ರಫೇಲ್‌ ತೀರ್ಪು ತಿದ್ದುಪಡಿಗೆ ಮನವಿ

Team Udayavani, Dec 16, 2018, 6:00 AM IST

buy-rafale-war-aircraft.jpg

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸರ್ಕಾರಕ್ಕೆ ಕ್ಲೀನ್‌ಚಿಟ್‌ ನೀಡಿದ ತೀರ್ಪಿನಲ್ಲಿ ತಪ್ಪು ನುಸುಳಿದೆ ಎಂದು ಕೇಂದ್ರ ಸರ್ಕಾರ ಈಗ ಕೋರ್ಟ್‌ ಮೊರೆ ಹೋಗಿದೆ. 

ಒಪ್ಪಂದದ ಬೆಲೆ ವಿವರಕ್ಕೆ ಸಂಬಂಧಿಸಿದಂತೆ ಮಹಾಲೇಖಪಾಲರ ವರದಿ(ಸಿಎಜಿ)ಯನ್ನು ಸಂಸದೀಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ (ಪಿಎಸಿ) ಗೆ ಸಲ್ಲಿಸಲಾಗಿದೆ ಮತ್ತು ಪರಿಷ್ಕರಿಸಿದ ಆವೃತ್ತಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ ಎಂದು ಸುಪ್ರೀಂಕೋರ್ಟ್‌ ತೀರ್ಪಿನಲ್ಲಿ ಉಲ್ಲೇಖೀಸಿದ ಮಾಹಿತಿಯನ್ನು ಸರಿಪಡಿಸುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿದೆ.

ಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ಮಾಹಿತಿಯ ವ್ಯಾಖ್ಯಾನ ತಪ್ಪಾಗಿದೆ ಎಂದು ಹಿರಿಯ ವಕೀಲರು ತಿಳಿಸಿದ್ದಾರೆ. ವಾಕ್ಯ ರಚನೆಯಲ್ಲಿನ ದೋಷದಿಂದಾಗಿ ತೀರ್ಪಿನಲ್ಲಿರುವ ಒಂದು ಪ್ಯಾರಾ ತಪ್ಪು ಅರ್ಥ ನೀಡುತ್ತಿದೆ. ಅದರಲ್ಲಿ ತಿದ್ದುಪಡಿ ಮಾಡಬೇಕಿದೆ ಎಂದು ವಿವರಿಸಿ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ ಎನ್ನಲಾಗಿದೆ.

ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಪಿಎಸಿ ಮುಖ್ಯಸ್ಥರಾಗಿದ್ದು, ರಫೇಲ್‌ಗೆ ಸಂಬಂಧಿಸಿದ ಯಾವುದೇ ವರದಿಯನ್ನು ನೀಡಿಲ್ಲ ಎಂದಿದ್ದರು. ಅಲ್ಲದೆ ಪಿಎಸಿ ವರದಿ ಸಂಸತ್ತಿನಲ್ಲೂ ಮಂಡಿಸಲಾಗಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಆದರೆ ಕೋರ್ಟ್‌ ಅನ್ನು ನಾವು ತಪ್ಪುದಾರಿಗೆ ಎಳೆದಿಲ್ಲ. ಬದಲಿಗೆ ವರದಿಯಲ್ಲಿ ಅಚ್ಚು ದೋಷ ನುಸುಳಿದೆ ಎಂದು ಸರ್ಕಾರ ಸಮರ್ಥನೆ ಮಾಡಿಕೊಂಡಿದೆ.

ಮಹಾಲೇಖಪಾಲರಿಗೆ ನೋಟಿಸ್‌ ನೀಡುತ್ತೇವೆ:
ತೀರ್ಪು ಬಂದ ಬೆನ್ನಲ್ಲೇ ಶನಿವಾರ ದೆಹಲಿಯಲ್ಲಿ ಮಾತನಾಡಿದ ಪಿಎಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು, ಸಿಎಜಿ ವರದಿಯನ್ನು ಯಾವಾಗ ಸಂಸತ್ತಿನಲ್ಲಿ ಮಂಡಿಸಲಾಗಿದೆ ಎಂಬ ಬಗ್ಗೆ ಸಿಎಜಿ ಹಾಗೂ ಅಟಾರ್ನಿ ಜನರಲ್‌ರನ್ನು ಕರೆಸಿ ಪ್ರಶ್ನಿಸಲಿದ್ದೇವೆ ಎಂದು ಹೇಳಿದ್ದಾರೆ. ಸಿಎಜಿ ವರದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಸರ್ಕಾರ ತಪ್ಪು ಮಾಹಿತಿ ನೀಡಿದೆ. ಸರ್ಕಾರ ಕ್ಷಮೆ ಯಾಚಿಸಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

ಬೆಲೆ ವಿವರಗಳನ್ನು ಪರಿಗಣಿಸಿಲ್ಲ:
ಬೆಲೆ ಹಾಗೂ ತಾಂತ್ರಿಕ ವಿವರಗಳನ್ನು ಸುಪ್ರೀಂಕೋರ್ಟ್‌ ಪರಿಶೀಲನೆ ನಡೆಸಿಲ್ಲ. ಕೋರ್ಟ್‌ಗೆ ಸರ್ಕಾರ ಬೆಲೆ ಹಾಗೂ ತಾಂತ್ರಿಕ ಮಾಹಿತಿಯನ್ನು ನೀಡಿಲ್ಲ. ಸಿಎಜಿಗೆ ಸರ್ಕಾರ ಮಾಹಿತಿ ನೀಡಿದೆ. ಹೀಗಾಗಿ ಜಂಟಿ ಸಂಸದೀಯ ಸಮಿತಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಮುಖಂಡ ಕಪಿಲ್‌ ಸಿಬಲ್‌ ಆಗ್ರಹಿಸಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಸರ್ಕಾರ ತಪ್ಪು ಮಾಹಿತಿ ನೀಡಿದ್ದು, ಇದಕ್ಕೆ ಯಾರು ಹೊಣೆ ಎಂದು ಸಿಬಲ್‌ ಪ್ರಶ್ನಿಸಿದ್ದಾರೆ.

ಭಾರತವನ್ನು ಅವಮಾನಿಸಲು ರಾಹುಲ್‌ ಸಂಚು:
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನ ಮಾಡುವುದಕ್ಕೆಂದು ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದವನ್ನು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರೋಧಿಸುತ್ತಿದ್ದಾರೆ ಎಂದು ತ್ರಿಪುರಾ ಸಿಎಂ ಬಿಪ್ಲಬ್‌ ಕುಮಾರ್‌ ದೇಬ್‌ ಹೇಳಿದ್ದಾರೆ. ಮನಮೋಹನ ಸಿಂಗ್‌ ನೇತೃತ್ವದಲ್ಲಿ 10 ವರ್ಷಗಳವರೆಗೆ ಕಾಂಗ್ರೆಸ್‌ ಅಧಿಕಾರ ನಡೆಸಿದೆ. ಆದರೂ ಯಾಕೆ ರಫೇಲ್‌ ಒಪ್ಪಂದವನ್ನು ಅಂತಿಮಗೊಳಿಸಲು ಸಾಧ್ಯವಾಗಲಿಲ್ಲ ಎಂದು ದೇಬ್‌ ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಭದ್ರತೆ ಎಂಬುದು ಕಾಂಗ್ರೆಸ್‌ಗೆ ಒದೆಯೋ ಚೆಂಡು!
ಕಾಂಗ್ರೆಸ್ಸಿಗೆ ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣಾ ವಲಯವು ಒದೆಯುವ ಚೆಂಡು ಇದ್ದಂತೆ. ಅದು ಒಂದು ಫ‌ಂಡ್‌ನ‌ ಮೂಲವೂ ಹೌದು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ತಮಿಳುನಾಡು ಬಿಜೆಪಿ ಕಾರ್ಯಕರ್ತರೊಂದಿಗೆ ನವದೆಹಲಿಯಿಂದ ಶನಿವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು, ಒಂದೆಡೆ ಸರ್ಜಿಕಲ್‌ ದಾಳಿ ಬಗ್ಗೆ ಕಾಂಗ್ರೆಸ್‌ ಅಪಹಾಸ್ಯ ಮಾಡುತ್ತದೆ. ಇನ್ನೊಂದೆಡೆ ರಕ್ಷಣಾ ಖರೀದಿಯಲ್ಲಿ ಅವ್ಯವಹಾರ ಮಾಡುತ್ತಾರೆ. 1950ರ ಕಾಲದಲ್ಲಿ ಜೀಪ್‌ ಖರೀದಿ, 80ರ ದಶಕದಲ್ಲಿ ಬೋಫೋರ್ಸ್‌, ನಂತರ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಮತ್ತು ಸಬ್‌ಮರೀನ್‌ ಹಗರಣಗಳು… ಹೀಗೆ ಕಾಂಗ್ರೆಸ್‌ ನಮ್ಮ ರಕ್ಷಣಾ ವಲಯವನ್ನು ಲೂಟಿ ಮಾಡುತ್ತಲೇ ಬಂದಿದೆ. ನಮ್ಮ ರಕ್ಷಣಾ ಪಡೆಗಳಿಗೆ ಅವಮಾನ ಮಾಡಿಯಾದರೂ ಸರಿ, ತಾವು ಹಣ ಮಾಡಬೇಕು ಎನ್ನುವುದು ಕಾಂಗ್ರೆಸ್‌ನ ಯೋಚನೆಯಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.