ಧರಣಿ ಮಾಡುತ್ತಿರು ವುದರಿಂದ ಪೂಜೆ, ಸೇವೆ ನಿಂತು ಕೇವಲ ದರ್ಶನ ಮಾತ್ರ ಅವಕಾಶ ಇದೆ. ಇದರಿಂದ ಸಾವಿರಾರು ಭಕ್ತರಿಗೆ ತೊಂದರೆಯಾಗುತ್ತಿದೆ ಎಂದು ಬಿಜೆಪಿಯ ರಾಮದಾಸ್‌ ಸದನದ ಗಮನ ಸೆಳೆದು ತಕ್ಷಣ ಸೂಕ್ತ ಕ್ರಮ
ಕೈಗೊಳ್ಳಲು ಆಗ್ರಹಿಸಿದರು.

ಅರ್ಚಕ ಸಿಬ್ಬಂದಿಯ ಧರಣಿ ಗಮನಕ್ಕೆ ಬಂದಿದೆ. ಅಲ್ಲಿನ ಸಿಬ್ಬಂದಿಯ ಪೈಕಿ 95 ಜನರಿಗೆ 5ನೇ ವೇತನ ಆಯೋಗದ ಶಿಫಾರಸು ಪ್ರಕಾರ ವೇತನ ನೀಡಲಾಗುತ್ತಿದೆ. ಉಳಿದವರಿಗೆ ಅದೇ ವೇತನ ನೀಡುವ ಬಗ್ಗೆ ಪರಿಶೀಲಿಸುತ್ತೇವೆ.
 ● ರಾಜಶೇಖರ ಪಾಟೀಲ ಹುಮ್ನಾಬಾದ್‌,ಮುಜರಾಯಿ ಸಚಿವ 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.