ಅಂಬರನಾಥ್‌ ಕರ್ನಾಟಕ ವೈಭವ ಸಂಸ್ಥೆ : ಕರ್ನಾಟಕ ರಾಜ್ಯೋತ್ಸವ  

Team Udayavani, Dec 26, 2018, 4:51 PM IST

2412mum07.jpg

ಅಂಬರನಾಥ್‌: ಮಹಾರಾಷ್ಟ್ರದ ಮಣ್ಣಿನಲ್ಲಿ ಹುಟ್ಟಿ ಬೆಳೆದ ನಮ್ಮ ಮಕ್ಕಳಿಗೆ ನಮ್ಮ ಸಿರಿವಂತ ಕನ್ನಡ ನಾಡಿನ ಹಿರಿಮೆಗಳನ್ನು ಪರಿಚಯಿಸುವ ಮುಖಾಂತರ ಹೊರನಾಡಿನಲ್ಲಿಯೂ ಕನ್ನಡತನವನ್ನು ಉಳಿಸಿ ಬೆಳೆಸಬೇಕೆಂದು ಪ್ರದೇಶದ ಖ್ಯಾತ ಬಿಲ್ಡರ್‌ ಹಾಗೂ ಅಂಬರನಾಥ್‌ ಕರ್ನಾಟಕ ವೈಭವ ಸಂಸ್ಥೆಯ ಅಧ್ಯಕ್ಷ ಆರ್‌. ಬಿ. ಹೆಬ್ಬಳ್ಳಿ ನುಡಿದರು. 

ಡಿ.21ರಂದು ಅಂಬರನಾಥ್‌ ಪಶ್ಚಿಮದ ಶಿವಂ ಮಂಗಲ ಕಾರ್ಯಾ ಲಯ ದಲ್ಲಿ ಕರ್ನಾಟಕ ವೈಭವ ಸಂಸ್ಥೆ ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಕರ್ನಾಟಕ ರಾಜ್ಯೋತ್ಸವ ಕೇವಲ ನವೆಂಬರ್‌ 1ಕ್ಕೆ ಮಾತ್ರ ಸೀಮಿತವಾಗಿರದೆ ಕನ್ನಡದ ಉತ್ಸವಗಳು ನಿತ್ಯ ನಿರಂತರವಾಗಿರಬೇಕೆಂದರು.

ಗೌರವ ಅತಿಥಿಯಾಗಿ ಆಗಮಿಸಿದ ಅಂಬರ್‌ನಾಥ್‌ನ ಕರ್ಣಾಟಕ ಬ್ಯಾಂಕ್‌ ವ್ಯವಸ್ಥಾಪಕ ಯುವರಾಜ್‌ ಶೆಟ್ಟಿ, ಕನ್ನಡ ಭಾಷೆ ಒಂದು ಅಯಸ್ಕಾಂತವಿದ್ದಂತೆ ನಮ್ಮ ಈ ಸಿರಿವಂತ ಭಾಷೆ, ಸಂಸ್ಕೃತಿ ಹಾಗೂ ಕಲೆಗಳಿಗೆ ಪರಭಾಷಿಕರು ಮನಸೋತಿದ್ದಾರೆ. ಇದನ್ನು  ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ಹೇಳಿದರು.

ಇನ್ನೋರ್ವ ಗೌರವ ಅತಿಥಿ ಸ್ವಾಭಿಮಾನ ಸಂಘಟನೆ ಶಹರ ಪ್ರಮುಖ ವಿಕಾಸ್‌ ಹೇಮರಾಜ್‌ ಸೋಮೇಶ್ವರ್‌ ಅವರು ಮಾತನಾಡಿ, ನಿಮ್ಮ ಮಕ್ಕಳು ಶಿವಾಜಿ ಮಹಾರಾಜ್‌ ಹಾಗೂ ಭಗತ್‌ಸಿಂಗ್‌ರಂತಹ ಮಹಾನ್‌ ವ್ಯಕ್ತಿಗಳಾಗಬೇಕಾದರೆ ಅವರನ್ನು ಮೊಬೈಲ್‌ನಿಂದ ದೂರವಿಡಿ. ಶಿಕ್ಷಕರು ಶಿಕ್ಷಣವನ್ನು ಶಾಲೆಯಲ್ಲಿ ಕಲಿಸುತ್ತಾರೆ ಆದರೆ ಸಂಸ್ಕಾರವನ್ನು ಮನೆಯಲ್ಲಿಯೇ ಕಲಿಸಬೇಕು.  ಎಂದು ಹೇಳಿದರು.

ಶಿವಸೇನೆ ನಗರ ಪ್ರಮುಖ ಅರವಿಂದ್‌ ವಾಳೆಕರ್‌ ಹಾಗೂ ನಗರಾಧ್ಯಕ್ಷೆ ಮನೀಷಾ ವಾಳೆಕರ್‌ ಶಿವಾಜಿ ಹಾಗೂ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿ ಚಾಲನೆ ನೀಡಿದರು.

ವೇದಿಕೆಯಲ್ಲಿ ಇತರ ಗಣ್ಯರಾಗಿ ವಿಕಾಸ್‌ ಸೋಮೇಶ್ವರ, ಎಚ್‌.ಆರ್‌.ಚಲವಾದಿ, ನಿಖೀಲ್‌ ವಾಳೆಕರ್‌, ಧನಶ್ರೀ ವಾಳೆಕರ್‌, ವಿ.ಎಂ. ಖಾದಿ, ಬಸವಂತ ಪೂಜಾರಿ, ಚಿದಾನಂದ ಚಲವಾದಿ, ಎಂ.ಎಸ್‌. ಜಲದೆ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಆರ್‌. ಬಿ. ಹೆಬ್ಬಳ್ಳಿ ಸ್ವಾಗತಿಸಿದರೆ, ಸಹಕಾರ್ಯದರ್ಶಿ ಎಚ್‌.ಆರ್‌. ಚಲವಾದಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಶಾಲಾ ಮುಖ್ಯಶಿಕ್ಷಕ ವಿ. ಎಂ. ಖಾದಿ ಸಂಸ್ಥೆ ನಡೆದು ಬಂದ ದಾರಿ, ಯೋಚನೆ ಮತ್ತು ಯೋಜನೆಗಳನ್ನು ವಿವರಿಸಿದರು.  ಎಸ್‌. ನಿಜಲಿಂಗಪ್ಪ ಕನ್ನಡ ಶಾಲೆಯ ಮಕ್ಕಳ ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಕಲೆಯನ್ನು ಪರಿಚಯಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನಸೆಳೆದವು. ಶಿಕ್ಷಕರಾದ ಅಜಯ್‌ಕುಮಾರ್‌ ಕಾರ್ಯಕ್ರಮ ನಿರೂಪಿಸಿದರೆ, ಶಶಿಕಾಂತ್‌ ಮಡಿವಾಳ ವಂದಿಸಿದರು. ಶಿಕ್ಷಕರಾದ ಕೆ.ವಿ. ಜಲದೆ, ಅನಿತಾ ರಾಜೊಳ್ಳಿ ಎಚ್‌. ಹೊನ್ನಳ್ಳಿ ಮತ್ತಿತರರು ಸಹಕರಿಸಿದರು.

ಚಿತ್ರ-ವರದಿ: ಗುರುರಾಜ್‌ ಪೋತನೀಸ್‌

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.