ಜಂತುಹುಳು ನಿವಾರಣೆಗೆ ಮಾತ್ರೆ: ಜಿಲ್ಲಾಧಿಕಾರಿ
Team Udayavani, Jan 18, 2019, 12:30 AM IST
ಉಡುಪಿ: ಜಿಲ್ಲೆಯಲ್ಲಿ ಫೆ. 8ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಆಚರಿಸಲಾಗುತ್ತಿದ್ದು, 1ರಿಂದ 19 ವರ್ಷದೊಳಗಿನ ಒಟ್ಟು 3,08,070 ಮಂದಿಗೆ ಜಂತುಹುಳು ನಿವಾರಣೆಯ ಆಲೆºಂಡಝೊàಲ್ ಮಾತ್ರೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳು ಪೌಷ್ಟಿಕಾಂಶದಿಂದ ಕೂಡಿದ ಆಹಾರವನ್ನು ಸೇವಿಸಿದರೂ ಜಂತುಹುಳುಗಳ ಬಾಧೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗುತ್ತದೆ. ಇದು ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿನ 1ರಿಂದ 19 ವರ್ಷದೊಳಗಿನ ಎಲ್ಲರಿಗೂ ಜಂತುಹುಳು ನಾಶಪಡಿಸುವ ಆಲೆºಂಡಝೊàಲ್ ಮಾತ್ರೆಗಳನ್ನು ವಿತರಿಸಲಾಗುವುದು. 1-2 ವರ್ಷದೊಳಗಿನ ಮಕ್ಕಳಿಗೆ ಅರ್ಧ, 2-19 ವರ್ಷದೊಳಗಿನವರಿಗೆ ಒಂದು ಮಾತ್ರೆ ವಿತರಿಸಲಾಗುವುದು ಎಂದು ಡಿಸಿ ತಿಳಿಸಿದರು.
ಜಿಲ್ಲೆಯ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳಿಗೆ, ಐಟಿಐ, ಕೇಂದ್ರೀಯ ವಿದ್ಯಾಲಯ, ನವೋದಯ ಶಾಲೆಯ ವಿದ್ಯಾರ್ಥಿಗಳಿಗೆ, ಪಿಯು ವಿದ್ಯಾರ್ಥಿಗಳಿಗೆ, ಅಂಗನವಾಡಿ ಮಕ್ಕಳಿಗೆ ಮಾತ್ರೆ ವಿತರಿಸುವಂತೆ ಹಾಗೂ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು ಜಂತುಹುಳು ಮಾತ್ರೆಯಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವಂತೆ ರೋಟರಿ ಮತ್ತು ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.
ಡಿಎಚ್ಒ ಡಾ| ರೋಹಿಣಿ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಸತೀಶ್ಚಂದ್ರ, ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…