ಇಂದಿನಿಂದ ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ


Team Udayavani, Jan 11, 2019, 12:30 AM IST

q-37.jpg

ಹೊಸದಿಲ್ಲಿ: ಮುಂದಿನ ತಿಂಗಳ ಕೊನೆಯ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಆಗಬಹುದು ಎಂಬ ಊಹನೆಯೊಂದಿಗೆ ಬಿಜೆಪಿಯ ರಾಷ್ಟ್ರೀಯ ಮಂಡಳಿ ಸಭೆ ಜ. 11ರಿಂದ 2 ದಿನಗಳ ಕಾಲ ನಡೆಯಲಿದೆ.  ಹೊಸ ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಸಮಾಜದ ವಿವಿಧ ವರ್ಗಗಳನ್ನು ತಲಪುವ ನಿಟ್ಟಿನಲ್ಲಿ ವಿವಿಧ ಕಾರ್ಯ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಶುಕ್ರವಾರ ರಾಷ್ಟ್ರೀಯ ಮಂಡಳಿ ಸಭೆಯನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶನಿವಾರ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಲಿದ್ದಾರೆ. ಬಿಹಾರದಲ್ಲಿ ಮಾಜಿ ಸಚಿವ ಉಪೇಂದ್ರ ಖುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಸಮತಾ ಪಕ್ಷ (ಆರ್‌ಎಲ್‌ಎಸ್‌ಪಿ) ಎನ್‌ಡಿಎ ತೊರೆದಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎನ್‌ಡಿಎಯನ್ನು ಮತ್ತಷ್ಟು ಬಲವರ್ಧನೆ ಗೊಳಿಸುವ ನಿಟ್ಟಿನಲ್ಲಿಯೂ ಚರ್ಚೆಗಳು ನಡೆಯಲಿವೆ ಎಂದು ನಿರೀಕ್ಷಿಸಲಾಗಿದೆ. 

 ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಆಡಳಿತಾರೂಡ ಪಕ್ಷಕ್ಕೆ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಸರ್ಕಾರಿ ಉದ್ಯೋಗ, ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲು ವಿಧೇಯಕ ಸಂಸತ್‌ನಲ್ಲಿ ಅನುಮೋದನೆಗೊಂಡಿರುವುದು  ಮುಂದಿನ ಚುನಾವಣೆಯಲ್ಲಿ ಧನಾತ್ಮಕವಾಗಿ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯವಾಗಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲೋಕಸಭಾ ಸ್ಥಾನ ಗೆದ್ದುಕೊಳ್ಳಲು ಅನುಕೂಲವಾಗಲಿದೆ. ಇತರ ಹಿಂದುಳಿದ ವರ್ಗಗಳ ಆಯೋಗ (ಒಬಿಸಿ)ಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿದ್ದು, ದಲಿತರು ಮತ್ತು ಬುಡಕಟ್ಟು ವರ್ಗಗಳ ಜನರ ಮೇಲಿನ ದೌರ್ಜನ್ಯ ಕಾಯ್ದೆಯನ್ನು ಬಲವರ್ಧನೆ ಮಾಡಿದ್ದು, ರೈತರ ಕಲ್ಯಾಣಕ್ಕಾಗಿ ಕೈಗೊಂಡಿರುವ ಹಲವು ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಬಿಜೆಪಿ ಮೂಲಗಳು ಹೇಳಿವೆ. 2014ರ ಚುನಾವಣೆಯಲ್ಲಿ ಬಿಜೆಪಿ 283 ಸ್ಥಾನಗಳನ್ನು ಗೆದ್ದು ಇತ್ತೀಚಿನ ವರ್ಷಗಳಲ್ಲಿ  ಬಹುಮತ ಸಾಧಿಸಿದ ಒಂದೇ ಪಕ್ಷ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಅದನ್ನು ಉಳಿಸಿಕೊಂಡು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪಕ್ಷದ ಅಧ್ಯಕ್ಷ ಅಮಿತ್‌ ಶಾ ಚುನಾವಣಾ ತಂತ್ರ ರೂಪಿಸಿದ್ದಾರೆ. 

ತಾತ್ಕಾಲಿಕ ಪ್ರಧಾನಿ ಕಚೇರಿ
ರಾಮಲೀಲಾ ಮೈದಾನದಲ್ಲಿ ಎರಡು ದಿನಗಳ ಕಾಲ ತಾತ್ಕಾಲಿಕವಾಗಿ ಪ್ರಧಾನ ಮಂತ್ರಿಗಳ ಕಚೇರಿ ನಿರ್ಮಿಸಲು ಉದ್ದೇಶಿಸಲಾಗಿದೆ. ಅಲ್ಲಿಂದಲೇ ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ಸಂಬಂಧಿಸಿದ ದೈನಂದಿನ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ. ಸೌತ್‌ ಬ್ಲಾಕ್‌ನಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಯಾವ ರೀತಿಯಲ್ಲಿ ವ್ಯವಸ್ಥೆ ಇರಲಿದೆಯೋ ಅದನ್ನೇ ಯಥಾವತ್‌ ಅಳವಡಿಸಿಕೊಳ್ಳಲಾಗುತ್ತದೆ. ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ, ಉಪ ಮುಖ್ಯಮಂತ್ರಿಗಳಿಗಾಗಿ ಪ್ರತ್ಯೇಕ ಲಾಂಜ್‌ಗಳನ್ನು ನಿರ್ಮಿಸಲಾಗುತ್ತದೆ. ಅಲ್ಲಿ ಸಂಪೂರ್ಣ ವೈ-ಫೈ ವ್ಯವಸ್ಥೆ ಇರಲಿದೆ. ಇದರ ಜತೆಗೆ ಪಕ್ಷದ ಅಧ್ಯಕ್ಷ ಅಮಿತ್‌ ಶಾಗೂ ತಾತ್ಕಾಲಿಕ ಕಚೇರಿ ವ್ಯವಸ್ಥೆ ಮಾಡಲಾಗಿದೆ. 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.