ದಾಖಲೆ ಬರೆದ ನಟ ಅನಿರುದ್ಧ


Team Udayavani, Dec 30, 2018, 5:47 AM IST

anirudh-copy.jpg

ನಟ ಕಮ್‌ ನಿರ್ದೇಶಕ ಅನಿರುದ್ಧ ಜತಕರ ಇದೀಗ ಖುಷಿಯ ಮೂಡ್‌ನ‌ಲ್ಲಿದ್ದಾರೆ. ಅವರ ಖುಷಿಗೆ ಕಾರಣ, ಅವರ ಹೆಸರಿಗೆ ಒಂದಲ್ಲ, ಎರಡಲ್ಲ, ನಾಲ್ಕು “ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌’ ಆಗಿರೋದು. ಹೌದು. ಅವರು ಇತ್ತೀಚೆಗೆ ಕಿರುಚಿತ್ರಗಳನ್ನು ನಿರ್ದೇಶಿಸಿ, ಪ್ರದರ್ಶನ ಮಾಡಿದ್ದು ಎಲ್ಲರಿಗೂ ಗೊತ್ತು. ಆ ಕಿರುಚಿತ್ರಗಳಿಗೆ ಈ ದಾಖಲೆ ಸೇರಿಕೊಂಡಿದೆ. ಅಷ್ಟಕ್ಕೂ “ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌’ಗೆ ಕಾರಣವೇನೆಂದರೆ, ಮೊದಲನೆಯದು ಅವರು ಕೀರ್ತಿ ಇನ್ನೋವೇಶನ್ಸ್‌ ಬ್ಯಾನರ್‌ನಡಿ ನಿರ್ಮಾಣಗೊಂಡ ಆರು ಕಿರುಚಿತ್ರಗಳನ್ನು ರಚಿಸಿ, ನಿರ್ದೇಶಿಸಿ, ಒಂದೇ ದಿನ ಬಿಡುಗಡೆ ಮಾಡಿದ್ದು.

ಎರಡನೆಯದು ಸಾಮಾಜಿಕ ಸಮಸ್ಯೆ ಬಿಂಬಿಸುವ ಆರು ಕಿರುಚಿತ್ರಗಳನ್ನು ಒಂದೇ ದಿನ ಪ್ರದರ್ಶನ ಮಾಡಿದ್ದು. ಮೂರನೆಯದ್ದು, ಅವರು ನಿರ್ದೇಶಿಸಿದ ಆರು ಕಿರುಚಿತ್ರಗಳಲ್ಲಿ ಯಾವುದೇ ಸಂಭಾಷಣೆ ಇಲ್ಲದೆ, ಕೇವಲ ದೃಶ್ಯರೂಪವನ್ನು ತೆರೆಮೇಲೆ ಅನಾವರಣಗೊಳಿಸಿದ್ದು. ಇನ್ನು, ಒಂದೇ ದಿನ ಬೇರೆ ಬೇರೆ ಶೈಲಿಯ ಆರು ಕಿರುಚಿತ್ರಗಳನ್ನು ಚಿತ್ರೀಕರಿಸಿ, ಅವುಗಳನ್ನು ಒಂದೇ ದಿನ ಬಿಡುಗಡೆ ಮಾಡಿದ್ದರ ಹಿನ್ನೆಲೆಯಲ್ಲಿ “ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌’ಗೆ ಅನಿರುದ್ಧ ಹೆಸರು ದಾಖಲಾಗಿದೆ.

ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಅನಿರುದ್ಧ, “ನಿಜವಾಗಿಯೂ ನಾನು ಇದನ್ನೆಲ್ಲಾ ನಿರೀಕ್ಷಿಸಿರಲಿಲ್ಲ. ನನ್ನ ಹೆಸರು “ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌’ಗೆ ಸೇರಿಕೊಂಡಿದ್ದಕ್ಕೆ ಕನ್ನಡಿಗನಾಗಿ, ಕನ್ನಡ ಕಲಾವಿದನಾಗಿ ಹೆಮ್ಮೆ ಆಗುತ್ತಿದೆ. ಡಾ.ವಿಷ್ಣುವರ್ಧನ್‌ ಅವರ ಆಶೀರ್ವಾದ, ಕೀರ್ತಿ ಇನ್ನೋವೇಶನ್ಸ್‌ ತಂಡದ ಬೆಂಬಲ ಹಾಗೂ ಕುಟುಂಬದ ಪ್ರೋತ್ಸಾಹದಿಂದ ಇದೆಲ್ಲಾ ಸಾಧ್ಯವಾಗಿದೆ.  

ನಾನು ಕನ್ನಡ ಮಾತ್ರವಲ್ಲ, ಇಂಗ್ಲೀಷ್‌ನಲ್ಲೂ ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ನಾನು ಮಾಡಿದ ಕಿರುಚಿತ್ರಗಳಲ್ಲಿ ಸಂಭಾಷಣೆಯ ಅಗತ್ಯ ಇರಲಿಲ್ಲ. ಎಲ್ಲವನ್ನೂ ದೃಶ್ಯರೂಪವೇ ಕಟ್ಟಿಕೊಡುವಂತಿದ್ದರಿಂದ ಮಾತುಗಳನ್ನು ಕಟ್ಟಿಕೊಡದೆ, ಚಿತ್ರೀಕರಿಸಿದ್ದೇನೆ. ಇನ್ನು, ಸಾಮಾಜಿಕ ಸಮಸ್ಯೆ ಬಿಂಬಿಸುವ ವಿಷಯ ಇಟ್ಟುಕೊಂಡು ಮಾಡಿದ್ದು ಪ್ಲಸ್‌ ಎನಿಸಿದೆ. ಮುಂದಿನ ದಿನಗಳಲ್ಲಿ ಸಿನಿಮಾ ನಿರ್ದೇಶನ ಮಾಡುವ ಯೋಚನೆಯೂ ಇದೆ. ಎಲ್ಲದ್ದಕ್ಕೂ ಕಾಲ ಕೂಡಿ ಬರಬೇಕಿದೆ’ ಎನ್ನುತ್ತಾರೆ ಅನಿರುದ್ಧ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.