ಶಾಸಕರ ರೆಸಾರ್ಟ್‌ ಯಾತ್ರೆಗೆ ತೀವ್ರ ಆಕ್ರೋಶ


Team Udayavani, Jan 16, 2019, 10:34 AM IST

vij-5.jpg

ಆಲಮಟ್ಟಿ: ರಾಜ್ಯದ ಜನರು ಶಾಸಕರುಗಳನ್ನು ತಮ್ಮ ಸೇವೆ ಮಾಡಲು ಆಯ್ಕೆ ಮಾಡಿದ್ದಾರೆ. ಅದನ್ನರಿತು ಜನ ಪ್ರತಿನಿಧಿಗಳು ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಬಗೆಹರಿಸದೇ ರೆಸಾರ್ಟ್‌ ಯಾತ್ರೆ ಮಾಡುವುದು ತರವಲ್ಲ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದ್ದಾರೆ.

ರಾಜ್ಯದಲ್ಲಿರುವ ಆಡಳಿತ ಪಕ್ಷಗಳು ಹಾಗೂ ವಿರೋಧ ಪಕ್ಷಗಳು ಚುನಾವಣೆಗಳಲ್ಲಿ ನಾಡಿನ ಜನತೆಗೆ ನೀಡಿರುವ ಭರವಸೆಗಳನ್ನು ಮರೆತು ಕೇವಲ ಅಧಿಕಾರಕ್ಕಾಗಿ ರೆಸಾರ್ಟ್‌ ಯಾತ್ರೆ ಮಾಡುತ್ತಿರುವ ಪರಿಣಾಮ ರಾಜ್ಯದ ಹಲವಾರು ಜ್ವಲಂತ ಸಮಸ್ಯೆಗಳು ಇನ್ನಷ್ಟು ಬಿಗಡಾಯಿಸುತ್ತವೆ. ಅದನ್ನರಿತು ಜನ ಪ್ರತಿನಿಧಿಗಳಾದವರು ಸೇವೆ ಮಾಡಬೇಕು.

ರಾಜ್ಯದಲ್ಲಿ ಕಳೆದ 4-5 ವರ್ಷಗಳಿಂದ ಭೀಕರ ಬರಗಾಲ ಆವರಿಸಿದ ಪರಿಣಾಮ ಜನ-ಜಾನುವಾರುಗಳು, ವನ್ಯಜೀವಿಗಳು, ಜಲಚರಗಳು ನೀರಿಲ್ಲದೇ ಪರದಾಡುವಂತಾಗಿದೆ. ಇನ್ನು ಕೆಲವು ಗ್ರಾಮೀಣ ಪ್ರದೇಶದಲ್ಲಿ ಸಕಾಲಕ್ಕೆ ಮಳೆ ಆಗದೆ ಬಿತ್ತಿದ ಬೆಳೆ ಕೈ ಸೇರದೆ ಮತ್ತಷ್ಟು ಸಾಲಗಾರರಾಗಿ ಕೆಲವು ರೈತರು ಆತ್ಮ ಹತ್ಯೆಯಂತಹ ಮಾರ್ಗ ಹಿಡಿಯುವಂತಾಗಿದೆ. ಕೆಲವರು ಹತ್ತಾರು ಎಕರೆ ಜಮೀನಿದ್ದರೂ ಕುಡಿಯಲು ನೀರಿಲ್ಲದೇ ಕೈಗೆ ಕೆಲಸವಿಲ್ಲದೇ ಬೇರೆ ರಾಜ್ಯಗಳಿಗೆ ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಇಂತಹ ಗಂಭೀರ ಪರಿಸ್ಥಿತಿಯಲ್ಲಿ ರೈತರ ಹಾಗೂ ಜನ ಸಾಮಾನ್ಯರ ಹಿತ ಕಾಪಾಡುವ ಸಲುವಾಗಿ ಮತ ಹಾಕಿ ಆಯ್ಕೆ ಮಾಡಿ ಕಳಿಸಿದರೆ ಇವರು ಕೇವಲ ತಮ್ಮ ಸ್ವಾರ್ಥಕ್ಕೊಸ್ಕರ ರೆಸಾರ್ಟ್‌ ರಾಜಕಾರಣ ಮಾಡುತ್ತ ಒಬ್ಬರನ್ನೊಬ್ಬರು ಕೊಂಡು ಕೊಳ್ಳುತ್ತ್ತ ಒಂದು ತಂಡ ದೆಹಲಿ ರೆಸಾರ್ಟ್‌ಗೆ ತೆರಳುವುದು, ಇನ್ನೊಂದು ತಂಡ ಮುಂಬೈ ರೆಸಾರ್ಟ್‌ಗೆ ತೆರಳುವುದು. ಈ ರೀತಿ ಮಾಡುವಂತ ನಮ್ಮ ರಾಜ್ಯದ ಚುನಾಯಿತ ಪ್ರತಿನಿಧಿಗಳು ರೈತರು ಹಾಗೂ ಜನಸಾಮಾನ್ಯರನ್ನು ಹುಚ್ಚರು ಎಂದು ಭಾವಿಸಿದ್ದಾರೆಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇವರಿಗೆ ಕೇವಲ ಅಧಿಕಾರ, ಕುರ್ಚಿ, ಹಣದ ವ್ಯಾಮೋಹ ಹೆಚ್ಚಾಗಿದೆ ಹೊರತು ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ರೈತರ ಹಾಗೂ ಜನಸಾಮ್ಯಾರ ಪರಿಸ್ಥಿತಿ ಎಲ್ಲಿಗೆ ಬಂದು ತಲುಪಿದೆ ಎಂಬುದು ಅರ್ಥ ಮಾಡಿಕೊಳ್ಳುತ್ತಿಲ್ಲ. ಇಂತಹ ರಾಕ್ಷಸ ಪ್ರವೃತ್ತಿಯುಳ್ಳ ನಾಚಿಕೆ ಮಾನ ಮರ್ಯಾದೆ ಬಿಟ್ಟ ರಾಜಕಾರಣಿಗಳಿಗೆ ರಾಜ್ಯದ ಜನರು ಪ್ರಶ್ನಿಸುವಂತಾಗಬೇಕು. ಇಲ್ಲದಿದ್ದರೆ ಚುನಾವಣೆಗಳಲ್ಲಿ ಹೇಳುವುದು ಒಂದು ಆಯ್ಕೆಯಾದ ನಂತರ ಮಾಡುವುದು ಇನ್ನೊಂದು. ಹೀಗಾದರೆ ರಾಜ್ಯದ ಸ್ಥಿತಿ ಏನಾಗುತ್ತದೆ ಎನ್ನುವುದನ್ನು ಪ್ರಜ್ಞಾವಂತರು ಆಲೋಚಿಸಬೇಕಾಗಿದೆ.

ಇಂಥವರಿಗೆ ಸಂಬಂಧಿಸಿದ ಕ್ಷೇತ್ರಗಳ ಮತದಾರರು ತಮ್ಮ ಕ್ಷೇತ್ರಗಳ ಶಾಸಕರನ್ನು ಪ್ರಶ್ನಿಸುವಂತಾಗಬೇಕು. ಇದೇನು ರಾಜ ಪ್ರಭುತ್ವವಲ್ಲ. ಇದು ಪ್ರಜಾಪ್ರಭುತ್ವ. ಜನರಿಂದ ಆಯ್ಕೆಗೊಂಡಿರುವ ನಾಯಕರು ನಾಡಿನ ಜನತೆಯ ಸೇವಕರೆನ್ನುವುದನ್ನು ಅರ್ಥ ಮಾಡಿಕೊಳ್ಳುವ ಕಾಲ ಬಂದಾಗಿದೆ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

1-wqeqweqw

Yellow alert; ಬೆಂಗಳೂರು ನಗರ ಸೇರಿ ಸುತ್ತಮುತ್ತ ಆಲಿಕಲ್ಲು ಸಹಿತ ಮಳೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.