ಎರಡನೇ ಹಂತದಲ್ಲಿ “ನ್ಯೂರಾನ್’
Team Udayavani, Dec 19, 2018, 11:43 AM IST
ಇತ್ತೀಚೆಗಷ್ಟೆ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ್ದ “ನ್ಯೂರಾನ್” ಚಿತ್ರ ಇದೀಗ ಎರಡನೇ ಹಂತದ ಚಿತ್ರೀಕರಣ ಆರಂಭಿಸಿದೆ. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ ಹಾಗೂ ಮೈಸೂರು ರಸ್ತೆಯ ಟಿಂಬರ್ ಫ್ಯಾಕ್ಟರಿ ಸುತ್ತಮುತ್ತ ನಾಯಕ ಹಾಗೂ ಖಳನಟನ ನಡುವೆ ನಡೆಯುವ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆಯುತ್ತಿದೆ.
ಫ್ರೆಂಡ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ನ್ಯೂರಾನ್” ಚಿತ್ರಕ್ಕೆ ಈ ಹಿಂದೆ ಡೇಂಜರ್ ಜೋನ್ ಮತ್ತು ನಿಶ್ಯಬ್ದ-2 ಚಿತ್ರಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ವಿಕಾಸ್ ಪುಷ್ಪಗಿರಿ ಚೊಚ್ಚಲ ಬಾರಿಗೆ ಆಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಮೂಲಕ ಯುವ ಚಿತ್ರರಂಗಕ್ಕೆ ನಾಯಕ ನಟನಾಗಿ ಪರಿಚಯವಾಗುತ್ತಿದ್ದಾರೆ.
ಇನ್ನುಳಿದಂತೆ ನೇಹಾ ಪಾಟೀಲ್ ನಾಯಕಿಯಾಗಿ ಕಾಣಿಸಿಕೊಂಡಿದ್ಧಾರೆ. ವೈಷ್ಣವಿ ಮೆನನ್ ಪ್ರಮುಖ ಪಾತ್ರದಲ್ಲಿದ್ದಾರೆ. ರಾಮಕೃಷ್ಣ, ಜೈಜಗದೀಶ್, ಕಬೀರ್, ಅರಂದರಾಜ್, ವರ್ಷ, ರಾಕ್ಲೈನ್ ಸುಧಾಕರ್, ಕಾರ್ತಿಕ್ ಮಂಗಳೂರು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು