ಶ್ರೀನಗರ:ಭದ್ರತಾ ಪಡೆಗಳ ಭಾರೀ ಕಾರ್ಯಾಚರಣೆ;4 ಉಗ್ರರು ಫಿನಿಶ್
Team Udayavani, Dec 29, 2018, 6:00 AM IST
ಶ್ರೀನಗರ: ಪುಲ್ವಾಮಾ ಜಿಲ್ಲೆಯ ಹಾಜಿನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶನಿವಾರ ಭಾರಿ ಕಾರ್ಯಾಚರಣೆ ನಡೆಸಿ ನಾಲ್ವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿವೆ.
ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ನಡೆಸಲಾಗಿದ್ದು, ಈ ವೇಳೆ ಭೀಕರ ಗುಂಡಿನ ಚಕಮಕಿ ನಡೆದಿದೆ.
ಗುಂಡಿನ ಚಕಮಕಿಯಲ್ಲಿ ಸ್ಥಳದಲ್ಲಿದ್ದ ನಾಲ್ವರೂ ಉಗ್ರರನ್ನು ಹತ್ಯೆಗೈಯಲಾಗಿದೆ.
ಹತರು ಯಾವ ಉಗ್ರ ಸಂಘಟನೆಗೆ ಸೇರಿದವರು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.