ಕರ್ಕಶ ಹಾರ್ನ್ ಬೀಳಲಿ ಕಡಿವಾಣ


Team Udayavani, Dec 23, 2018, 1:31 PM IST

23-december-14.gif

ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಶಬ್ದಮಾಲಿನ್ಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ವಾಹನಗಳಿಂದಲೇ ಅಧಿ ಕ ಶಬ್ದಮಾಲಿನ್ಯ ಉಂಟಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ನಗರದಲ್ಲಿ ಸಂಚರಿಸುವ ವಾಹನಗಳು ಅನಗತ್ಯವಾಗಿ ಹಾರ್ನ್ ಬಳಕೆ ಮಾಡುತ್ತಿರುವುದು. ಇದು ಸಾರ್ವಜನಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದೆ.

ನಗರದಲ್ಲಿ ದಿನಂಪ್ರತಿ 500ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಕೆಲವು ಬಸ್‌ಗಳಲ್ಲಿ ಕರ್ಕಶ ಹಾರ್ನ್ ಬಳಕೆ ಮಾಡಲಾಗುತ್ತಿದೆ. ಸಾರಿಗೆ ಇಲಾಖೆಯು ಸಂಬಂಧಪಟ್ಟ ಬಸ್‌ಗಳ ವಿರುದ್ಧ ಅನೇಕ ಬಾರಿ ಪ್ರಕರಣ ದಾಖಲು ಮಾಡಿದ್ದರೂ ಕರ್ಕಶ ಹಾರ್ನ್ ಬಳಕೆ ಕಡಿಮೆಯಾಗಲಿಲ್ಲ. ಕೆಲವೊಂದು ಬಸ್‌ಗಳಲ್ಲಿ ಎರಡರಿಂದ ಮೂರು ಬಗೆಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದಾಗಿ ಸುತ್ತಮುತ್ತಲಿನ ಸಾರ್ವಜನಿಕರಿಗೆ ಮಾತ್ರವಲ್ಲ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರೂ ತೊಂದರೆ ಅನುಭವಿಸುತ್ತಿದ್ದಾರೆ.

ಶಾಲಾ-ಕಾಲೇಜು, ಆಸ್ಪತ್ರೆ ಸಹಿತ ಕೆಲವೊಂದು ಪ್ರದೇಶಗಳಲ್ಲಿ ವಾಹನಗಳ ಹಾರ್ನ್ ಬಳಕೆ ನಿಷೇಧಿಸಲಾಗಿದೆ. ಆದರೂ ಕೂಡ ಕೆಲವೊಂದು ವಾಹನಗಳು ಈ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ನಗರದಲ್ಲಿ ಕೆಲವೊಂದು ಶಾಲಾ ಕಾಲೇಜುಗಳು ರಸ್ತೆ ಬದಿಯಲ್ಲೇ ಇವೆ. ಹೀಗಿರುವಾಗ ರಸ್ತೆಯಲ್ಲಿ ತೆರಳುವಂತಹ ವಾಹನಗಳು ಕರ್ಕಶ ಹಾರ್ನ್ ಮಾಡುವುದರಿಂದ ತರಗತಿಯಲ್ಲಿ ಪಾಠ ಮಾಡುವ ಶಿಕ್ಷಕರಿಗೆ ಮತ್ತು ಪಾಠ ಕೇಳುವ ವಿದ್ಯಾರ್ಥಿಗಳ ಏಕಾಗ್ರತೆಗೆ ತೊಂದರೆಯಾಗುತ್ತದೆ.

ವಾಹನಗಳಲ್ಲಿ ಹಾರ್ನ್ ಬಳಕೆ ಮಾಡುವ ಸಂಬಂಧ ಕಟ್ಟುನಿಟ್ಟಿನ ಕಾನೂನು ಕ್ರಮದ ಅಗತ್ಯವಿದೆ. ಒಂದು ವೇಳೆ ಈ ನಿಯಮಗಳನ್ನು ಪಾಲನೆ ಮಾಡದ ವಾಹನಗಳ ವಿರುದ್ಧ ಸ್ಥಳದಲ್ಲಿಯೇ ದಂಡ ವಿಧಿ ಸಲು ಸಾರಿಗೆ ಇಲಾಖೆ, ಸಂಚಾರಿ ಪೊಲೀಸರು ಮುಂದಾಗಬೇಕು. ಮಂಗಳೂರು ನಗರದಲ್ಲಿ ಒಂದೆಡೆ ಕರ್ಕಶ ಹಾರ್ನ್
ಸಮಸ್ಯೆಯಾದರೆ ಮತ್ತೊಂದೆಡೆ ಬೈಕ್‌ಗೆ ದೋಷಪೂರಿತ ಸೈಲೆನ್ಸರ್‌ ಅಳವಡಿಕೆ ಮಾಡಲಾಗುತ್ತಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಕಠಿನ ಕಾನೂನು ಕ್ರಮದ ಅಗತ್ಯವಿದೆ. ಮೋಟಾರು ವಾಹನ ಕಾಯಿದೆಯ ಅನ್ವಯ ಇಂಥ ಬೈಕ್‌ ಗಳ ನೋಂದಣಿ ಪತ್ರ ಅಮಾನತುಗೊಳಿಸಿ, ವಾಹನವನ್ನು ಜಪ್ತಿ ಮಾಡಲು ಕ್ರಮ ಕೈಗೊಳ್ಳಬೇಕಿದೆ.

  ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.