ಅನುದಾನ ತಾರತಮ್ಯದ ವಾಗ್ವಾದ


Team Udayavani, Dec 28, 2018, 11:34 AM IST

anudana.jpg

ಬೆಂಗಳೂರು: ಅನುದಾನ ಹಂಚಿಕೆ ವಿಚಾರದಲ್ಲಿ ಮಹಿಳಾ ಸದಸ್ಯರ ಕ್ಷೇತ್ರಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪ ಗುರುವಾರ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪುರುಷ ಮತ್ತು ಮಹಿಳಾ ಸದಸ್ಯರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.

ಜಿ.ಪಂ ಅಧ್ಯಕ್ಷ ಸಿ.ಮುನಿರಾಜು ನೇತೃತ್ವದಲ್ಲಿ ಬನಶಂಕರಿಯ ನಗರ ಜಿ.ಪಂ ಆವರಣದಲ್ಲಿ ನಡೆದ ವರ್ಷದ ಕೊನೆಯ ಸಾಮಾನ್ಯ ಸಭೆಯಲ್ಲಿ ಸಿಂಗಾನಯಕನಹಳ್ಳಿ ಕ್ಷೇತ್ರದ ಸದಸ್ಯೆ ಸಿ.ಲಾವಣ್ಯ, ಅನುದಾನ ಹಂಚಿಕೆ ವಿಚಾರದಲ್ಲಿ ಮಹಿಳಾ ಸದಸ್ಯರ ಕ್ಷೇತ್ರಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದರು.

“ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಕೇಳಿದ್ದೆ. ಆದರೆ ಹೆಚ್ಚುವರಿಯಾಗಿ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ನನಗೆ ಮಾತ್ರವಲ್ಲ, ನಗರ ಜಿಲ್ಲಾ ಪಂಚಾಯಿತಿಗೆ ಆಯ್ಕೆಯಾಗಿರುವ ಎಲ್ಲ 27 ಮಹಿಳಾ ಸದಸ್ಯರ ಕ್ಷೇತ್ರಗಳಿಗೂ ಸರಿಯಾಗಿ ಅನುದಾನ ಹಂಚಿಕೆಯಾಗಿಲ್ಲ,’ ಎಂದು ಟೀಕಿಸಿದರು. ಇದಕ್ಕೆ ಕೆಲ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದರು.

“ನನಗೆ ಮಾತನಾಡಲು ಅವಕಾಶ ನೀಡಿ, ಇಲ್ಲದಿದ್ದರೆ ಅಧ್ಯಕ್ಷರು ಕುಳಿತಿರುವ ಸಭಾಂಗಣದ ಮುಂದೆ ಕುಳಿತು ಪ್ರತಿಭಟನೆ ಮಾಡಬೇಕಾಗುತ್ತದೆ. ನನ್ನ ಕ್ಷೇತ್ರದಲ್ಲಿ ಬಯಲು ರಂಗ ಮಂದಿರ ನಿರ್ಮಿಸಲು 13 ಲಕ್ಷ ರೂ. ಅನುದಾನ ಕೇಳಿದ್ದೆ. ಅದು ಬಿಡುಗಡೆಯಾಗಿಲ್ಲ. ಆದರೆ ಮತ್ತೂಂದು ಕ್ಷೇತ್ರದ ಸದಸ್ಯರಿಗೆ ಬಯಲು ರಂಗ ಮಂದಿರ ನಿರ್ಮಾಣಕ್ಕಾಗಿ ಅನುದಾನ ನೀಡಲಾಗಿದೆ.

ಇದು ತಾರತಮ್ಯ ಅಲ್ಲವೇ?,’ ಎಂದು ಲಾವಣ್ಯ ಪ್ರಶ್ನಿಸಿದರು. “ಮಧ್ಯೆ ಪ್ರವೇಶಿಸಿದ ಅಧ್ಯಕ್ಷ ಮುನಿರಾಜು, ಯಾರಿಗೂ ಹೆಚ್ಚುವರಿ ಅನುದಾನ ನೀಡಿಲ್ಲ. ಎಲ್ಲರನ್ನೂ ಒಂದೇ ರೀತಿ ನೋಡಲಾಗಿದೆ. ಲಾವಣ್ಯ ಅವರ ಆರೋಪದಲ್ಲಿ ಹುರುಳಿಲ್ಲ,’ ಎಂದು ಹೇಳಿ ಚರ್ಚೆಗೆ ತೆರೆ ಎಳೆದರು.

25 ನಿವೇಶನ ಪರಭಾರೆ : ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ಗ್ರಾಮದಲ್ಲಿ 175 ನಿವೇಶನಗಳನ್ನು ಬಡವರಿಗೆ ವಿತರಿಸಿದ್ದು, ಇದರಲ್ಲಿ 25 ನಿವೇಶನಗಳನ್ನು ಈಗಾಗಲೇ ಬೇರೆಯವರಿಗೆ ಮಾರಾಟ ಮಾಡಲಾಗಿದೆ. ಪರಾಭಾರೆಯಲ್ಲಿ ರಾಜಕೀಯ ಮುಖಂಡರು ಮತ್ತು ಅಧಿಕಾರಿಗಳು ಶಾಮೀಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸದಸ್ಯೆ ಜಯಶ್ರೀ ಅಚ್ಯುತರಾಜು ಒತ್ತಾಯಿಸಿದರು.

ಫ‌ಲಾನುಭವಿಗಳಿಗೆ ಹಕ್ಕುಪತ್ರ ನೀಡಿದ ನಂತರ 15 ವರ್ಷಗಳವರೆಗೆ ಪರಭಾರೆ ಮಾಡುವ ಹಾಗಿಲ್ಲ. ಒಂದು ವೇಳೆ ನಿವೇಶ ಮಾರಾಟ ಮಾಡಿದರೆ ಅಂಥವರ ವಿರುದ್ಧ  ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ವರದಿ ನೀಡುವಂತೆ ಅಧ್ಯಕ್ಷ ಮುನಿರಾಜು ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಪಕ್ಕದ ಆಸ್ಪತ್ರೆಗೆ ಹೋಗಿ: ಜಿ.ಪಂ ವ್ಯಾಪ್ತಿಯಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆಗಳಿದ್ದರೂ, ವೈದ್ಯಾಧಿಕಾರಿಗಳು ಸರಿಯಾದ ವೇಳೆಗೆ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಬಡವರ ಸೇವೆ ಮಾಡಬೇಕೆಂಬ ಕಾಳಜಿ ಅವರಿಗಿಲ್ಲ. ಯಲಹಂಕದ ವೈದ್ಯಾಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರಗೆ ಬರುವ ಬಡ ರೋಗಿಗಳನ್ನು ತಮ್ಮ ಪತ್ನಿಯ ಆಸ್ಪತ್ರೆಗೆ ಕಳುಹಿಸಿ, ಬಡವರ ಸುಲಿಗೆ ಮಾಡುತ್ತಿದ್ದಾರೆ.

ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಚೊಕ್ಕನಹಳ್ಳಿ ವೆಂಕಟೇಶ್‌ ಆಗ್ರಹಿಸಿದರು. ಹಲವು ಆಸ್ಪತ್ರೆಗಳಲ್ಲಿ ಆ್ಯಂಬುಲೆನ್ಸ್‌ಗಳಿವೆ. ಆದರೆ ಚಾಲಕರೇ ಇಲ್ಲ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಒದಗಿಸಬೇಕು ಎಂದು ವೆಂಕಟೇಶ್‌ ಮನವಿ ಮಾಡಿದರು. 

ಅನಾಹುತವಾದರೆ ಅಧಿಕಾರಿಗಳೇ ಹೊಣೆ: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆಲವು ಸರ್ಕಾರಿ ಶಾಲೆಗಳ ಕಟ್ಟಡಗಳು ಶಿಥಿಲ ಸ್ಥಿತಿಯಲಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ, ಅಧಿಕಾರಿಗಳು ನಮ್ಮ ಮಾತಿಗೆ ಬೆಲೆ ಕೊಡುತ್ತಿಲ್ಲ.

ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂದು ಹಲವು ಸದಸ್ಯರು ಪ್ರಶ್ನಿಸಿದರು. ಈ ವೇಳೆ ಮಾತನಾಡಿದ ಸಿಇಒ ಅರ್ಚನಾ, ಅಧಿಕಾರಿಗಳು ಗಮನಹರಿಸದಿದ್ದರೆ ಅವರೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದರು. ಉಪಾಧ್ಯಕ್ಷೆ ಪಾರ್ವತಿ ಚಂದ್ರಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.