ಸಮಾಜ ಕಲ್ಯಾಣ ಇಲಾಖೆ ಕಚೇರಿ ಖಾಲಿ ಖಾಲಿ!

Team Udayavani, Jan 11, 2019, 10:15 AM IST

ray-3.jpg

ಮಾನ್ವಿ: ಇಲ್ಲಿನ ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಪರಿಚಾರಕ (ಅಟೆಂಡರ್‌) ಬಿಟ್ಟರೆ ಉಳಿದ ಹುದ್ದೆಗಳೆಲ್ಲ ಖಾಲಿ ಇವೆ. ನಿಯೋಜನೆಗೊಂಡ ಪ್ರಭಾರ ಅಧಿಕಾರಿಗಳು ಬರುವುದು ಅಪರೂಪ. ಹೀಗಾಗಿ ಇಲಾಖೆ ವ್ಯಾಪ್ತಿಯಲ್ಲಿನ ವಸತಿ ನಿಲಯಗಳ ವಿದ್ಯಾರ್ಥಿಗಳ ಗೋಳು ಕೇಳ್ಳೋರಿಲ್ಲದಂತಾಗಿದೆ.

ಹುದ್ದೆ ಖಾಲಿ: ತಾಲೂಕು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಟೆಂಡರ್‌ ಒಬ್ಬರೇ ಇದ್ದಾರೆ. ತಾಲೂಕು ಅಧಿಕಾರಿ, ವ್ಯವಸ್ಥಾಪಕ ಎಸ್‌ಡಿಎ. ಎಫ್‌ಡಿಎ, ಬೆರಳಚ್ಚುಗಾರರು, ಕಂಪ್ಯೂಟರ್‌ ನಿರ್ವಾಹಕ ಹುದ್ದೆಗಳು ಖಾಲಿ ಇವೆ. ಇಲಾಖೆ ವ್ಯಾಪ್ತಿಯಲ್ಲಿ 11 ವಸತಿ ನಿಲಯಗಳಿದ್ದು, 1,359 ವಿದ್ಯಾರ್ಥಿಗಳಿದ್ದಾರೆ. ಬೇರೆ ತಾಲೂಕು ಅಧಿಕಾರಿಗಳನ್ನು ಇಲ್ಲಿಗೆ ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ಆದರೆ ಅಧಿಕಾರಿಗಳು ಕಚೇರಿಗೆ ಬರುವುದೇ ಅಪರೂಪ. ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಡಿ ಇಬ್ಬರೂ ಗಣಕಯಂತ್ರ ನಿರ್ವಾಹಕರನ್ನು ನೇಮಿಸಿಕೊಳ್ಳಲಾಗಿದೆ.

ವಸತಿ ನಿಲಯಗಳಲ್ಲಿಲ್ಲ ಸೌಕರ್ಯ: ತಾಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 11 ವಸತಿ ನಿಲಯಗಳಿವೆ. ಇವುಗಳಲ್ಲಿ ನೂರಾರು ಸಮಸ್ಯೆಗಳ ಮಧ್ಯೆ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಂತಾಗಿದೆ. ಸರಿಯಾಗಿ ಊಟದ ವ್ಯವಸ್ಥೆ ಇಲ್ಲ. ಮೂಲ ಸೌಕರ್ಯಗಳ ಕೊರತೆ ಇದೆ. ಶೌಚಾಲಯ, ಸ್ನಾನದ ಕೋಣೆ, ಕುಡಿಯುವ ನೀರು, ಸಾಬೂನು, ಪೇಸ್ಟ್‌ ಮತ್ತು ವಸತಿ ನಿಲಯಗಳಲ್ಲಿ ಸ್ವಚ್ಛತೆ ಸೇರಿ ಹಲವು ಸಮಸ್ಯೆಗಳು ತಾಂಡವವಾಡುತ್ತಿವೆ. ವಸತಿ ನಿಲಯಗಳಿಗೆ ವಾರ್ಡನ್‌ಗಳು ಬರುವುದೇ ಇಲ್ಲ, ಇಂತಹ ಸಮಸ್ಯೆಗಳಿಂದಾಗಿ ವಿದ್ಯಾರ್ಥಿಗಳು ನಿತ್ಯ ಪರದಾಡುವಂತಾಗಿದೆ. ಇಲ್ಲಿನ ಸಮಸ್ಯೆ ಹೇಳಿಕೊಳ್ಳಲು ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ತೆರಳಿದರೆ ಒಬ್ಬ ಅಧಿಕಾರಿಯೂ ಸಿಗುವುದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಗೋಳು ಕೇಳ್ಳೋರೆ ಇಲ್ಲದಂತಾಗಿದೆ.

ವಾರ್ಡನ್‌ಗಳು ನಾಪತ್ತೆ: ಕೆಲ ವಸತಿ ನಿಲಯಗಳಲ್ಲಿ ಇರುವ ಕೆಲ ವಾರ್ಡನ್‌ಗಳು ವಿದ್ಯಾರ್ಥಿಗಳಿಗೆ ಸಿಗುವುದೇ ಇಲ್ಲ. ಊಟದ ಸಮಯಕ್ಕೆ ವಾರ್ಡನ್‌ಗಳು ಹಾಜರಿರುವುದಿಲ್ಲ. ಫೋನ್‌ಗಳು ಸ್ವೀಚ್ ಆಫ್‌ ಆಗಿರುತ್ತವೆ. ದೂರವಾಣಿ ಕರೆಗಳನ್ನು ಸ್ವೀಕರಿಸುವುದಿಲ್ಲ. ಹಾಸ್ಟೇಲ್‌ಗ‌ಳಲ್ಲಿ ಸರ್ಕಾರ ನಿಗಪಡಿಸಿದ ಆಹಾರದ‌ ಪಟ್ಟಿಯಂತೆ ಊಟ ತಯಾರಿಸುವುದಿಲ್ಲ. ಇದನ್ನು ಪ್ರಶ್ನಿಸಬೇಕೆಂದರೆ ವಾರ್ಡನ್‌ಗಳು ನಾಪತ್ತೆ ಆಗಿರುತ್ತಾರೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅಡುಗೆ ಸಿಬ್ಬಂದಿಯೇ ವಾರ್ಡನ್‌ಗಳೆಂಬಂತೆ ಅಧಿಕಾರ ಚಲಾಯಿಸುತ್ತಾರೆ.

ಅನುದಾನ ದುರ್ಬಳಕೆ: ವಸತಿ ನಿಲಯಗಳ ನಿರ್ವಹಣೆ, ಕಿರಾಣಿ, ತರಕಾರಿ, ಕುಡಿಯುವ ನೀರು ಸರಬರಾಜು, ಅಡುಗೆದಾರರಿಗೆ ಸಂಬಳ ಹಾಗೂ ಗ್ಯಾಸ್‌ ಮತ್ತು ಕಟ್ಟಿಗೆಗೆ ಎಂದು ತಾಲೂಕ ಪಂಚಾಯತಿಯಿಂದ ಅನುದಾನ ನೀಡಲಾಗುತ್ತದೆ. ವಾರ್ಡನ್‌ಗಳು ಬೋಗಸ್‌ ದಾಖಲೆಗಳನ್ನು ಸೃಷ್ಠಿಸಿ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.

ತನಿಖೆಗೆ ಹಿಂದೇಟು: ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅವ್ಯವಸ್ಥೆಗೆ ಮೇಲಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಇಲಾಖೆ ಬಗ್ಗೆ ಅನೇಕರು ಮೌಖೀಕವಾಗಿ ಮತ್ತು ದಾಖಲೆಗಳ ಮೂಲಕ ದೂರು ನೀಡಿದ್ದರೂ ಕ್ರಮ ಜರುಗಿಸಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಅನುದಾನ ಬಳಕೆ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಕಚೇರಿಯಲ್ಲಿ ದಾಖಲೆಗಳೆ ಇಲ್ಲ. ನಾಲ್ಕು ಹಾಸ್ಟೇಲ್‌ಗ‌ಳಿಗೆ ಪ್ರಭಾರಿ ವಾರ್ಡನ್‌ ಆಗಿರುವ ಶರಣಬಸವ ವಿರುದ್ಧ ಇಲಾಖೆ ಜಿಲ್ಲಾಧಿಕಾರಿ ಪ್ರಶಾಂತ ಅವರಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತಾಲೂಕಿನ ದಲಿತ ಹೋರಾಟಗಾರ ಬಸವರಾಜ ನಕ್ಕುಂದಿ ಆರೋಪಿಸಿದ್ದಾರೆ.

ಒಟ್ಟಾರೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಮಸ್ಯೆಗಳ ತಾಣವಾಗಿದೆ. ಸರ್ಕಾರ ಶೈಕ್ಷಣಿಕ ಅಭಿವೃದ್ಧಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದ್ದರೂ ಅಧಿಕಾರಿಗಳ ಭ್ರಷ್ಟಾಚಾರ, ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಗಳಿಗೆ ಸೌಲಭ್ಯ ದಕ್ಕುತ್ತಿಲ್ಲ. ಇನ್ನಾದರೂ ಮೇಲಾಧಿಕಾರಿಗಳು ವಸತಿ ನಿಲಯಗಳ ಕಡೆ ಗಮನ ಹರಿಸಬೇಕು. ಅನುದಾನ ದುರ್ಬಳಕೆ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.