ಐ ಲವ್ ಯೂ ಹೇಳಲು ಉಪ್ಪಿ ರೆಡಿ
Team Udayavani, Dec 20, 2018, 11:43 AM IST
ನಿರ್ದೇಶಕ ಆರ್.ಚಂದ್ರು ತಮ್ಮ “ಐ ಲವ್ ಯೂ’ ಚಿತ್ರೀಕರಣವನ್ನು ಮುಗಿಸಿದ್ದಾರೆ. ಈ ಬಾರಿ ಹಿಂದೆಂದಿಗಿಂತಲೂ ಬಿರುಸಿನಿಂದ ಚಿತ್ರೀಕರಣ ಮಾಡಿ ಮುಗಿಸಿರುವ ಆರ್.ಚಂದ್ರು ಈಗ ಚಿತ್ರದ ಬಿಡುಗಡೆಯ ಹಂತಕ್ಕೆ ಬಂದಿದ್ದಾರೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಟೀಸರ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಈಗ ಟ್ರೇಲರ್ ಸಿದ್ಧವಾಗಿದ್ದು, ಡಿಸೆಂಬರ್ 30ಕ್ಕೆ ಬಿಡುಗಡೆಯಾಗಲಿದೆ.
ಚಿತ್ರದ ಆಡಿಯೋ ಬಿಡುಗಡೆಯನ್ನು ಅದ್ಧೂರಿಯಾಗಿ ಮಾಡಲು ಚಂದ್ರು ನಿರ್ಧರಿಸಿದ್ದು, ಜನವರಿ 12ಕ್ಕೆ ದಾವಣಗೆರೆಯಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಅತಿಥಿಯಾಗಿ ಖ್ಯಾತ ನಿರ್ದೇಶಕ ರಾಜ್ಮೌಳಿ ಆಗಮಿಸಲಿದ್ದಾರೆ ಎನ್ನುವುದು ಆರ್.ಚಂದ್ರು ಮಾತು. ಜೊತೆಗೆ ರಜನಿಕಾಂತ್ ಅವರನ್ನು ಆಹ್ವಾನಿಸುವ ಪ್ರಯತ್ನಗಳು ಕೂಡಾ ನಡೆಯುತ್ತಿವೆಯಂತೆ.
ಅಂದು ಗುರುಕಿರಣ್ ಅವರಿಂದ “ಗುರುಕಿರಣ್ ನೈಟ್ಸ್’ ಕೂಡಾ ನಡೆಯಲಿದ್ದು, ದಾವಣಗೆರೆ ಮಂದಿಯನ್ನು ರಂಜಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರು ಭಾಗವಹಿಸಲಿದ್ದಾರೆ. ಎಲ್ಲಾ ಓಕೆ, ಚಿತ್ರದ ಬಿಡುಗಡೆ ಯಾವಾಗ ಎಂದು ನೀವು ಕೇಳಬಹುದು. ಫೆಬ್ರವರಿ 14 ರಂದು ಚಿತ್ರ ಬಿಡುಗಡೆ ಮಾಡಲು ಚಂದ್ರು ತಯಾರಿ ನಡೆಸಿದ್ದಾರೆ.
ಚಿತ್ರದ ಕಥೆ ಪ್ರೇಮಿಗಳ ದಿನಕ್ಕೆ ಹೆಚ್ಚು ಹೊಂದಿಕೆಯಾಗುವುದರಿಂದ ಆ ದಿನವೇ ಚಿತ್ರ ಬಿಡುಗಡೆ ಮಾಡಲಿದ್ದಾರೆ. ಚಿತ್ರದ ನಾಯಕ ಉಪೇಂದ್ರ ಅವರ ಹೊಸ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು, ಈಗಾಗಲೇ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿದೆ. ನಾಯಕಿ ರಚಿತಾ ರಾಮ್ ಅವರ ಪಾತ್ರ ಕೂಡಾ ಭಿನ್ನವಾಗಿದ್ದು, ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಸೋನು ಗೌಡ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಅಂದಹಾಗೆ, ಈ ಚಿತ್ರವನ್ನು ಆರ್.ಚಂದ್ರು ಅವರೇ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ