ಅಪಘಾತದಲ್ಲಿ  ಸಾವು: ಅಂಗಾಂಗ ದಾನ


Team Udayavani, Jan 4, 2019, 5:37 AM IST

harinaksha.jpg

ಮಂಗಳೂರು/ಕಡಬ: ಬೈಕ್‌ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡ ಬಂಟ್ವಾಳ ಮೂಲದ ಬಸ್‌ ನಿರ್ವಾಹಕನ ಅಂಗಾಂಗ ದಾನ ಮಾಡುವ ಮೂಲಕ ನೋವಿನ ನಡುವೆಯೂ ಯುವಕನ ಕುಟುಂಬ ಮಾನವೀಯತೆ ಮೆರೆದು ಮಾದರಿಯಾಗಿದೆ.

ಖಾಸಗಿ ಬಸ್‌ ನಿರ್ವಾಹಕರಾಗಿದ್ದ ಬಂಟ್ವಾಳದ ವಿಟ್ಲ ಮಂಗಲಪದಲವು ನಿವಾಸಿ ಹರಿಣಾಕ್ಷ (32) ಅವರು ಸ್ನೇಹಿತ ಸಂತೋಷ್‌ ಕುಮಾರ್‌ ಚಲಾಯಿಸುತ್ತಿ ಬೈಕಿನಲ್ಲಿ ಡಿ. 31ರಂದು ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ತೆರಳುತ್ತಿದ್ದ ಸಂದರ್ಭ ಬೆಳಗ್ಗಿನ ಜಾವ 4.30ರ ಸುಮಾರಿಗೆ ಬಿಳಿನೆಲೆ ಬಳಿ ಅಪಘಾತ ಸಂಭವಿಸಿತ್ತು. ಪಕ್ಕದ ಕಾಡಿನಿಂದ ನರಿಗಳ ಗುಂಪು ಹಠಾತ್‌ ಅಡ್ಡ ಬಂದ ಕಾರಣ ಬೈಕ್‌ ಪಲ್ಟಿಯಾಗಿ ಅವರು ತೀವ್ರವಾಗಿ ಗಾಯಗೊಂಡಿದ್ದರು.

ಗಾಯಾಳು ಹರಿಣಾಕ್ಷ ಅವರನ್ನು ನಗರದ ಎ.ಜೆ. ಆಸ್ಪತ್ರೆಗೆ ಸೇರಿಸಲಾಗಿತ್ತು. ತಲೆಗೆ ಗಂಭೀರ ಏಟಾದ ಹಿನ್ನೆಲೆಯಲ್ಲಿ ಜ. 2ರಂದು ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ವಿಚಾರವನ್ನು ಆಸ್ಪತ್ರೆ ವೈದ್ಯರು ಹರಿಣಾಕ್ಷ ಅವರ ಮನೆಯವರಿಗೆ ತಿಳಿಸಿದ್ದರು. ಅಲ್ಲದೆ ಅಂಗಾಂಗ ದಾನ ಮಾಡುವಂತೆ ಸೂಚಿಸಿದ್ದರು.

ಕುಟುಂಬವು ಅಂಗಾಂಗ ದಾನ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಅಂಗಾಂಗ ಅವಶ್ಯ ಇರುವ ಆಸ್ಪತ್ರೆಗಳಿಗೆ ಮಾಹಿತಿ ನೀಡಲಾಯಿತು. ಗುರುವಾರ ಬೆಳಗ್ಗೆ 4 ಗಂಟೆಗೆ ಅಂಗಾಗ ತೆಗೆಯುವ ಶಸ್ತ್ರಚಿಕಿತ್ಸೆ ಆರಂಭಿಸಿ 7.30ಕ್ಕೆ ಝೀರೋ ಟ್ರಾಫಿಕ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಸಾಗಿಸಲಾಯಿತು. ಅಲ್ಲಿಂದ ವಿಮಾನದಲ್ಲಿ ಹರಿಣಾಕ್ಷನ ಅಂಗಾಂಗವನ್ನು ಬೆಂಗಳೂರಿಗೆ‌ ರವಾನೆ ಮಾಡಲಾಯಿತು.

ಲಿವರ್‌ ಹಾಗೂ ಹಾರ್ಟ್‌ ವಾಲ್‌ ಅನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ, ಒಂದು ಕಿಡ್ನಿಯನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಹಾಗೂ ಕಾರ್ನಿಯಾ ಮತ್ತು ಇನ್ನೊಂದು ಕಿಡ್ನಿಯನ್ನು ಎ.ಜೆ. ಆಸ್ಪತ್ರೆಯಲ್ಲಿ ಕಸಿ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಪ್ರಶಾಂತ್‌ ಮಾರ್ಲ ತಿಳಿಸಿದ್ದಾರೆ.  ಹರಿಣಾಕ್ಷ ಅವರು ತಂದೆ ಸಂಜೀವ ಪೂಜಾರಿ, ತಾಯಿ ಹಾಗೂ ಐವರು ಸಹೋದರರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.