ಕಾಂಗ್ರೆಸ್‌ನಿಂದ ಯುವ ಕ್ರಾಂತಿ ಯಾತ್ರೆ


Team Udayavani, Dec 18, 2018, 5:24 PM IST

cta.jpg

ಚಿತ್ರದುರ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಸುಳ್ಳು ಭರವಸೆಗಳ ಮೂಲಕ ದೇಶದ ಜನರನ್ನು ವಂಚಿಸಿರುವುದನ್ನು
ತಿಳಿಸಲು ಕಾಂಗ್ರೆಸ್‌ನಿಂದ ಯುವ ಕ್ರಾಂತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ
ಮಧು ಪಾಲೇಗೌಡ ಹೇಳಿದರು. 

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿಯವರ ಸರ್ವಾಧಿಕಾರಿ ಧೋರಣೆಯಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ದುರ್ಬಲಗೊಳ್ಳುತ್ತಿದೆ. ರೂಪಾಯಿ ಮೌಲ್ಯ ಕುಸಿದು ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿಯವರು ವಿರೋಧ ಪಕ್ಷಗಳ
ಮುಖಂಡರನ್ನು ಗುರಿಯಾಗಿರಿಸಿ ಸಿಬಿಐ, ಇಡಿ ಮತ್ತಿತರ ಸಂಸ್ಥೆಗಳ ಮೂಲಕ ದಬ್ಟಾಳಿಕೆ, ದೌರ್ಜನ್ಯ ಎಸಗುತ್ತಿದ್ದಾರೆ. ನಿರುದ್ಯೋಗಿ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ನಂಬಿಸಿ ವಂಚನೆ ಮಾಡಿದ್ದಾರೆ. ಇದನ್ನು ದೇಶದ ಜನತೆಗೆ ತಿಳಿಸುವುದಕ್ಕಾಗಿ ಕನ್ಯಾಕುಮಾರಿಯಿಂದ ಹಿಮಾಲಯಕ್ಕೆ ಹೊರಟಿರುವ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್‌ ಕ್ರಾಂತಿ ಯಾತ್ರೆ ಡಿ. 20ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಅಧ್ಯಕ್ಷ ಎಂ.ಡಿ. ಹಸನ್‌ ತಾಹೀರ್‌ ಮಾತನಾಡಿ, ಸಂವಿಧಾನವನ್ನು ಸುಟ್ಟು ಅಂಬೇಡ್ಕರ್‌ ವಿರುದ್ಧ ಘೋಷಣೆ ಕೂಗುವವರ ವಿರುದ್ಧ ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ಜವಾಬ್ದಾರಿ ಯುವ ಕಾಂಗ್ರೆಸ್‌ ಮೇಲಿದೆ. ಈಗ ಬಿಜೆಪಿಯಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹೋರಾಟ ಮಾಡಬೇಕಾದಂತ ಅಪಾಯಕಾರಿ ಪರಿಸ್ಥಿತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಿಲ್ಲಾ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ರಫಿ, ಉಪಾಧ್ಯಕ್ಷ ರೆಹಮಾನ್‌, ಕಾರೇಹಳ್ಳಿ ಉಲ್ಲಾಸ್‌, ವಸೀಂ, ಆಜಾಂ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
 
ಪ್ರಧಾನಿ ವಿದೇಶ ಸುತ್ತೋದಕ್ಕಷ್ಟೇ ಸೀಮಿತ ನರೇಂದ್ರ ಮೋದಿ ದೇಶದ ಪ್ರಧಾನಿಯಾದಾಗಿನಿಂದಲೂ ಬರಿ
ಭಾಷಣದಲ್ಲಿಯೇ ಪೊಳ್ಳು ಭರವಸೆಗಳನ್ನು ನೀಡುತ್ತಿದ್ದಾರೆಯೇ ವಿನಃ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಸೂಟು ಬೂಟು ಧರಿಸಿ ವಿದೇಶ ಸುತ್ತುವುದಕ್ಕಾಗಿಯೇ ಪ್ರಧಾನಿಯಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್‌ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರ ತರುವಂತೆ ಜನತೆಯನ್ನು ಜಾಗೃತಗೊಳಿಸುವುದಕ್ಕಾಗಿ ಯುವ ಕ್ರಾಂತಿ ಯಾತ್ರೆಯನ್ನು ಆರಂಭಿಸಲಾಗಿದೆ. ಜಿಲ್ಲೆಯ ಯುವ ಕಾಂಗ್ರೆಸ್‌ ಪದಾಧಿಕಾರಿಗಳು ಹಾಗೂ ಆರು ವಿಧಾನಸಭಾ ಕ್ಷೇತ್ರಗಳ ಯುವ ಕಾಂಗ್ರೆಸ್‌ ಅಧ್ಯಕ್ಷರು ಭಾಗವಹಿಸಬೇಕು ಎಂದು ಮಧು ಪಾಲೇಗೌಡ ತಿಳಿಸಿದರು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.