ಆಸ್ತಿ ತೆರಿಗೆ ಆನ್‌ಲೈನ್‌ ಪಾವತಿಗೆ ಆಸಕ್ತಿ


Team Udayavani, Dec 23, 2018, 1:33 PM IST

blore-3.jpg

ಬೆಂಗಳೂರು: ಆನ್‌ಲೈನ್‌ ಮೂಲಕ ಆಸ್ತಿ ತೆರಿಗೆ ಪಾವತಿಸುವ ಪ್ರಕ್ರಿಯೆಯಲ್ಲಿನ ಗೊಂದಲಗಳು ನಿವಾರಣೆಯಾದ ನಂತರ ಹೆಚ್ಚಿನ ತೆರಿಗೆದಾರರು ಚಲನ್‌ಗಿಂತ ಹೆಚ್ಚಾಗಿ ಆನ್‌ಲೈನ್‌ ಮೂಲಕವೇ ತೆರಿಗೆ ಪಾವತಿಸಿರುವುದು ಕಂಡುಬಂದಿದೆ.

ಆಸ್ತಿ ತೆರಿಗೆ ಸಂಗ್ರಹದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ 2016-17ನೇ ಸಾಲಿನಲ್ಲಿ ಪಾಲಿಕೆಯಿಲ್ಲಿ ಆನ್‌ಲೈನ್‌ ತೆರಿಗೆ ಪಾವತಿ ಜಾರಿಗೊಳಿಸಲಾಗಿತ್ತು. ಆದರೆ, ತೆರಿಗೆ ಪಾವತಿಯಲ್ಲಿ ಸಾಕಷ್ಟು ಗೊಂದಲಗಳು ಎದುರಾದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಹಿಂದಿದ್ದ ಎಲ್ಲಾ ಗೊಂದಲಗಳನ್ನು ಇದೀಗ ನಿವಾರಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಮೊದಲೆಲ್ಲಾ ಚಲನ್‌ಗಳನ್ನು ಭರ್ತಿ ಮಾಡಿ ತೆರಿಗೆ ಪಾವತಿ ಮಾಡುತ್ತಿದ್ದ ಬಹುತೇಕ ತೆರಿಗೆದಾರರು, ಪ್ರಸ್ತುತ ಆನ್‌ಲೈನ್‌ ಪಾವತಿ ಮೊರೆ ಹೋಗಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಒಟ್ಟು 11,35,225 ಆಸ್ತಿದಾರರು ಪಾಲಿಕೆಗೆ ತೆರಿಗೆ ಪಾವತಿಸಿದ್ದಾರೆ. ಆದರೆ, ಆ ಪೈಕಿ 5,57,130 ಮಂದಿ ಚಲನ್‌ ಪಡೆದು ಬ್ಯಾಂಕ್‌ಗಳಿಗೆ ಹೋಗಿ ತೆರಿಗೆ ಪಾವತಿಸಿದರೆ, 5,78,095 ಮಂದಿ ಆನ್‌ ಲೈನ್‌ ಮೂಲಕ ತೆರಿಗೆ ಪಾವತಿಸಿರುವುದು ಅಂಕಿ-ಅಂಶಗಳಿಂದ ಬೆಳಕಿಗೆ ಬಂದಿದೆ. ಆದರೆ, ಆಸ್ತಿ ತೆರಿಗೆ ಸಂಗ್ರಹದಲ್ಲಿ ಮಾತ್ರ ಚಲನ್‌ ಮೂಲಕವೇ ಹೆಚ್ಚಿನ ತೆರಿಗೆ ಅಂದರೆ 1239.50 ಕೋಟಿ ರೂ. ಸಂಗ್ರಹವಾಗಿದ್ದು, ಆನ್‌ಲೈನ್‌ ಮೂಲಕ 513.99 ಕೋಟಿ ರೂ.ಸಂಗ್ರಹವಾಗಿದೆ.

ಪ್ರಸಕ್ತ ಸಾಲಿನಲ್ಲಿ ಆಸ್ತಿ ತೆರಿಗೆಯಿಂದ 3100 ಕೋಟಿ ರೂ. ತೆರಿಗೆ ಸಂಗ್ರಹಿಸುವ ಗುರಿಯನ್ನು ಪಾಲಿಕೆ ಹೊಂದಿದ್ದು, ಆರ್ಥಿಕ ವರ್ಷ ಪೂರ್ಣಗೊಳ್ಳಲು ನಾಲ್ಕು ತಿಂಗಳು ಬಾಕಿಯಿರುವಾಗಲೇ ಶೇ.70ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಅದರಂತೆ ಶುಕ್ರವಾರದವರೆಗೆ ಒಟ್ಟು 2,170 ಕೋಟಿ ರೂ. ಸಂಗ್ರಹವಾಗಿದೆ.

ದಾಖಲೆಯ ತೆರಿಗೆ ಸಂಗ್ರಹ: ಕಳೆದ ಐದು ವರ್ಷಗಳಿಗೆ ಹೋಲಿಸಿದರೆ, ಪ್ರಸಕ್ತ ಸಾಲಿನಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹವಾಗಿರುವುದು ಕಂಡುಬಂದಿದೆ. 2016-17ನೇ ಸಾಲಿನಲ್ಲಿ 2,183 ಕೋಟಿ ರೂ. ಸಂಗ್ರಹಿಸಿದ್ದು ಈವರೆಗಿನ ಅತಿ ಹೆಚ್ಚು ಮೊತ್ತದ ತೆರಿಗೆ ಸಂಗ್ರಹವಾಗಿತ್ತು. ಆದರೆ, ಆರ್ಥಿಕ ವರ್ಷ ಪೂರ್ಣಗೊಳ್ಳಲು ಇನ್ನೂ ಮೂರು ತಿಂಗಳಿರುವಾಗಲೇ 2,170 ಕೋಟಿ ರೂ. ಸಂಗ್ರಹವಾಗಿದ್ದು, ಈಗಾಗಲೇ 50 ಕೋಟಿಯಷ್ಟು ತೆರಿಗೆ ಪಾವತಿಸಲು ತೆರಿಗೆದಾರರು ಚಲನ್‌ ಪಡೆದಿದ್ದಾರೆ. ಹೀಗಾಗಿ ಪಾಲಿಕೆಯ ಮಟ್ಟಿಗೆ ದಾಖಲೆಯ ತೆರಿಗೆ ಸಂಗ್ರಹಿಸಿದ ವರ್ಷ ಇದಾಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ 3,100 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿ ಸುವ ಗುರಿ ಪಾಲಿಕೆ ಮುಂದಿದೆ. ಅದರಂತೆ ಈಗಾಗಲೇ ಶೇ.70ರಷ್ಟು ಗುರಿ ಸಾಧಿಸಿದ್ದು, ಪಾಲಿಕೆಯಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿದ ದಾಖಲೆ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಆಡಳಿತದ್ದಾಗಲಿದೆ. ಮುಂದಿನ ಮೂರು ತಿಂಗಳಲ್ಲಿ ತೆರಿಗೆ ಅಭಿಯಾನದ ಮೂಲಕ ಹೆಚ್ಚಿನ ತೆರಿಗೆ ಸಂಗ್ರಹಿಸಲು ಪ್ರಯತ್ನಿಸಲಾಗುವುದು. 
 ಎಂ.ಶಿವರಾಜು, ಆಡಳಿತ ಪಕ್ಷದ ನಾಯಕ 

ಟಾಪ್ ನ್ಯೂಸ್

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

1-wqeeqw

K. Vasantha Bangera; ಬೆಳ್ತಂಗಡಿಯ ಬಂಗಾರ ಕೇದೆಯ ಮಣ್ಣಲ್ಲಿ ಲೀನ; ಸಕಲ ಸರಕಾರಿ ಗೌರವ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

suicide

Heatstroke; ಬಸವಕಲ್ಯಾಣದಲ್ಲಿ ಬಿಸಿಲಿನ ಝಳಕ್ಕೆ ಕಾರ್ಮಿಕ‌ ಸಾವು‌?

1-ww-ewq

SSLC Result; ಜ್ಞಾನಸುಧಾ ಕಾರ್ಕಳ ಶೇ. 100 ಫ‌ಲಿತಾಂಶ: ಸಹನಾ ರಾಜ್ಯಕ್ಕೆ ತೃತೀಯ

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

MOdi (3)

Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್‌ ಅರ್ಜಿ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Himanth-Bisw

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್‌ ಬಿಸ್ವಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.