ಮದ್ಯ ನಿಷೇಧಕ್ಕೆ ಒತ್ತಾಯಿಸಿ ಪಾದಯಾತ್ರೆ;ಮಠಾಧೀಶರು,ಮಹಿಳೆಯರು ಭಾಗಿ

Team Udayavani, Jan 20, 2019, 1:30 AM IST

96.jpg

ಚಿತ್ರದುರ್ಗ: ರಾಜ್ಯದಲ್ಲಿ ಮದ್ಯನಿಷೇಧ ಜಾರಿಗೆ ಒತ್ತಾಯಿಸಿ ಹಮ್ಮಿಕೊಂಡ ಬೆಂಗಳೂರು ಚಲೋ ಪಾದಯಾತ್ರೆಗೆ ಶನಿವಾರ ಚಿತ್ರದುರ್ಗದಲ್ಲಿ ಚಾಲನೆ ನೀಡಲಾಯಿತು.

19 ರಿಂದ 30 ರವರೆಗೆ ಪಾದಯಾತ್ರೆ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಯ ಸುಮಾರು 3 ಸಾವಿರ ಮಹಿಳೆಯರು ಪಾಲ್ಗೊಂಡಿದ್ದಾರೆ. ಚಿತ್ರದುರ್ಗದ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಮದ್ಯ ನಿಷೇಧ ಆಂದೋಲನದ ವತಿಯಿಂದ ಬೃಹತ್‌ ಸಮಾವೇಶ ನಡೆಯಿತು. ಸಮಾವೇಶಕ್ಕೆ ನಾಡಿನ ವಿವಿಧ ಮಠಾಧೀಶರು ಚಾಲನೆ ನೀಡಿದರು. ಸಮಾವೇಶದ ನಂತರ ಮಧ್ಯಾಹ್ನ 2 ಗಂಟೆಗೆ ಪಾದಯಾತ್ರೆ ಆರಂಭಗೊಂಡಿತು. ಪಾದಯಾತ್ರೆ 30ರಂದು ಬೆಂಗಳೂರುತಲುಪಲಿದೆ. 

ಸರಕಾರ ಮದ್ಯ ನಿಷೇಧಿಸಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರ ಮದ್ಯ ನಿಷೇಧಿಸಬೇಕು. 2.20 ಲಕ್ಷ ಕೋಟಿ ರೂ.ಗಳ ಬಜೆಟ್‌ ನಲ್ಲಿ ಶೇ.8ರಂತೆ 18 ಸಾವಿರ ಕೋಟಿ ರೂ.ಗಳು ಮಾತ್ರ ಮದ್ಯ ಮಾರಾಟದಿಂದ ಸರ್ಕಾರಕ್ಕೆ ಆದಾಯ ಬರುತ್ತಿದೆ. ಮದ್ಯ ಮಾರಾಟದಿಂದ ಬರುವ ಆದಾಯಕ್ಕಿಂತ ಜನರ ಔಷಧೋಪಚಾರಗಳಿಗೆ ಸರ್ಕಾರ ಮಾಡುವ ಖರ್ಚು ಹೆಚ್ಚಾಗಿದೆ. ಸರ್ಕಾರದ ಎಲ್ಲ ಅಗ್ಗದ ಯೋಜನೆಗಳನ್ನು ಹಿಂದಕ್ಕೆ ಪಡೆದು ಮದ್ಯಪಾನ ನಿಷೇಧಿಸಲಿ ಎಂದು ಸ್ವಾಮೀಜಿಗಳು ಒತ್ತಾಯಿಸಿದರು.

ಸತತ 12 ದಿನಗಳ ಕಾಲ ಸಾವಿರಾರು ಮಹಿಳೆಯರು ಮದ್ಯಪಾನ ನಿಷೇಧ ಮಾಡುವಂತೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತಾರೆಂದರೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಎಲ್ಲ ಮಠ ಮಾನ್ಯಗಳು ಮದ್ಯ ನಿಷೇಧಕ್ಕೆ ಬೆಂಬಲವಾಗಿ ನಿಲ್ಲಲಿವೆ. ಮೂರು ವರ್ಷಗಳಿಂದ ಮದ್ಯ ನಿಷೇಧಿಸುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದರೂ ಏನೂ ಪ್ರಯೋಜನವಾಗಿಲ್ಲ. ಪಾದಯಾತ್ರೆ ಬೆಂಗಳೂರಿಗೆ ಬರುವ ತನಕ ಕಾಯುವುದು ಬೇಡ ಎನ್ನುವ ಸಲಹೆ, ಸೂಚನೆಗಳನ್ನು ಸ್ವಾಮೀಜಿಗಳು ಸರ್ಕಾರಕ್ಕೆ ನೀಡಿದರು.

ಡಾ ಶಿವಮೂರ್ತಿ ಮುರುಘಾ ಶರಣರು, ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ತೋಟಂದಾರ್ಯ ಮಠದ ನಿಜಗುಣಾನಂದ ಸ್ವಾಮೀಜಿ, ಶಿವಾಲಿಂಗಾನಂದ ಸ್ವಾಮೀಜಿ, ಮುಸ್ಲಿ ಧರ್ಮಗುರು ಖಾಜಿ ಸೈಯ್ಯದ್‌ ಶಂಶುದ್ದೀನ್‌ ಹುಸೇನಿ, ಕ್ರೈಸ್ತ ಧರ್ಮ ಗುರು ಫಾದರ್‌ ಎಂ.ಎಸ್‌. ರಾಜು, ಮದ್ಯ ನಿಷೇಧ ಆಂದೋಲನ ಕರ್ನಾಟಕ ರಾಜ್ಯ ಸಮಿತಿ ಸದಸ್ಯೆ ಸ್ವರ್ಣ ಭಟ್‌ ಇತರರು ಪಾಲ್ಗೊಂಡಿದ್ದರು.

ನಿಷೇಧಿಸಿದರೆ ಸಿದ್ಧಗಂಗಾ ಶ್ರೀಗಳಿಗೆ ರಾಷ್ಟ್ರಪ್ರಶಸ್ತಿ ನೀಡಿದಂತೆ
ರಾಜ್ಯ ಸರ್ಕಾರ ಮದ್ಯ ನಿಷೇಧಿಸಿದರೆ ಸಿದ್ಧಗಂಗಾ ಶ್ರೀಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಿದಂತೆ ಎಂದು ಸಾಣೇಹಳ್ಳಿ ತರಳಬಾಳು ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದಟಛಿಗಂಗಾ ಶ್ರೀಗಳು ಬೇಗ ಗುಣಮುಖರಾಗಬೇಕಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಈ ನಾಡಿಗೆ ಅವರ ಸೇವೆ, ಮಾರ್ಗದರ್ಶನ ಅಗತ್ಯವಿದೆ ಎಂದರು. ಪ್ರಶಸ್ತಿಗಾಗಿ ಸಿದಟಛಿಗಂಗಾ ಸ್ವಾಮೀಜಿ ಎಂದೂ ಆಸೆ ಪಟ್ಟವರಲ್ಲ. ಅವರು ಕಣ್ಣುಮುಚ್ಚುವ ಮುನ್ನ ಮದ್ಯ ನಿಷೇಧ ಮಾಡಲಿ. ಮದ್ಯಪಾನ ನಿಷೇಧಿಸಿದರೆ ಸಿದ್ಧಗಂಗಾ ಶ್ರೀಗಳು ಸಂತೃಪ್ತರಾಗುತ್ತಾರೆ ಎಂದು ಹೇಳಿದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.