ಸ್ವಂತ ದುಡ್ಡಲ್ಲಿ ಕೆರೆಗೆ ನೀರು ಹರಿಸಿದ್ರು!

Team Udayavani, Jan 11, 2019, 7:38 AM IST

dvg9.jpg

ಹೊನ್ನಾಳಿ: ತಮ್ಮ ಸ್ವಂತ ಹಣ ಖರ್ಚು ಮಾಡಿ ಕಳೆದ ಇಪ್ಪತ್ತು ವರ್ಷಗಳಿಂದ ಬತ್ತಿ ಹೋಗಿದ್ದ ಕೆರೆಯೊಂದನ್ನು ತುಂಬಿಸುವ ಮೂಲಕ ನಿವೃತ್ತ ಕಂದಾಯಾಧಿ ಕಾರಿಯೊಬ್ಬರು ಆಧುನಿಕ ಭಗೀರಥರೆನಿಸಿಕೊಂಡಿದ್ದಾರೆ. ತಾಲೂಕಿನ ಕುಂಕುವ ಗ್ರಾಮದ ಗೌಡನ ಕೆರೆಗೆ ಸುಮಾರು ಮೂರು ಕಿಮಿ ಪೈಪ್‌ಲೈನ್‌ ಅಳವಡಿಸಿ ನೀರು ತುಂಬಿಸಿದ ನಿವೃತ್ತ ಕಂದಾಯಾಧಿಕಾರಿ ಚಂದ್ರನಾಯ್ಕ ಕಾರ್ಯದ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕುಂಕುವ ಗ್ರಾಮದ ಗೌಡನ ಕೆರೆ ಬತ್ತಿ ಹೋಗಿದ್ದರಿಂದ ಕೆರೆ ವ್ಯಾಪ್ತಿಯ ಒಡೆಯರ ಹತ್ತೂರು ತಾಂಡಾ, ಕುಂಕುವ, ಕೂಗನಹಳ್ಳಿ ತಾಂಡಾ, ಒಡೆಯರ ಹತ್ತೂರು ಹಾಗೂ ಗಡೆಕಟ್ಟೆ ಗ್ರಾಮಗಳ ಜನ, ಜಾನುವಾರುಗಳು ನೀರಿನ ಸಮಸ್ಯೆ ಎದುರಿಸಬೇಕಾಗಿತ್ತು. 

ಅಂತರ್ಜಲ ಮಟ್ಟ ಕುಸಿದು ಕೃಷಿ ನೆಲಕಚ್ಚಿತ್ತು. ಇಂತಹ ಸಂದರ್ಭದಲ್ಲಿ ನಿವೃತ್ತ ಜೀವನ ನಡೆಸುತ್ತಿರುವ ಕಂದಾಯಾಧಿಕಾರಿ ಚಂದ್ರನಾಯ್ಕ ತಮ್ಮ ಗ್ರಾಮದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಛಲ ತೊಟ್ಟರು.

ಗೌಡನ ಕೆರೆಗೆ ನೀರು ತುಂಬಿಸುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದಾಗ ಎಲ್ಲರೂ ಸಹಕರಿಸುವ ಭರವಸೆ ನೀಡಿದರು. ಆದರೆ ಕಾರ್ಯರೂಪಕ್ಕೆ ತರಲು ಮುಂದಾದಾಗ ನಿರೀಕ್ಷಿತ ಸಹಕಾರ ಸಿಗಲೇ ಇಲ್ಲ. ಆದರೂ ಎದೆಗುಂದದೆ ಕುಟುಂಬ ಸದಸ್ಯರು, ಕೆಲವು ಗ್ರಾಮಸ್ಥರ ಜತೆಗೂಡಿ 48 ಎಕರೆ ವಿಸ್ತೀರ್ಣದ ಗೌಡನ ಕೆರೆ ಹಾಗೂ 12 ಎಕರೆ ವಿಸ್ತೀರ್ಣದ ಪರಸಪ್ಪನ ಕೆರೆಗೆ ನೀರು ತುಂಬಿಸಲು ಮುಂದಾದರು. 

ತಾವೇ ಸುಮಾರು ರೂ. 15 ಲಕ್ಷ ರೂ. ಖರ್ಚು ಮಾಡಿ, ಸುಮಾರು ಮೂರು ಕಿ.ಮೀ ದೂರದ ತುಂಗಾ ಕೆನಾಲ್‌ವರೆಗೆ ಪೈಪ್‌ಲೈನ್‌ ಅಳವಡಿಸಿದರು. 26 ಎಚ್‌ಪಿ ಮೋಟಾರ್‌ ಅಳವಡಿಸಿ ಕೆರೆಗಳನ್ನು ತುಂಬಿಸಿದರು. ಇಂದು ಎರಡೂ ಕೆರೆಗಳಲ್ಲಿ ನೀರು ತುಂಬಿರುವುದರಿಂದ ಸುತ್ತಮುತ್ತಲಿನ ಐದು ಗ್ರಾಮಗಳ ಅಂತರ್ಜಲ ಮಟ್ಟ ಹೆಚ್ಚಿದೆ. ಅಷ್ಟೆ ಅಲ್ಲ, ಈ ಗ್ರಾಮಗಳ ವ್ಯಾಪ್ತಿಯ ಸುಮಾರು 600 ಎಕರೆ ಅಡಕೆ ಹಾಗೂ ತೆಂಗು ಬೆಳೆಗಳು ಕಂಗೊಳಿಸುತ್ತಿವೆ.

ಕೇವಲ ದುಡಿದು ನನ್ನ ಕುಟುಂಬದ ನಿರ್ವಹಣೆ ಮಾಡಿ ಹೋದರೆ ಪರಮಾತ್ಮ ಮೆಚ್ಚಲಾರ. ದುಡಿದ ಒಂದು ಭಾಗದಲ್ಲಿ ಸಮಾಜ ಸೇವೆ ಮಾಡಬೇಕು ಎನ್ನಿಸಿತು. ಆಗ ನನಗೆ ಕಾಣಿಸಿದ್ದು ನನ್ನೂರು. ಇಲ್ಲಿ ಜಾನುವಾರುಗಳಿಗೆ ಕುಡಿಯುವುದಕ್ಕೆ ನೀರಿಲ್ಲದ್ದನ್ನು ಕಂಡೆ. ಕೆರೆ ಬತ್ತಿರುವುದನ್ನು ಗಮನಿಸಿ, ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ಈಗ ಕೆರೆ ತುಂಬಿದೆ. ಜಾನುವಾರುಗಳು ಕೆರೆಗೆ ಬಂದು ನೀರು ಕುಡಿದು ಹೋಗುತ್ತಿರುವುದನ್ನು ಕಂಡರೆ ಸಂತಸವಾಗುತ್ತದೆ.
 ಚಂದ್ರನಾಯ್ಕ, ನಿವೃತ್ತ ಕಂದಾಯಾಧಿಕಾರಿ

ಬಯಲು ಸೀಮೆಯಂತಿರುವ ಈ ಭಾಗದಲ್ಲಿ ಚಂದ್ರನಾಯ್ಕ ಅವರು ಕೆರೆ ತುಂಬಿಸಿ ಜನ ಜಾನುವಾರುಗಳಿಗೆ ನೀರೊದಗಿಸಿ ಪುಣ್ಯದ ಕಾರ್ಯ ಮಾಡಿದ್ದಾರೆ.
 ಡಿ.ರುದ್ರೇಶ್‌, ಗ್ರಾ.ಪಂ ಅಧ್ಯಕ್ಷ, ಕುಂಕುವ ಗ್ರಾ.ಪಂ.

ಎಷ್ಟೇ ಹಣವಿದ್ದರೂ ಸ್ವಂತಕ್ಕೆ ಇರಲಿ ಎನ್ನುವ ಈ ಕಾಲದಲ್ಲಿ ಕೆರೆ ತುಂಬಿಸುವ ಕಾರ್ಯ ಮಾಡಿ ಚಂದ್ರನಾಯ್ಕ ದೊಡ್ಡ ಸಾಧನೆ ಮಾಡಿದ್ದಾರೆ.
 ಎಂ.ಪಿ. ರೇಣುಕಾಚಾರ್ಯ, ಶಾಸಕರು.

„ಎಂ.ಪಿ.ಎಂ. ವಿಜಯಾನಂದಸ್ವಾಮಿ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.