ಎಸಿಸಿ ವಿರುದ್ಧ ಗುತ್ತಿಗೆ ಕಾರ್ಮಿಕರ ಆಕ್ರೋಶ-ಪ್ರತಿಭಟನೆ

Team Udayavani, Jan 9, 2019, 9:16 AM IST

gul-4.jpg

ವಾಡಿ: ಭಾರತ ಬಂದ್‌ ಬೆಂಬಲಿಸಿ ಹೋರಾಟಕ್ಕಿಳಿದ ಪಟ್ಟಣದ ಎಸಿಸಿ ಸಿಮೆಂಟ್ ಕಂಪನಿಯ ನೂರಾರು ಗುತ್ತಿಗೆ ಕಾರ್ಮಿಕರು, ಉದ್ಯೋಗ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಎಸಿಸಿ ಕಾರ್ಮಿಕ ಸಂಘ ಎಐಟಿಯುಸಿ ಚುನಾಯಿತ ಪದಾಧಿಕಾರಿಗಳ ನೇತೃತ್ವದಲ್ಲಿ ಕಂಪನಿಯ ಪವರ್‌ ಪ್ಲ್ಯಾಂಟ್ ಹಾಗೂ ಮುಖ್ಯ ದ್ವಾರದ ಎದುರು ಜಮಾಯಿಸಿದ್ದ ಕಾರ್ಮಿಕರು, ಸಿಮೆಂಟ್ ಪ್ಯಾಕಿಂಗ್‌ ಹೌಸ್‌ ಬಂದ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಕಾಯಂ ನೌಕರರು ಎಂದಿನಂತೆ ಕೆಲಸದಲ್ಲಿ ತೊಡಗಿಕೊಂಡಿದ್ದರೆ, ಯಾವೊಬ್ಬ ಗುತ್ತಿಗೆ ಕಾರ್ಮಿಕನೂ ಕಂಪನಿಯೊಳಗೆ ಪ್ರವೇಶಿಸದೇ ಒಗ್ಗಟ್ಟು ಪ್ರದರ್ಶಿಸಿದರು.

ಎಸಿಸಿ ವಿರುದ್ಧ ಘೋಷಣೆ ಕೂಗಿದ ಮಹಿಳಾ ಮತ್ತು ಪುರುಷ ಗುತ್ತಿಗೆ ಕಾರ್ಮಿಕರು, ತಿಂಗಳಲ್ಲಿ ಕೇವಲ ಎಂಟು ದಿವಸ ಮಾತ್ರ ನಮಗೆ ಕೆಲಸ ಕೊಡಲಾಗುತ್ತಿದೆ. ಉಳಿದ ದಿನಗಳಲ್ಲಿ ಕೆಲಸ ನೀಡದೆ ಹೊರಗೆ ತಳ್ಳಲಾಗುತ್ತಿದೆ. ಇದರಿಂದ ನಮಗೆ ಉದ್ಯೋಗದ ಅಭದ್ರತೆ ಕಾಡುತ್ತಿದೆ. ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಮಕ್ಕಳು ಮತ್ತು ವೃದ್ಧ ತಂದೆ ತಾಯಿಯಂದಿರನ್ನು ಮನೆಯಲ್ಲಿ ಬಿಟ್ಟು ಬೆಳಗ್ಗೆ 6 ಗಂಟೆಗೆ ಕಂಪನಿ ಗೇಟ್ ಎದುರು ಹಾಜರಿರುತ್ತೇವೆ. ಕೆಲಸ ಕೊಡುವಂತೆ ಅಂಗಲಾಚುತ್ತೇವೆ. ಕಂಪನಿ ನಮ್ಮ ಗೋಳು ಕೇಳಿಸಿಕೊಳ್ಳುವುದಿಲ್ಲ. ಕ್ವಾರಿ ವಿಭಾಗದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ದಿನಕ್ಕೆ 370ರೂ., ಇತರ ವಿಭಾಗಗಳಲ್ಲಿನ ಮಹಿಳಾ ಕಾರ್ಮಿಕರಿಗೆ 411ರೂ. ನೀಡುವ ಮೂಲಕ ಕಂಪನಿಯವರು ವೇತನ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಮಹಿಳಾ ಕಾರ್ಮಿಕರು ದೂರಿದರು.

ತಿಂಗಳಿಗೆ ಕನಿಷ್ಟ 20 ಹಾಜರಿ ಕೆಲಸ ನೀಡಬೇಕು. ಕ್ಯಾಂಟಿನ್‌ ಕೆಲಸದಲ್ಲಿ ಕಿರುಕುಳ ತಪ್ಪಿಸಬೇಕು. ಆರೋಗ್ಯ ಸೌಲಭ್ಯ, ಕ್ಯಾಂಟಿನ್‌ ಊಟ ಮತ್ತು ಉಪಹಾರದ ವ್ಯವಸ್ಥೆಗಳನ್ನು ಕಂಪನಿ ವತಿಯಿಂದ ಉಚಿತವಾಗಿ ಮಾಡಬೇಕು. ಇಎಸ್‌ಐ-ಪಿಎಫ್‌ ಸೌಲಭ್ಯ ಒದಗಿಸಬೇಕು. ಗುತ್ತಿಗೆ ಕಾರ್ಮಿಕರಿಗೂ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಲಾರಿಗಳ ಮೂಲಕ ಹೊರಗಿನಿಂದ ಕಚ್ಚಾ ವಸ್ತುವಾಗಲಿ ಅಥವಾ ಒಳಗಿನಿಂದ ಸಿಮೆಂಟ್ ವಾಹನಗಳಾಗಲಿ ಚಲಿಸದೆ ಸ್ಥಗಿತಗೊಂಡಿದ್ದರಿಂದ ಕಂಪನಿ ಆಡಳಿತ ಮಂಡಳಿಗೆ ಸಹಜವಾಗಿ ಹೋರಾಟದ ಬಿಸಿ ಮುಟ್ಟಿತು.

ಕಾರ್ಮಿಕ ಸಂಘದ ಮುಖಂಡರಾದ ರಮೇಶ ಕಾರಬಾರಿ, ಶಾಮಸನ್‌, ಮಹ್ಮದ್‌ ಮನ್ಸೂರ್‌ ಅಲಿ, ಮಹ್ಮದ್‌ ಫಯ್ನಾಜ್‌, ಪಿ.ಕ್ರಿಸ್ಟೋಫರ್‌, ತುಕಾರಾಮ ರಾಠೊಡ, ಗುತ್ತಿಗೆ ಕಾರ್ಮಿಕರ ಮುಖಂಡರು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು. ಪಿಎಸ್‌ಐ ವಿಜಯಕುಮಾರ ಭಾವಗಿ ಬಿಗಿ ಬಂದೋಬಸ್ತ್ ಒದಗಿಸಿದ್ದರು.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.