ಒಂದೇ ದಿನಕ್ಕೆ ಸಾವಿರಕ್ಕೂ ಅಧಿಕ ರೈತರ ನೋಂದಣಿ


Team Udayavani, Jan 11, 2019, 10:10 AM IST

ray-2.jpg

ಜಾಲಹಳ್ಳಿ: ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಿದ್ದು, ಹೆಸರು ನೋಂದಣಿಗೆ ರೈತರು ಮುಗಿಬಿದ್ದಿದ್ದರಿಂದ ನೂಕುನುಗ್ಗಲು ಉಂಟಾಯಿತು. ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ರೈತರು ಹೆಸರು ನೋಂದಾಯಿಸಿದ್ದು, ಸುಮಾರು ಮೂರು ಸಾವಿರ ಗಡಿ ದಾಟುವ ಲಕ್ಷಣ ಇದೆ.

ತೊಗರಿ ಬೆಳೆದ ರೈತರು ಪಹಣಿ ಪತ್ರ, ಆಧಾರ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌, ಬೆಳೆ ದೃಢೀಕರಣ ಪತ್ರ ಸೇರಿ ಇತರೆ ದಾಖಲಾತಿಗಳನ್ನು ನೀಡಿ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಬೇಕೆಂದು ಸರ್ಕಾರ ಆದೇಶಿಸಿದೆ. ಹೀಗಾಗಿ ರೈತರು ಹೆಸರು ನೋಂದಣಿಗೆ ಮುಗಿಬಿದ್ದ ಪರಿಣಾಮ ನೂಕುನುಗ್ಗಲು ಉಂಟಾಯಿತು.

ಜಾಲಹಳ್ಳಿ ಹೋಬಳಿ ವ್ಯಾಪ್ತಿಯ 40ಕ್ಕೂ ಹೆಚ್ಚಿನ ಹಳ್ಳಿಗಳಲ್ಲಿ ಸಾವಿರಾರು ರೈತರು ತೊಗರಿ ಬೆಳೆದಿದ್ದಾರೆ. ಸರಕಾರ ಇಡೀ ಹೋಬಳಿಯಲ್ಲಿ ಒಂದೇ ಖರೀದಿ ಕೇಂದ್ರ ಆರಂಭಿಸಿದೆ. ಒಂದು ಪಹಣಿಗೆ 10 ಕ್ವಿಂಟಾಲ್‌ ಮಾತ್ರ ಖರೀದಿಸಲಾಗುವುದು ಎಂದು ನಿಯಮ ಹೇರಿದೆ. ಹೀಗಾಗಿ 10 ಕ್ವಿಂಟಾಲ್‌ಗಿಂತ ಹೆಚ್ಚು ತೊಗರಿ ಬೆಳೆದ ರೈತರು ಬೇರೆಯವರ ದಾಖಲಾತಿಗಳನ್ನು ನೀಡಿ ಹೆಸರು ನೋಂದಣಿಗೆ ಮುಂದಾಗಿದ್ದು ನೂಕು ನುಗ್ಗಲಿಗೆ ಕಾರಣವಾಗಿದೆ.

ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ ತೊಗರಿಗೆ 4900 ರೂ. ದರ ಇದೆ. ಖರೀದಿ ಕೇಂದ್ರದಲ್ಲಿ ಕ್ವಿಂಟಾಲ್‌ಗೆ 6100 ದರದಲ್ಲಿ ಖರೀದಿಸಲಾಗುತ್ತಿದೆ. ಮಾರುಕಟ್ಟೆ ದರಕ್ಕಿಂತ 1200 ರೂ. ಹೆಚ್ಚಿಗೆ ಸಿಗುವುದರಿಂದ ರೈತರು ತೊಗರಿ ಖರೀದಿ ಕೇಂದ್ರದಲ್ಲಿ ತೊಗರಿ ಮಾರಲು ಮುಂದಾಗುತ್ತಿದ್ದಾರೆ. ಆದರೆ ಸರಕಾರ ರೈತರ ಸಂಖ್ಯೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದರೆ ಅಥವಾ ಪಹಣಿಗೆ 10 ಕ್ವಿಂಟಾಲ್‌ ಎಂದು ನಿಗದಿಪಡಿಸದಿದ್ದರೆ ಈ ನೂಕುನುಗ್ಗಲು ಇರುತ್ತಿರಲಿಲ್ಲ ಎಂದು ರೈತರು ಹೇಳಿದರು.

ಆಗ್ರಹ: ದಾಖಲಾತಿಗಳಲ್ಲಿನ ಹೆಸರು, ಪಹಣಿಯಲ್ಲಿ ದಾಖಲಾದ ಬೆಳೆಗೂ ತಾಳೆಯಾಗದೇ ಇರುವುದು, ಕೆಲ ರೈತರ ಹೆಸರುಗಳು ತಹಶೀಲ್ದಾರ್‌ ಲಾಗಿನ್‌ಗೆ ಹೋಗಿದ್ದು, ಈ ಸಮಸ್ಯೆಯನ್ನು ತಹಶೀಲ್ದಾರರೇ ಪರಿಹರಿಸಬೇಕಿದ್ದರಿಂದ ರೈತರು ತಹಶೀಲ್ದಾರ್‌ ಕಚೇರಿಗೆ ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರ ರೈತರಿಗೆ ಅನುಕೂಲ ಮಾಡುವ ಹೆಸರನಲ್ಲಿ ಇಲ್ಲದ ನಿಯಮಗಳನ್ನು ಹೇರಿ ಗೊಂದಲ ಉಂಟು ಮಾಡುತ್ತಿದೆ. ಇದರಿಂದ ರೈತರಿಗೆ ಸಹಾಯವಾಗುವ ಬದಲು ಮತ್ತಷ್ಟು ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾಧಿಕಾರಿಗಳು ಗಮನ ಹರಿಸಿ ಪ್ರತಿ ಪಹಣಿಗೆ 10 ಕ್ವಿಂಟಾಲ್‌ ಖರೀದಿಸುವ ನಿರ್ಬಂಧ ತೆಗೆದು ಹಾಕಬೇಕು. ದಾಖಲಾತಿಗಳಲ್ಲಿ ಸಣ್ಣಪುಟ್ಟ ದೋಷಗಳಿದ್ದರೂ ತೊಗರಿ ಖರೀದಿಗೆ ಅವಕಾಶ ನೀಡಬೇಕೆಂದು ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.