ಪುಣೆ ಬಂಟ್ಸ್‌ ಅಸೋಸಿಯೇಷನ್‌ ವಾರ್ಷಿಕ ಕ್ರೀಡೋತ್ಸವ


Team Udayavani, Dec 26, 2018, 12:50 PM IST

2412mum02.jpg

ಪುಣೆ: ಪುಣೆಯಲ್ಲಿ ಬಂಟ ಸಮಾಜಬಾಂಧವರು ಪರಸ್ಪರ ಒಗ್ಗಟ್ಟು ಸೌಹಾರ್ದದೊಂದಿಗೆ ಬೆರೆತುಕೊಂಡು ಸಂಘ ಸಂಸ್ಥೆಗಳ ಮೂಲಕ ಕ್ರೀಡಾಕೂಟವನ್ನು ಆಯೋಜಿಸಿ ಮುಖ್ಯವಾಗಿ ಮಕ್ಕಳಿಗೆ ಕ್ರೀಡೆಯ ಬಗ್ಗೆ ಉತ್ತೇಜನ ನೀಡುವ ಕಾರ್ಯ ಮಾಡುತ್ತಿರುವುದು  ನಿಜವಾಗಿಯೂ ಶ್ಲಾಘನೀಯವಾಗಿದೆ. ಪುಣೆಯ ಪೊಲೀಸ್‌ ಉಪಾಯುಕ್ತ ಪ್ರಕಾಶ್‌ ಗಾಯಕ್ವಾಡ್‌ ಅಭಿಪ್ರಾಯಪಟ್ಟರು.  

ನಮ್ಮ ಬದುಕಿನಲ್ಲಿ ಕ್ರೀಡೆ ಎಂಬುದು  ಬಹಳ ಮಹತ್ವವನ್ನು ಹೊಂದಿದೆ. ಕ್ರೀಡೆಯಿಂದ ನಮ್ಮ ವ್ಯಕ್ತಿತ್ವದ ವಿಕಸನ ಮಾತ್ರವಲ್ಲದೆ ಸಾಮಾಜಿಕ ಸ್ಥಾನಮಾನವನ್ನು ಗಳಿಸಿಕೊಳ್ಳಬಹುದಾಗಿದೆ. ನಮ್ಮ ಶರೀರವನ್ನು ದೈನಂದಿನ ವ್ಯಾಯಾಮದೊಂದಿಗೆ ಸದೃಢಪಡಿಸಿಕೊಂಡರೆ ವೈದ್ಯರಿಂದಲೂ ದೂರವಿರಬಹುದಾಗಿದೆ. ಆದುದರಿಂದ ನಮ್ಮ ಮಕ್ಕಳಿಗೆ ಹೇಗೆ ನಾವು ವಿದ್ಯೆಗೆ ಪ್ರಮುಖ ಆದ್ಯತೆ ನೀಡುತ್ತೇವೆಯೋ ಹಾಗೆಯೇ ಕ್ರೀಡೆಯ ಬಗ್ಗೆಯೂ ಪ್ರಾಮುಖ್ಯತೆಯನ್ನು ನೀಡಿ ಬೆಳೆಸುವ ಅಗತ್ಯತೆಯಿದೆ ಎಂದರು.

ಅವರು ಡಿ 24 ರಂದು ನಗರದ ಆಗಾಶೆ  ಫಿಸಿಕಲ್‌ ಎಜುಕೇಶನ್‌ ಮೈದಾನದಲ್ಲಿ ನಡೆದ ಬಂಟ್ಸ್‌ ಅಸೋಸಿಯೇಶನ್‌ ಪುಣೆ ಇದರ ವಾರ್ಷಿಕ ಕ್ರೀಡೋತ್ಸವದ  ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪಸ್ಥಿತ ರಿದ್ದು,  ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ನಮ್ಮ ದೇಶವು ಜನಸಂಖ್ಯೆ ಯಲ್ಲಿ ವಿಶ್ವದಲ್ಲಿಯೇ ಎರಡನೆಯ ಸ್ಥಾನವನ್ನು ಪಡೆದುಕೊಂಡರೆ ಒಲಿಂಪಿಕ್ಸ್‌ ಪದಕ ಗಳಿಸುವಲ್ಲಿ ಕೊನೆಯ ಸ್ಥಾನದಲ್ಲಿರುವುದಕ್ಕೆ ನಿಜವಾಗಿಯೂ ಬೇಸರವಾಗುತ್ತದೆ. ಕ್ರೀಡೆಯ ಬಗ್ಗೆ ನಿರಾಸಕ್ತಿ ಬೆಳೆಸಿಕೊಂಡಿರುವುದೇ ಇದಕ್ಕೆ ಕಾರಣವಾಗಿದೆ ಎಂದರು.

ಸಂಘ ಸಂಸ್ಥೆಗಳ ಮುಖಾಂತರ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಕ್ಕಳಿಗೆ ಉತ್ತೇಜನ ನೀಡುತ್ತಾ ಪ್ರೋತ್ಸಾಹಿಸುತ್ತಾ ಹೋದರೆ ಒಲಿಂಪಿಕ್ಸ್‌ ನಲ್ಲಿ ಪದಕ ಗಳಿಸುವ  ತನಕ ನಾವು ತಲುಪಬಹುದಾಗಿದೆ. ಇಂದಿನ ದಿನಗಳಲ್ಲಿ ಉತ್ತಮ ಕ್ರೀಡಾಪಟುವಾಗಿ ರೂಪುಗೊಂಡರೆ ಯಾವುದೇ ಪ್ರವೇಶ ಪರೀಕ್ಷೆಗಳಿಲ್ಲದೆ  ನೇರವಾಗಿ ಸರಕಾರದ ಉನ್ನತ ಹು¨ªೆಗಳೂ ನಮ್ಮನ್ನು ಅರಸಿಕೊಂಡು ಬರುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಕ್ಕೆ ಆನಂದವಾಗುತ್ತಿದೆ. ಬಂಟ್ಸ್‌ ಅಸೋಸಿಯೇಶನ್‌ ಇಂತಹ ಉಪಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಾ ಭವಿಷ್ಯದಲ್ಲಿ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಳ್ಳಲಿ ಎಂದರು.

ವೇದಿಕೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷ  ನಾರಾಯಣ ಕೆ ಶೆಟ್ಟಿ, ಉಪಾಧ್ಯಕ್ಷ  ಗಣೇಶ್‌ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಅರವಿಂದ ರೈ, ಕೋಶಾಧಿಕಾರಿ ದಿನೇಶ್‌ ಶೆಟ್ಟಿ ನಿಟ್ಟೆ  , ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಸುಶ್ಮಿತ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ದೀಪಾ ಅರವಿಂದ ರೈ, ಕಾರ್ಯದರ್ಶಿ ಉಷಾ ಯು. ಶೆಟ್ಟಿ, ಮಹಿಳಾ ವಿಭಾಗದ ಕ್ರೀಡಾ ಕಾರ್ಯಾಧ್ಯಕ್ಷೆ ಅಮಿತಾ ಯು. ಶೆಟ್ಟಿ,ಉಪಕಾರ್ಯಾಧ್ಯಕ್ಷೆ ಉಷಾ ಎಸ್‌ ಶೆಟ್ಟಿ, ಕೋಶಾಧಿಕಾರಿ ಲತಾ ಎಸ್‌.ಶೆಟ್ಟಿ  ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು, ಪಿಂಪ್ರಿ ಚಿಂಚಾÌಡ್‌ ಬಂಟರ ಸಂಘದ ಅಧ್ಯಕ್ಷ  ವಿಜಯ್‌ ಎಸ್‌. ಶೆಟ್ಟಿ  ಬೋರ್ಕಟ್ಟೆ, ಪುಣೆ ತುಳುಕೂಟದ ಅಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಪಿಂಪ್ರಿ ಚಿಂಚಾÌಡ್‌ ತುಳುಕೂಟದ ಅಧ್ಯಕ್ಷ ಹರೀಶ್‌ ಶೆಟ್ಟಿ ಕುರ್ಕಾಲ್‌, ಸಂಘದ ಮಾಜಿ ಅಧ್ಯಕ್ಷರುಗಳಾದ ವಿನಯ್‌ ಪ್ರಸಾದ್‌ ಹೆಗ್ಡೆ, ಸುಭಾಶ್ಚಂದ್ರ ಹೆಗ್ಡೆ ಕಟ್ಟಿಂಗೇರಿಮನೆ ,ಮಾಜಿ ಉಪಾಧ್ಯಕ್ಷರಾದ ಶಿವರಾಮ ಶೆಟ್ಟಿ, ಸುರೇಶ್‌ ಶೆಟ್ಟಿ,ಮಾಜಿ ಕಾರ್ಯದರ್ಶಿ ಸತೀಶ್‌ ರೈ ಕಲ್ಲಂಗಳ, ಮಹಿಳಾ ವಿಭಾಗದ ಮಾಜಿ ಕಾರ್ಯ ಧ್ಯಕ್ಷೆಯರಾದ, ಸರೋಜಿನಿ ಜೆ.ಶೆಟ್ಟಿ, ಸುಧಾ ಎನ್‌. ಶೆಟ್ಟಿ ,ಮಲ್ಲಿಕಾ ಎ. ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.   ಮುಖ್ಯ ಅತಿಥಿಗಳು ದೀಪ ಪ್ರಜ್ವಲಿಸಿ ಬಲೂನು ಹಾರಿಸುವುದರ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ಅನಂತರ ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾ  ಕಾರ್ಯಾಧ್ಯಕ್ಷರಿಗೆ ಹಸ್ತಾಂತರಿಸಿದರು. 

ಅತಿಥಿಗಳನ್ನು  ಸ್ಮರಣಿಕೆ ಹಾಗೂ ಪುಷ್ಪಗುತ್ಛ ನೀಡಿ ಗೌರವಿಸಲಾಯಿತು. ಬೆಳಗ್ಗಿನ ಉಪಾಹಾರದ ಅನಂತರ ಕ್ರೀಡಾಕೂಟದಲ್ಲಿ ಮಕ್ಕಳು ಮಹಿಳೆಯರು, ಪುರುಷರೆಲ್ಲರೂ ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡರು. ವಿವಿಧ ಓಟಗಳ ಸ್ಪರ್ಧೆ, ವಾಲಿಬಾಲ್‌, ಡಿಸ್ಕಸ್‌ ಥ್ರೋ, ಹಗ್ಗ ಜಗ್ಗಾಟ, ಥ್ರೋ ಬಾಲ್‌ ,ಶಾಟ್‌ ಪುಟ್‌, ರಿಲೇ ಓಟ, ಕಪಲ್‌ ರೇಸ್‌, ವೇಗದ ನಡಿಗೆ, ಮಕ್ಕಳಿಗೆ ಬುಕ್‌ ಬ್ಯಾಲೆನ್ಸ್‌, ಪೊಟಾಟೋ ರೇಸ್‌ ಮುಂತಾದ ಸ್ಪರ್ಧೆಗಳು ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಶರ್ಮಿಳಾ ಟಿ. ರೈ ಅತಿಥಿಗಳನ್ನು ಪರಿಚಯಿಸಿದರು. ಸತೀಶ್‌ ಶೆಟ್ಟಿ ಸ್ವಾಗತಿಸಿದರು.  ಕೆಮೂ¤ರು ಸುಧಾಕರ ಶೆಟ್ಟಿ  ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕ್ರೀಡಾಕೂಟದಲ್ಲಿ ಬೆಳಗ್ಗಿನ ಉಪಾಹಾರವನ್ನು ಗಣೇಶ್‌ ಹೆಗ್ಡೆ, ಮಧ್ಯಾಹ್ನದ ಭೋಜನವನ್ನು ಆನಂದ್‌ ಶೆಟ್ಟಿ ಮಿಯ್ನಾರ್‌, ಹಣ್ಣು ಹಂಪಲುಗಳನ್ನು ನಾರಾಯಣ ಕೆ. ಶೆಟ್ಟಿ  ಪ್ರಾಯೋಜಿಸಿದರು. ಸಂಘದ ಪದಾಧಿಕಾರಿಗಳಾದ ಸುಧೀರ್‌ ಶೆಟ್ಟಿ, ಭಾಸ್ಕರ್‌ ಶೆಟ್ಟಿ, ಉಮೇಶ್‌ ಶೆಟ್ಟಿ, ಪ್ರದೀಪ್‌ ಶೆಟ್ಟಿ,ರಾಮದಾಸ್‌ ಶೆಟ್ಟಿ, ದಯಾನಂದ ಶೆಟ್ಟಿ, ದಿವಾಕರ್‌ ಶೆಟ್ಟಿ, ಲೋಹಿತ್‌ ಶೆಟ್ಟಿ, ರವೀಂದ್ರ ಶೆಟ್ಟಿ, ದಿನೇಶ್‌ ಶೆಟ್ಟಿ ಎನ್‌ಐಬಿಎಂ,  ತಾರಾನಾಥ ರೈ ಸೂರಂಬೈಲ್‌, ಬಾಲಕೃಷ್ಣ ಶೆಟ್ಟಿ ಬಿ.ಕೆ., ಪ್ರಫುÇÉಾ ವಿ. ಶೆಟ್ಟಿ, ನಿಖೀಲ್‌ ಎನ್‌. ಶೆಟ್ಟಿ, ಸ್ಮಿತಾ ಎಸ್‌.ಶೆಟ್ಟಿ, ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು.  ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜಬಾಂಧವರು ಉಪಸ್ಥಿತರಿದ್ದರು. 

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.