ಗ್ರಾಮ ವಾಸ್ತವ್ಯದಲ್ಲಿ ಕಾನೂನಿನಡಿ ಪರಿಹಾರ

Team Udayavani, Dec 18, 2018, 1:50 AM IST

senthil-17-12.jpg

ಪುತ್ತೂರು: ಮುಖ್ಯಮಂತ್ರಿಗಳ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನ ಕುತ್ಲೂರಿನಲ್ಲಿ ಗ್ರಾಮ ವಾಸ್ತವ್ಯ ನಡೆಯಲಿದೆ. ಗ್ರಾಮಸ್ಥರ ಬೇಡಿಕೆಯನ್ನು ಕಾನೂನಿನ ಚೌಕಟ್ಟಿನಲ್ಲಿ ಈಡೇರಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಸೂಚಿಸಿದರು. ದ.ಕ. ಜಿಲ್ಲಾಡಳಿತ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಡಿ. 23ರಂದು ನಡೆಯುವ ಗ್ರಾಮ ವಾಸ್ತವ್ಯ, ಉಚಿತ ವೈದ್ಯಕೀಯ ಶಿಬಿರದ ಹಿನ್ನೆಲೆಯಲ್ಲಿ ಪುತ್ತೂರು ಮಿನಿ ವಿಧಾನಸೌಧದಲ್ಲಿ ಡಿ. 17ರಂದು ಸಂಜೆ ನಡೆದ ಸಭೆಯಲ್ಲಿ ಮಾತನಾಡಿದರು.

ಗ್ರಾಮ ವಾಸ್ತವ್ಯದ ಸಂದರ್ಭ ಆಧಾರ್‌ ಕಾರ್ಡ್‌ ಮತ್ತು ಪಡಿತರ ಚೀಟಿಯ ಕುರಿತು ಸ್ಥಳದಲ್ಲೇ ಕ್ರಮ ತೆಗೆದುಕೊಳ್ಳಬೇಕು. ಎಲ್ಲ ಇಲಾಖಾಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಕೆಲಸಗಳನ್ನು ಮಾಡಿಕೊಡಬೇಕು. ಗ್ರಾಮದ ಜನರೊಂದಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಪತ್ರಕರ್ತರು, ಸಂಘ ಸಂಸ್ಥೆಗಳ ಜತೆಯಾಗಿ ಗ್ರಾಮದ ಸಮಗ್ರ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸುವ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನ ಇದಾಗಿದೆ ಎಂದರು.

ಡಿ. 23ರಂದು ಪೂರ್ವಾಹ್ನ 10 ಗಂಟೆಗೆ ಕುತ್ಲೂರಿನಲ್ಲಿ ಸಾಂಕೇತಿಕವಾಗಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಸೂಕ್ತ ಬಂದೋ ಬಸ್ತ್ ವ್ಯವಸ್ಥೆಯನ್ನು ಪೊಲೀಸ್‌ ಇಲಾಖೆ ಮಾಡಬೇಕು. ಸಂವಾದದಲ್ಲಿ ಗ್ರಾಮಸ್ಥರು ಸಲ್ಲಿಸುವ ಬೇಡಿಕೆಗಳನ್ನು ಸರಿಯಾಗಿ ಮನದಟ್ಟು ಮಾಡಿ ಉತ್ತರ ನೀಡಬೇಕು ಎಂದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ ಮಾತನಾಡಿ, ಜಿಲ್ಲೆಯ 80 ಪತ್ರಕರ್ತರು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. 

ಉದ್ಘಾಟನೆ ಬಳಿಕ ಎ.ಜೆ. ಆಸ್ಪತ್ರೆ ಸಹಯೋಗದಲ್ಲಿ ವೈದ್ಯಕೀಯ ಶಿಬಿರ ನಡೆಯಲಿದೆ. ಬಳಿಕ ಎರಡು ಅವಧಿಗಳಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮತ್ತು ಇತರ ಜನಪ್ರತಿನಿಧಿಗಳೊಂದಿಗೆ ಗ್ರಾಮಸ್ಥರು ಸಂವಾದ ನಡೆಸಲಿದ್ದಾರೆ. ಕುತ್ಲೂರಿನ ಹಿರಿಯರೊಂದಿಗೆ ಚಾವಡಿ ಚರ್ಚೆಯನ್ನು ಆಯೋಜಿಸಲಾಗಿದೆ. ರಾತ್ರಿ 20 ಪತ್ರಕರ್ತರು ಮಾತ್ರ ಗ್ರಾಮ ವಾಸ್ತವ್ಯ ನಡೆಸುತ್ತಾರೆ. ಗ್ರಾಮ ವಾಸ್ತವ್ಯದ ಅಧ್ಯಯನ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು ಎಂದರು. ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣಮೂರ್ತಿ, ತಹಶೀಲ್ದಾರ್‌ ಅನಂತಶಂಕರ ಉಪಸ್ಥಿತರಿದ್ದರು.

ಉದ್ಘಾಟನೆ
ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯ ಕ್ರಮವನ್ನು ಜಿಲ್ಲಾಧಿಕಾರಿ ಎಸ್‌. ಶಶಿಕಾಂತ್‌ ಸೆಂಥಿಲ್‌ ಉದ್ಘಾಟಿಸುವರು. ವೈದ್ಯಕೀಯ ಶಿಬಿರವನ್ನು ಜಿ.ಪಂ. ಸಿಇಒ ಡಾ| ಸೆಲ್ವಮಣಿ ಆರ್‌. ಉದ್ಘಾಟಿಸಲಿದ್ದಾರೆ. ಎಸ್ಪಿ ಡಾ| ಬಿ.ಆರ್‌. ರವಿಕಾಂತೇ ಗೌಡ ಸಂವಾದಕ್ಕೆ ಚಾಲನೆ ನೀಡುವರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸುವರು. ಬೆಳ್ತಂಗಡಿ ತಾ| ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳಂಜ, ಮಂಗಳೂರು ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಉಪಾಧ್ಯಕ್ಷ ಪ್ರಶಾಂತ್‌ ಶೆಟ್ಟಿ, ನಾರಾವಿ ಗ್ರಾ.ಪಂ. ಅಧ್ಯಕ್ಷ ರವೀಂದ್ರ ಪೂಜಾರಿ ಉಪಸ್ಥಿತರಿರುವರು.

ಟಾಪ್ ನ್ಯೂಸ್

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.