ಛಾಪಾಕಾಗದ ಮಾರಾಟ: ಸೆರೆ

Team Udayavani, Dec 15, 2018, 12:31 PM IST

chapakagada.jpg

ಬೆಂಗಳೂರು: ನಿಷೇಧಿತ ಛಾಪಾಕಾಗದ ದಂಧೆಯನ್ನು ಬಯಲಿಗೆಳೆದಿರುವ ಶಿವಾಜಿನಗರ ಠಾಣೆ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸರಸ್ವತಿಪುರಂ ನಿವಾಸಿ ಎಂ.ರಾಘವನ್‌, ಆತನ ಸಹೋದರ ಮುರುಗೇಶ್‌, ಹನುಮಂತನಗರ ನಿವಾಸಿ ಕುಮಾರ್‌ ಬಂಧಿತರು. ದಂಧೆಯ ಪ್ರಮುಖ ಸೂತ್ರಧಾರ ಎನ್ನಲಾದ ಗೋಪಾಲರಾವ್‌ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.

ಕೆಲ ದಿನಗಳ ಹಿಂದೆ ಶಿವಾಜಿನಗರದ ರಸಲ್‌ ಮಾರ್ಕೆಟ್‌ನಲ್ಲಿ ನಿಷೇಧಿತ ಛಾಪಾ ಕಾಗದಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಆಧರಿಸಿ ಮಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಮುರುಗನ್‌ ಸಿಕ್ಕಿಬಿದ್ದಿದ್ದು, ಆತನ ಬಳಿ 1987ರ ಆಗಸ್ಟ್‌ ತಿಂಗಳ ಸೀಲು ( ಮೊಹರು) ಹೊಂದಿರುವ ಛಾಪಾ ಕಾಗದ ಸಿಕ್ಕಿತು. ಕೂಡಲೇ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಇತರೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದ.

ಈ ಮಾಹಿತಿ ಆಧರಿಸಿ ರಾಘವನ್‌ ಹಾಗೂ ಕುಮಾರ್‌ನನ್ನು ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಆರೋಪಿಗಳಿಂದ ಹತ್ತು ರೂ. ಮೌಲ್ಯದ 1 ಹಾಗೂ ಐದು ರೂ. ಮೌಲ್ಯದ 2 ನಿಷೇಧಿತ ಛಾಪಾ ಕಾಗದಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಆರೋಪಿಗಳು 1 ಛಾಪಾ ಕಾಗದಕ್ಕೆ ಸಾವಿರದಿಂದ ಎರಡು ಸಾವಿರ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಯಾರು ಛಾಪಾ ಕಾಗದಗಳನ್ನು ಖರೀದಿಸುತ್ತಿದ್ದರು, ಯಾವ ಉದ್ದೇಶಕ್ಕೆ ಬಳಕೆಯಾಗುತ್ತಿದ್ದವು ಎಂಬುದು ಗೊತ್ತಾಗಿಲ್ಲ. ಈ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ ಎಂದು ಅಧಿಕಾರಿ ಹೇಳಿದರು.

ನೋಟರಿಯಾಗಿದ್ದ ಕಿಂಗ್‌ಪಿನ್‌: ತಲೆಮರೆಸಿಕೊಂಡಿರುವ ಆರೋಪಿ ಗೋಪಾಲರಾವ್‌, ನಗರದ ನ್ಯಾಯಾಲಯಗಳ ಸಮೀಪ ನೋಟರಿ ಕೆಲಸ ಮಾಡುತ್ತಿದ್ದು, ಆತನೇ ಛಾಪಾ ಕಾಗದಗಳನ್ನು ನೀಡುತ್ತಿದ್ದ ಎಂದು ಆರೋಪಿಗಳು ಹೇಳಿದ್ದಾರೆ.  ಆತನ, ಬಂಧನದ ಬಳಿಕ ದಂಧೆಯ ಕುರಿತು ಮತ್ತಷ್ಟು ಮಾಹಿತಿ ಸಿಗಲಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.