200 ಕೆಂದ್ರಗಳಲ್ಲಿ ನೇಷನ್ ವಿತ್ ನಮೋ ಅಭಿಯಾನ
Team Udayavani, Jan 20, 2019, 6:36 AM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಬಿಜೆಪಿ ಯುವ ಮೋರ್ಚಾ ಘಟಕ, ದೇಶದೆಲ್ಲೆಡೆ ನೇಷನ್ ವಿತ್ ನಮೋ ಅಭಿಯಾನ ಹಮ್ಮಿಕೊಂಡಿದೆ. ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ಪೂನಂ ಮಹಾಜನ್ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಯುವಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಇರುವ ಅಭಿಮಾನವನ್ನು ಮತಗಳನ್ನಾಗಿ ಪರಿವರ್ತಿಸುವುದು ಮತ್ತು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶಾದ್ಯಂತ ಲಕ್ಷಾಂತರ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಅಭಿಯಾನ ಇದಾಗಿದೆ.
50 ಲಕ್ಷ ಯುವಕರನ್ನು ಜೋಡಿಸುವ ಗುರಿಯನ್ನು ಈ ಅಭಿಯಾನ ಹೊಂದಿದ್ದು, ಕರ್ನಾಟಕದಲ್ಲಿ 10 ಲಕ್ಷ ಯುವಕರು ಈ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ. ಚುನಾವಣೆ ತಯಾರಿಗೆ ಬಿಜೆಪಿ ರಾಷ್ಟ್ರೀಯ ಘಟಕದಿಂದ ನೀಡಿರುವ ಕಾರ್ಯ ಯೋಜನೆ ಭಾಗವಾಗಿ ಈ ಅಭಿಯಾನ ನಡೆಯುತ್ತಿದೆ.
ದೇಶದ 200 ಕೇಂದ್ರಗಳಲ್ಲಿ ನೇಷನ್ ವಿತ್ ನಮೋ ಅಭಿಯಾನ ಆರಂಭವಾಗಿದೆ ಎಂದು ಬಿಜೆಪಿ ತಿಳಿಸಿದೆ. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ತಮ್ಮೇಶ್ಗೌಡ, ಉಪಾಧ್ಯಕ್ಷೆ ನಿಶ್ಚಿತಾ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಕರುಣಾಕರ್ ಅವರು ಭಾಗಿಯಾಗಿ ನೇಷನ್ ವಿತ್ ನಮೋ ಅಭಿಯಾನದ ವಿವರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ