ಕುಡಿವ ನೀರಿಗಾಗಿ ಪರದಾಟ

Team Udayavani, Jan 15, 2019, 11:13 AM IST

vij.jpg

ಕಕ್ಕೇರಾ: ಬೇಸಿಗೆ ಇನ್ನೂ ಬಂದಿಲ್ಲ. ಆಗಲೇ ನೀರಿನ ಸಮಸ್ಯೆ ಎದುರಿಸಬೇಕಾಗಿದೆ. ಪ್ರತಿ ನಿತ್ಯ ಹನಿ ನೀರಿಗಾಗಿ ತಾಸುಗಟ್ಟಲೇ ಕಾಯ್ದು ಕುಳಿತರೂ ಒಂದು ಬಿಂದಿಗೆ ನೀರು ಮಾತ್ರ ಸಿಗುವುದು ಕಷ್ಟ.

ಇದು ತಿಂಥಣಿ ಗ್ರಾಪಂ ವ್ಯಾಪ್ತಿಗೆ ಸೇರಿದ ಹುಣಸಿಹೊಳೆ ಗ್ರಾಮದ ದಲಿತಕೇರಿ ನಿವಾಸಿಗಳು ತಮಗಾದ ನೀರಿನ ಸಮಸ್ಯೆ ತೋಡಿಕೊಂಡ ಪರಿ.

ಗ್ರಾಮದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ನಲ್ಲಿಗಳು ಅಳವಡಿಸಿದ್ದು, ಕೆಲವೊಂದು ಕಡೆ ನೀರು ಪೂರೈಕೆ ಆಗುತ್ತಿದೆ. ಆದರೆ 70ಕ್ಕೂ ಹೆಚ್ಚು ಕುಟುಂಬ ಇರುವ ದಲಿತಕೇರಿಗೆ ಅಳವಡಿಸಿದ ನಲ್ಲಿಗೆ ಮಾತ್ರ ನೀರೆ ಬರುತ್ತಿಲ್ಲ. ಹೀಗಾಗಿ ಇಲ್ಲಿನ ನಿವಾಸಿಗರು ನಿತ್ಯ ನೀರಿಗಾಗಿ ಬಿಂದಿಗೆ ಹಿಡಿದುಕೊಂಡು ಪರದಾಡಬೇಕಾಗಿದೆ.

ಟ್ಯಾಂಕ್‌ ಮೂಲಕ ನಲ್ಲಿಗಳಿಗೆ ನೀರು ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಮರ್ಪಕ ನೀರು ಸಿಗುತ್ತಿಲ್ಲ. ಈಗಾಗಲೇ ಬರಗಾಲ ಬೇರೆ. ಹಳ್ಳಗಳು ಬತ್ತಿವೆ. ಎಲ್ಲಿಯೂ ನೀರಿಲ್ಲ. ನಲ್ಲಿ ನೀರು ಬಿಟ್ಟರೆ ಬೇರೆ ನಮಗೆ ಗತಿ ಇಲ್ಲ ಎನ್ನುತ್ತಾರೆ ಜನರು.

ಈ ಸಮಸ್ಯೆಗೆ ಸಂಬಂಧಿಸಿದಂತೆ ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುವುದು ಜನರ ಆರೋಪವಾಗಿದೆ. ದಲಿತ ಕೇರೆ ಬಿಟ್ಟು ಇನ್ನೂ ಬೇರೆ ವಾರ್ಡ್‌, ಓಣಿಗಳಲ್ಲಿ ಕೆಲವೊಂದು ಮನೆಗಳಿಗೆ ವೈಯಕ್ತಿಕ ನಲ್ಲಿ ವ್ಯವಸ್ಥೆ ಕಲ್ಪಿಸಿ ನೀರಿನ ಕರ ಗ್ರಾಪಂವತಿಯಿಂದ ವಸೂಲಿ ಮಾಡಲಾಗುತ್ತಿದೆ. ಕೆಲವು ಅನಧಿಕೃತವಾಗಿ ಮನೆಗಳಿಗೆ ನಲ್ಲಿ ಅಳವಡಿಸಿಕೊಂಡಿದ್ದರಿಂದ ದಲಿತ ಕೇರಿಗೆ ನೀರಿನ ಸಮಸ್ಯೆಗೆ ಕಾರಣ ಎನ್ನಲಾಗುತ್ತಿದೆ.

ನೀರಿನ ಸಮಸ್ಯೆ ನಿವಾರಣೆಗೆ ಸರಕಾರದಿಂದ ಸಾಕಷ್ಟು ಅನುದಾನ ಇದ್ದರೂ ನೀರಿನ ಸಮಸ್ಯೆ ಹೋಗಲಾಡಿಸಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನವಾಗಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ದಲಿತರ ಒತ್ತಾಯವಾಗಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.