ಸಂವಿಧಾನ ಅಧ್ಯಯನ-ರಕ್ಷಣೆ ಅವಶ್ಯ: ವಿಜಯಸಿಂಗ್‌

Team Udayavani, Jan 9, 2019, 10:40 AM IST

bid-1.jpg

ಔರಾದ: ಶೋಷಿತ ಹಾಗೂ ಹಿಂದುಳಿದ ಸಮುದಾಯದವರು ಸೇರಿದಂತೆ ದೇಶದ ಪ್ರತಿಯೊಬ್ಬ ನಾಗರಿಕರು ಸಂವಿಧಾನ ಕುರಿತು ಅಧ್ಯಯನ ಮಾಡಿ, ಅದರ ರಕ್ಷಣೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಹೇಳಿದರು.

ಜಂಬಗಿ ಗ್ರಾಮದಲ್ಲಿ ನಡೆದ ಸಂವಿಧಾನದ ಹಾದಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟುವ ಉದ್ದೇಶದಿಂದ ಭೀಮರಾವ್‌ ಅಂಬೇಡ್ಕರ್‌ ಸಂವಿಧಾನ ರಚನೆ ಮಾಡಿ ನಮ್ಮ ರಕ್ಷಣೆ ಮಾಡಿದ್ದಾರೆ. ಅಂಥ ಮಹಾನ್‌ ವ್ಯಕ್ತಿಯನ್ನು ಪ್ರತಿಯೊಬ್ಬರು ನಿತ್ಯ ನಿರಂತರ ಸ್ಮರಿಸಬೇಕು ಎಂದರು. ದೇಶದ ಪ್ರತಿಯೊಬ್ಬರು ಸ್ವಾಭಿಮಾನದಿಂದ ಗೌರವಿಸಿ ಪೂಜೆ ಸಲ್ಲಿಸಲು ಮುಂದಾಗಬೇಕಾಗಿರುವ ನಮ್ಮ ದೇಶದ ಸಂವಿಧಾನಕ್ಕೆ ಬೆಂಕಿ ಹಚ್ಚುವ ಮುಖಂಡರು ಒಂದಡೆಯಾಗಿದ್ದರೆ, ಇನ್ನೊಂದೆಡೆ ದೇಶದ ಸಂವಿಧಾನವನ್ನೆ ಬದಲಾವಣೆ ಮಾಡುತ್ತೇವೆ ಎಂದು ಕೇಂದ್ರ ಸಚಿವರೊಬ್ಬರು ಬಹಿರಂಗವಾಗಿ ವೇದಿಕೆಯಲ್ಲಿ ಹೇಳಿಕೆ ನೀಡುತ್ತಿರುವುದು ದುಃಖದ ಸಂಗತಿಯಾಗಿದೆ. ಸಂವಿಧಾನದ ರಕ್ಷಣೆ ಮಾಡಿ ಜನರ ಕಲ್ಯಾಣಕ್ಕಾಗಿ ದುಡಿಯಲು ಮುಂದಾಗಬೇಕಾದ ಜನಪ್ರತಿನಿಧಿಗಳು ಇಂಥ ಹೇಳಿಕೆ ನೀಡುವುದು ಅವರ ಹುದ್ದೆಗೆ ಗೌರವ ತರುವುದಿಲ್ಲ ಎಂದರು.

ದಲಿತ ಹಾಗೂ ಹಿಂದುಳಿದ ವರ್ಗದ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರನ್ನು ಅಕ್ಷರಸ್ಥರನ್ನಾಗಿ ಮಾಡಿ, ಮಕ್ಕಳು ದೇಶದ ಸಂವಿಧಾನದ ಬಗ್ಗೆ ಅರಿತು ರಕ್ಷಣೆ ಮಾಡಲು ಮುಂದಾಗುವಂತೆ ಮಾರ್ಗದರ್ಶನ ಮಾಡಬೇಕು ಎಂದರು. ಬಡ ಹಾಗೂ ಹಿಂದುಳಿದ ವರ್ಗದ ಜನರ ಕಲ್ಯಾಣಕ್ಕಾಗಿ ರಾಜ್ಯ ಸರಕಾರ ಪ್ರತಿವರ್ಷ ವಿನೂತನ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೆ. ಅವುಗಳ ಸದುಪಯೋಗ ಪಡೆದು ನೆಮ್ಮದಿಯ ಜೀವನ ಸಾಗಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ತಾಲೂಕಿನ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಬೇಸಿಗೆಯಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಜಾಗ್ರತೆಯಿಂದ ಕೆಲಸ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು. ತಾಲೂಕು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದನೆ ಮಾಡಲು ಹಿಂದೇಟು ಹಾಕುತ್ತಿದ್ದರೆ ನಮ್ಮ ಗಮನಕ್ಕೆ ತನ್ನಿ. ತಕ್ಷಣವೇ ಸಮಸ್ಯೆಗೆ ಬಗೆ ಹರಿಸಲಾಗುತ್ತದೆ ಎಂದು ಸಲಹೆ ನೀಡಿದರು.

ಚರಣಸಿಂಗ್‌ ರಾಠೊಡ, ಸಿದ್ದಪ್ಪ ಬೋರಗೆ, ನಾಗಪ್ಪ ಮಾಸ್ಟರ್‌, ಮಲ್ಲಿಕಾರ್ಜುನ ಜಂಬಗಿ, ಸಾದುರೆ ಶಿವಕುಮಾರ, ಸಲಾವುದ್ದಿನ ಜಂಬಗಿ ಹಾಗೂ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.