ಭಾಯಂದರ್‌ ಅಯ್ಯಪ್ಪ  ಭಕ್ತವೃಂದ ಮಹಾಪೂಜೆ

Team Udayavani, Jan 4, 2019, 7:16 AM IST

0301mum09a.jpg

ಮುಂಬಯಿ: ಭಾಯಂದರ್‌ ಪಶ್ಚಿಮದ ಸ್ಟೇಷನ್‌ ರೋಡ್‌ನ‌ ಸ್ಟಾರ್‌ ಪ್ಯಾಲೇಸ್‌ ಬಿಲ್ಡಿಂಗ್‌ನ ನಂಬರ್‌-13, ಸಂತೋಷ್‌ ಟಾಕೀಸ್‌ ಸಮೀಪದಲ್ಲಿರುವ ತ್ರಿಮೂರ್ತಿ ಹೊಟೇಲ್‌ ಮಾಲಕರಾದ ದಿ| ಸೋಮಪ್ಪ ಕೋಟ್ಯಾನ್‌ ಅವರ ಹಸ್ತದಿಂದ ಸ್ಥಾಪಿಸಲ್ಪಟ್ಟ ಶ್ರೀ ಸ್ವಾಮಿ ಶರಣಂ ಅಯ್ಯಪ್ಪ ಭಕ್ತವೃಂದ ಚಾರಿಟೆಬಲ್‌ ಟ್ರಸ್ಟ್‌ ಇದರ 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ. 30ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಮೂಡುಬಿದಿರೆ ಶ್ರೀ ಮಣಿಕಂಠ ಕ್ಷೇತ್ರದ ಗುರುಸ್ವಾಮಿಗಳಾದ ಶಿವಾನಂದ ಶಾಂತಿ ಹಾಗೂ ಶಿಬಿರದ ಶ್ರೀನಿವಾಸ ಗುರುಸ್ವಾಮಿಗಳ ಪೌರೋಹಿತ್ಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 7 ರಿಂದ ರಮೇಶ್‌ ಶಾಂತಿ ಗುರುಸ್ವಾಮಿ ಅವರ ನೇತೃತ್ವದಲ್ಲಿ ಗಣಹೋಮ, ಬೆಳಗ್ಗೆ 9.30ರಿಂದ ಶಿಬಿರದ ಮಹಿಳಾ ವಿಭಾಗ ಮತ್ತು ಚಿಣ್ಣರ ಬಿಂಬದ ಮಕ್ಕಳಿಂದ ಭಜನೆ, ಬೆಳಗ್ಗೆ 11ರಿಂದ ಲಕ್ಷ್ಮೀನಾರಾಯಣ ಭಜನ ಸಮಿತಿ ಮೀರಾರೋಡ್‌ ಇವರಿಂದ ಭಜನ ಸಂಕೀರ್ತನೆ ನಡೆಯಿತು.

ಮಧ್ಯಾಹ್ನ 12.30ರಿಂದ ಶರಣು ಘೋಷ, ಪಡಿಪೂಜೆ, ಪುಷ್ಪಾಂಜಲಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ 1 ರಿಂದ ಅನ್ನಸಂತರ್ಪಣೆಯನ್ನು ಆಯೋಜಿಸ ಲಾಗಿತ್ತು.  ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಮಹಾಪೂಜೆಗೆ ಸಹಕರಿಸಿದ ಸರ್ವ ದಾನಿಗಳನ್ನು ಹಾಗೂ ಗಣ್ಯರುಗಳನ್ನು ಮತ್ತು ವಿವಿಧ ಸಂಘಟನೆಗಳನ್ನು ಅಧ್ಯಕ್ಷ ಸಚಿನ್‌ ಕೋಟ್ಯಾನ್‌, ಕಾರ್ಯದರ್ಶಿ ಸುಧೀರ್‌ ಪುತ್ರನ್‌ ಅವರು ಶಾಲು ಹೊದೆಸಿ, ಮಹಾಪ್ರಸಾದವನ್ನಿತ್ತು ಗೌರವಿಸಿದರು.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಮಕ್ಕಳಿಂದ ಭಕ್ತಿಮಯ ನೃತ್ಯ ವೈವಿಧ್ಯ ನಡೆಯಿತು. ಅಯ್ಯಪ್ಪ ವ್ರತಧಾರಿಗಳಿಂದ ಅಪ್ಪಸೇವೆ, ದೀಪಾರಾಧನೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನದಾನ ನಡೆಯಿತು. ತುಳು-ಕನ್ನಡಿಗ ಭಕ್ತಾದಿಗಳು, ಶಿಬಿರದ ಅಯ್ಯಪ್ಪ ವ್ರತಧಾರಿಗಳು, ನಗರದ ವಿವಿಧೆಡೆಗಳ ಅಯ್ಯಪ್ಪ ಸ್ವಾಮಿ 

ವ್ರತದಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ದಾನಿಗಳು, ಸ್ಥಳೀಯ ಉದ್ಯಮಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.

ಈ ಕಾರ್ಯಕ್ರಮವು ಸಂಪೂರ್ಣ ಯಶಸ್ವಿಯಾಗು ವಲ್ಲಿ ಸಲಹೆಗಾರರಾದ ಶಿವರಾಮ ಶೆಟ್ಟಿ, ಅಧ್ಯಕ್ಷ ಸಚಿನ್‌ ಕೋಟ್ಯಾನ್‌, ಉಪಾಧ್ಯಕ್ಷ ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಸುಧೀರ್‌ ಪುತ್ರನ್‌, ಜತೆ ಕಾರ್ಯದರ್ಶಿ ವಿವೇಕಾನಂದ ಹೆಗ್ಡೆ, ಕೋಶಾಧಿಕಾರಿ ಸುಂದರ ಶೆಟ್ಟಿ, ಜತೆ ಕೋಶಾಧಿಕಾರಿ ಕರುಣಾಕರ ಶೆಟ್ಟಿ, ರಮೇಶ್‌ ಸಾಮಿ, ಗುರುಸ್ವಾಮಿಗಳು, ಸಮಿತಿಯ ಸದಸ್ಯರು, ಯುವ ವಿಭಾಗದವರು, ಸದಸ್ಯರು, ಮಹಿಳಾ ಸದಸ್ಯೆಯರು, ಸರ್ವ ಸದಸ್ಯರು ಸಹಕರಿಸಿದರು. ಕಾರ್ಯದರ್ಶಿ ಸುಧೀರ್‌ ಪುತ್ರನ್‌ ವಂದಿಸಿದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.