ಅತೃಪ್ತರ ನಡೆಯ ಮೇಲೆ ಬಿಜೆಪಿ ನಿಗಾ

Team Udayavani, Dec 24, 2018, 7:55 AM IST

bjp-flag-600.jpg

ಬೆಂಗಳೂರು: ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅತೃಪ್ತರು ಆಕ್ರೋಶ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಸರಕಾರ ರಚನೆ ಅವಕಾಶದ ನಿರೀಕ್ಷೆಯಲ್ಲಿ ತೆರೆಮರೆಯಲ್ಲೇ ಕಸರತ್ತು ನಡೆಸಿರುವ ಬಿಜೆಪಿಯು ಇನ್ನೊಂದೆಡೆ ಲೋಕಸಭಾ ಚುನಾವಣೆ ಸಿದ್ಧತೆ ಕಾರ್ಯಕ್ಕೂ ಚಾಲನೆ ನೀಡಿದೆ. ಸಚಿವ ಸ್ಥಾನದಿಂದ ಕೈಬಿಟ್ಟ ಬಳಿಕ ಅಸಮಾಧಾನಗೊಂಡಿರುವ ಕಾಂಗ್ರೆಸ್‌ ಶಾಸಕ ರಮೇಶ್‌ ಜಾರಕಿಹೊಳಿ ಮತ್ತು ಇತರ ಅತೃಪ್ತರ ನಡೆಯನ್ನು ಬಿಜೆಪಿ ನಾಯಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಮೇಶ್‌ ಜಾರಕಿಹೊಳಿ ಅವರು ಸದ್ಯದಲ್ಲೇ ಆಯ್ದ ಅತೃಪ್ತ ಶಾಸಕರೊಂದಿಗೆ ಗೌಪ್ಯ ಸಭೆ ನಡೆಸಲು ಚಿಂತಿಸಿದ್ದಾರೆ ಎನ್ನಲಾಗಿದ್ದು, ಆ ಸಭೆಯಲ್ಲಿ ಕೈಗೊಳ್ಳುವ ನಿಲುವು ಆಧರಿಸಿ ಕಾರ್ಯತಂತ್ರ ಹೆಣೆಯಲು ಬಿಜೆಪಿ ಸಜ್ಜಾಗಿದೆ.

ಸಂಪುಟ ಪುನಾರಚನೆ ಬಳಿಕ ಸಂಪುಟದಿಂದ ಕೈಬಿಟ್ಟಿರುವ ರಮೇಶ್‌ ಜಾರಕಿಹೊಳಿ, ಆರ್‌.ಶಂಕರ್‌ ತೀವ್ರ ಅಸಮಾಧಾನಗೊಂಡಿದ್ದರೆ, ಸಚಿವ ಸ್ಥಾನದ ಆಕಾಂಕ್ಷಿಗಳು ಕಾಂಗ್ರೆಸ್‌ ನಾಯಕರ ನಡೆ ಬಗ್ಗೆ ಪ್ರತ್ಯಕ್ಷ, ಪರೋಕ್ಷವಾಗಿ ಅಸಮಾಧಾನ ಹೊರ ಹಾಕುತ್ತಿದ್ದಾರೆ. ರವಿವಾರ ಕಾಂಗ್ರೆಸ್‌ನ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ, ಶಾಸಕ ಡಾ| ಕೆ.ಸುಧಾಕರ್‌ ಕೂಡ ಅಸಮಾಧಾನ ಹೊರ ಹಾಕಿದ್ದಾರೆ. ಹಾಗಾಗಿ ಕಾಂಗ್ರೆಸ್‌ನ ಅತೃಪ್ತ ಶಾಸಕರ ಸಂಖ್ಯೆ ಮತ್ತವರ ಮುಂದಿನ ನಡೆಗೆ ಅನುಗುಣವಾಗಿ ಕಾರ್ಯಾಚರಣೆಗಿಳಿಯಲು ಕಮಲ ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ಸಿದ್ಧತೆ
ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಸಿದ್ಧತೆ ಕಾರ್ಯವನ್ನು ಚುರುಕುಗೊಳಿಸಿರುವ ಬಿಜೆಪಿಯು ರಾಜ್ಯದ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಭಿಪ್ರಾಯ ಸಂಗ್ರಹಣೆ ಕಾರ್ಯಕ್ಕೆ ಚಾಲನೆ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದಲ್ಲಿ ರವಿವಾರ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆ ನಡೆಯಿತು.

ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಕುರಿತಂತೆ ಸೋಮವಾರ ಸಭೆ ನಡೆಯಲಿದೆ.  ಕೇಂದ್ರದಲ್ಲಿ ಸಚಿವರಾಗಿದ್ದ ಅನಂತ ಕುಮಾರ್‌ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ಎಲ್ಲ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಕುರಿತಂತೆ ಅಭಿಪ್ರಾಯ ಸಂಗ್ರಹ ಕಾರ್ಯವನ್ನು 15 ದಿನಗಳೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಒಟ್ಟಾರೆ ಅಭಿಪ್ರಾಯವನ್ನು ವರಿಷ್ಠರಿಗೆ ಸಲ್ಲಿಸಿ, ಅವರ ಸೂಚನೆಯಂತೆ ಮುಂದುವರಿಯಲಾಗುವುದು ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ತಿಳಿಸಿದರು. ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಯಡಿಯೂರಪ್ಪ ಅವರ ನೇತೃತ್ವದಲ್ಲೇ ಸಿದ್ಧತೆ ಆರಂಭಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರು ಬಿಜೆಪಿಗೆ ಬರುವುದು ಊಹಾಪೋಹ. ಬಿಜೆಪಿಯು ಸದನದ ಒಳಗೆ ಮತ್ತು ಹೊರಗೆ ಪ್ರಬಲ ವಿಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್‌ ಪಕ್ಷವು ತನ್ನ ಶಾಸಕರನ್ನು ಸಮಾಧಾನಪಡಿಸಿಕೊಂಡು ಹಿಡಿದಿಟ್ಟುಕೊಳ್ಳಬೇಕು. ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಸ್ವತಂತ್ರರಾಗಿರುತ್ತಾರೆ. ಆಮೇಲೆ ಯಾರಾದರೂ ಪಕ್ಷಕ್ಕೆ ಬರುವುದಾದರೆ ಸ್ವಾಗತ. ನಾವು ರಮೇಶ್‌ ಜಾರಕಿಹೊಳಿ ಅವರನ್ನು ಸಂಪರ್ಕಿಸಿಲ್ಲ. ತಾವಾಗಿಯೇ ರಾಜೀನಾಮೆ ಕೊಟ್ಟು  ಹೊರ ಬಂದ ಅನಂತರ ಬಿಜೆಪಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.