2.9 ಕೋಟಿ ಮೌಲ್ಯದ ವಿದೇಶಿ ನೋಟು ಪತ್ತೆ
Team Udayavani, Jan 14, 2019, 6:14 AM IST
ಬೆಂಗಳೂರು: ಅಕ್ರಮವಾಗಿ 2.9 ಕೋಟಿ ರೂ. ಮೌಲ್ಯದ ವಿದೇಶಿ ನೋಟುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸೀಮಾ ಸುಂಕ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.
ಇಂಡೋನೇಷ್ಯಾ ಪಾಸ್ಪೋರ್ಟ್ ಹೊಂದಿರುವ 56 ವರ್ಷದ ವ್ಯಕ್ತಿ, ಬ್ಯಾಂಕಾಕ್ಗೆ ತೆರಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದ. ಆತನ ವರ್ತನೆಯಿಂದ ಅನುಮಾನಗೊಂಡ ಸೀಮಾ ಸುಂಕ ಅಧಿಕಾರಿಗಳು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ.
ಈ ವೇಳೆ ಈತನ ಬ್ಯಾಗ್ನಲ್ಲಿದ್ದ ಕಪ್ಪು ಬಣ್ಣದ ಕವರ್ನಲ್ಲಿ ಸುತ್ತಿಟ್ಟಿದ್ದ ಬಟ್ಟೆ ಬಿಚ್ಚಿ ನೋಡಿದಾಗ ಡಾಲರ್, ಪೌಂಡ್ ಸೇರಿ 14 ದೇಶದ 2.9 ಕೋಟಿ ರೂ. ಮೌಲ್ಯದ ವಿದೇಶಿ ನೋಟುಗಳು ಪತ್ತೆಯಾಗಿವೆ. ಆದರೆ, ಆರೋಪಿ ಯಾರಿಗೆ ಕೊಂಡೊಯ್ಯಲು ತಂದಿದ್ದ ಎಂಬುದು ಈವರೆಗೂ ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಆರೋಪಿ ಬೆಂಗಳೂರಿಗೆ ಬಂದಿದ್ದು, ಸ್ಥಳೀಯ ವ್ಯಕ್ತಿಗಳಿಂದ ನೋಟುಗಳನ್ನು ಪಡೆದುಕೊಂಡಿರಬಹುದು. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ