ಕೇಂದ್ರ ಜನವಿರೋಧಿ ನೀತಿ ಖಂಡಿಸಿ ಆಕ್ರೋಶ

Team Udayavani, Jan 9, 2019, 9:00 AM IST

gul-2.jpg

ಚಿತ್ತಾಪುರ: ಅಖೀಲ ಭಾರತ ಸಾರ್ವತ್ರಿಕ ಮುಷ್ಕರ ಪ್ರಯುಕ್ತ ಜ. 8, 9ರಂದು ಭಾರತ್‌ ಬಂದ್‌ ಕರೆ ನೀಡಿದ ಹಿನ್ನೆಲೆಯಲ್ಲಿ ಪಟ್ಟಣದ ಬಸ್‌ ನಿಲ್ದಾಣದ ರಸ್ತೆ ಎದುರು ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಬೃಹತ್‌ ಪ್ರತಿಭಟನೆ ನಡೆಸಿದರು.

ಈ ವೇಳೆ ಅಂಗನವಾಡಿ ನೌಕರರ ಸಂಘದ ತಾಲೂಕು ಅಧ್ಯಕ್ಷೆ ದೇವಮ್ಮ ಅನ್ನದಾನಿ, ಗ್ರಾಪಂ ನೌಕರರ ಸಂಘದ ಅಧ್ಯಕ್ಷ ದತ್ತು ಕಾಳಗಿ ಮಾತನಾಡಿ, ದೇಶದಲ್ಲಿ ಕಾರ್ಮಿಕರ ಪರ 44 ಕಾನೂನುಗಳಿವೆ. ಅವುಗಳನ್ನು ಕೇಂದ್ರ ಸರ್ಕಾರ ಬದಲಿಸಿ ನಾಲ್ಕು ಕೋಡ್‌ಗಳಾಗಿ ಮಾಡಲು ಹೊರಟಿದೆ. ಜತೆಗೆ ಕಾರ್ಮಿಕರ ಕಾನೂನು ತಿದ್ದುಪಡಿ ಮಸೂದೆ ತರಲು ಮುಂದಾಗಿದೆ. ಒಂದು ವೇಳೆ ಮಸೂದೆಗೆ ಒಪ್ಪಿಗೆ ಸಿಕ್ಕರೆ ದೇಶದಲ್ಲಿರುವ ಕಾರ್ಮಿಕರು ಬೀದಿಗೆ ಬೀಳುತ್ತಾರೆ. ಆದ್ದರಿಂದ ಅದನ್ನು ಕೂಡಲೇ ಕೈ ಬೀಡಬೇಕು ಎಂದು ಆಗ್ರಹಿಸಿದರು.

ದಿನನಿತ್ಯ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ತಡೆಗಟ್ಟಬೇಕು. ಹೊಸ ಮತ್ತು ಸಭ್ಯ ಉದ್ಯೋಗಗಳನ್ನು ಸೃಷ್ಟಿಸಬೇಕು. ಕನಿಷ್ಟ 18 ಸಾವಿರ ರೂ. ವೇತನ ಜಾರಿಗೊಳಿಸಬೇಕು. ಕಾರ್ಮಿಕರ ಕಾನೂನುಗಳ ತಿದ್ದುಪಡಿ ನಿಲ್ಲಿಸಬೇಕು. ಸ್ಕೀಂ ನೌಕರರನ್ನು ಕಾಯಂ ಮಾಡಬೇಕು. ದೇಶದ ಎಲ್ಲ ಕಾರ್ಮಿಕರಿಗೂ ಸಾರ್ವತ್ರಿಕ, ಸಾಮಾಜಿಕ ರಕ್ಷಣೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗೇರಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದ್ದರೂ, ಭಾರತದಲ್ಲಿ ಮಾತ್ರ ದುಬಾರಿ ಬೆಲೆ ನೀಡುವಂತಾಗಿದೆ. ಅನೀಲ ಬೆಲೆಯೂ ಗಗನಕ್ಕೆ ಏರುತ್ತಿದೆ. ಪರಿಣಾಮ ಕೆಳ ವರ್ಗದ ಬಡ ಕಾರ್ಮಿಕರು ಸರಳ ಜೀವನ ನಡೆಸಲು ತುಂಬ ಕಷ್ಟಕರವಾಗಿದೆ. ಆದ್ದರಿಂದ ದಿನನಿತ್ಯ ಏರುತ್ತಿರುವ ಬೆಲೆಗಳನ್ನು ತಡಗಟ್ಟಬೇಕು ಎಂದು ಆಗ್ರಹಿಸಿದರು.

ಬೆಳಗ್ಗೆ 6 ಗಂಟೆಯಿಂದ ಆರಂಭಗೊಂಡು ಸಂಜೆ ವರೆಗೆ ಪಟ್ಟಣದ ಬಸ್‌ ನಿಲ್ದಾಣದ ಎದರು ಧರಣಿ ನಡೆಸಲಾಯಿತು. ಮಧ್ಯಾಹ್ನದ ಹೊತ್ತಿಗೆ ತಾಲೂಕಿನ ವಿವಿಧ ಕಡೆಯಿಂದ ಅಂಗನವಾಡಿ ನೌಕರರು, ವಿವಿಧ ಕಾರ್ಮಿಕರು, ಗ್ರಾಪಂ ನೌಕರರರು, ಬಿಸಿಯೂಟ ನೌಕರರು ಭಾಗವಹಿಸಿದ್ದರು. ಪ್ರತಿಭಟನಾಕಾರರು ರಸ್ತೆ ಮೇಲೆ ಅಡುಗೆ ಮಾಡಿ ಭೋಜನೆ ಮಾಡಿದರು. ಧರಣಿಯಲ್ಲಿ ಕ್ರಾಂತಿ ಗೀತೆಗಳು ಮೂಳಗಿದವು. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಂಗಡಿ-ಮುಂಗಟ್ಟು, ಬ್ಯಾಂಕ್‌, ಸರ್ಕಾರಿ ಕಚೇರಿಗಳು ಯಥಾ ಸ್ಥಿತಿಯಲ್ಲಿದ್ದವು. ಬಸ್‌ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಬಸ್‌ಗಳು ಹಾಗೂ ಪ್ರಯಾಣಿಕರಿಲ್ಲದೇ ಬಸ್‌ ನಿಲ್ದಾಣ ಬಿಕೋ ಎನ್ನುತಿತ್ತು. ಲಾರಿ, ಕ್ರಷರ್‌, ಆಟೋ, ಬೈಕ್‌ ಸವಾರರು ಯಾವುದೇ ಅಡೆತಡೆಯಿಲ್ಲದೆ ಸಂಚರಿಸಿದರು. ಸಾರ್ವಜನಿಕರಿಂದ ಹಾಗೂ ವ್ಯಾಪರಸ್ಥರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಪ್ರತಿಭಟನಾ ಮೆರವಣಿಗೆ ಎಪಿಎಂಸಿಯಿಂದ ಆರಂಭವಾಗಿ ಸ್ಟೇಷನ್‌ ರಸ್ತೆ, ನಾಗಾವಿ ವೃತ್ತ, ಭುವನೇಶ್ವರ ಚೌಕ್‌, ಅಂಬೇಡ್ಕರ್‌ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಬಸ್‌ ನಿಲ್ದಾಣದ ಎದರು ಧರಣಿ ನಡೆಸಲಾಯಿತು.

ಬಿಸಿಯೂಟದ ಅಧ್ಯಕ್ಷೆ ಸಂಗೀತಾ ಗುತ್ತೇದಾರ, ಪಾರ್ವತಿ ಕಾಳಗಿ, ಸಾಬಮ್ಮ ನಾಲವಾರ, ಶೇಕಮ್ಮ ಕುರಿ, ಶಾಂತಾ ಗಾಯಕವಾಡ, ಜ್ಯೋತಿ ರಾಠೊಡ, ಸುವರ್ಣ ಶಾಂಪೂರಹಳ್ಳಿ, ಸುನೀತಾ, ವಿದ್ಯಾನಿ, ಗೀತಾ, ರೇಣುಕಾ, ರಾಚಯ್ಯ ಸ್ವಾಮಿ ಅಲ್ಲೂರ್‌, ಚಿತ್ರಶೇಖರ ದೇವರ್‌, ಮಲ್ಲಣ್ಣ ಹೊನಗುಂಟ್ಟಿ, ಜೈಪಾಲ ದಂಡೋತಿ, ಕಲ್ಯಾಣಿ ಭಾಗೋಡಿ, ರಮೇಶ ಕವಡೆ, ಜಗದೀಶ ಸಾಗರ, ರೇಣುಕಾ ಚಿಂಚೋಳಿ, ಸುಧಾಕರ ಸಾಲಹಳ್ಳಿ, ಭಾರತ್‌ ಶಹಾಬಾದ, ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.